19 C
Karnataka
Monday, November 18, 2024

ಮಲೇರಿಯಾ ನಿಯಂತ್ರಣ : ಪಾಲಿಕೆಯಿಂದ ಮುಂಜಾಗ್ರತಾ ಕ್ರಮ

ಮಂಗಳೂರು: ಮಳೆಗಾಲ ಪ್ರಾರಂಭವಾಗುತ್ತಿದ್ದು, ಮಲೇರಿಯಾ, ಡೆಂಗ್ಯೂ ಇನ್ನಿತರ ರೋಗಗಳು ಹರಡುವ ಸಾಧ್ಯತೆಗಳಿದ್ದು, ಸಾರ್ವಜನಿಕರು ಮಲೇರಿಯಾ ನಿಯಂತ್ರಣಕ್ಕಾಗಿ ಪಾಲಿಕೆ ಮತ್ತು ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
.ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಜೆಪ್ಪು, ಬಂದರ್, ಬಿಜೈ, ಎಕ್ಕೂರು, ಪಡೀಲ್, ಕೂಳೂರು, ಶಕ್ತಿನಗರ, ಬೆಂಗ್ರೆ, ಸುರತ್ಕಲ್. ಕುಳಾಯಿ ಪ್ರದೇಶಗಳಲ್ಲಿ ಒಟ್ಟು 10 ಸಂಖ್ಯೆಯ ನಗರ ಆರೋಗ್ಯ ಕೇಂದ್ರಗಳಿದ್ದು ಮಲೇರಿಯಾ ಹಾಗೂ ಡೆಂಗ್ಯು ವಿವಿಧೋದ್ದೇಶ ಕಾರ್ಯಕರ್ತ ರಿಂದ (ಎಂ.ಪಿ.ಡಬ್ಲ್ಯು) ಮನೆ-ಮನೆಗೆ. ಶಾಲಾ ಕಾಲೇಜು, ಹೋಟೆಲು, ಆಶ್ರಮ ಹಾಗೂ ಇನ್ನಿತರ ಕಟ್ಟಡಗಳಿಗೆ ದಿನನಿತ್ಯ ಭೇಟಿ ನೀಡಿ. ಸೊಳ್ಳೆ ಉತ್ಪತ್ತಿ ತಾಣಗಳನ್ನು (ಉದಾ: ಸೀಯಾಳ ಚಿಪ್ಪು, ಹಳೆಯ ಟಯರು, ಕಪ್, ಬಾಟಲಿ, ಇತರೆ ಅನಗತ್ಯ ವಸ್ತುಗಳಲ್ಲಿ ನೀರು ನಿಂತಿರುವುದು) ನಾಶಪಡಿಸಿ, ಸಂಬಂಧಪಟ್ಟವರಿಗೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಮನವರಿಕೆ ಮಾಡಲಾಗುತ್ತಿದೆ.ಕ್ರಿಮಿನಾಶಕ ಸಿಂಪಡಣಾ ಕಾರ್ಯಕರ್ತರಿಂದ ಮದ್ದು ಸಿಂಪಡಣೆ ಹಾಗೂ ಧೂಮೀಕರಣವನ್ನು ಮಾಡಲಾಗುತ್ತಿದೆ. ಸೊಳ್ಳೆ- ಪರದೆಗಳನ್ನು ಉಪಯೋಗಿಸುವಂತೆ ಹಾಗೂ ಸೊಳ್ಳೆಗಳಿಂದ ಸ್ವಯಂ ರಕ್ಷಣೆ ಪಡೆದು ಕೊಳ್ಳುವ ಬಗ್ಗೆ ಮಾಹಿತಿ ನೀಡಲಾಗುತ್ತಿದೆ.

ನಿರ್ಮಾಣ ಹಂತದ ಕಟ್ಟಡಗಳ ಮಾಲೀಕರು, ಸಂಬಂಧಪಟ್ಟ ಗುತ್ತಿಗೆದಾರರು ಕಟ್ಟಡಗಳ ಸುತ್ತ ಮುತ್ತಲು ನೀರು ನಿಲ್ಲದ ಹಾಗೆ ಸೂಕ್ತ ಕ್ರಮಕೈಗೊಳ್ಳುವುದು. ನಿರ್ಮಾಣ ಹಂತದ ಕಟ್ಟಡಗಳಿಗೆ ಜಿಲ್ಲಾ ಮಲೇರಿಯಾ ಕಛೇರಿಯಿಂದ ತಂಡಗಳು ಭೇಟಿ ನೀಡುತ್ತಿದ್ದು, ಹೆಚ್ಚಿನ ಸೊಳ್ಳೆ ಉತ್ಪತ್ತಿ ತಾಣಗಳು ಕಂಡು ಬಂದ ವಿವರಗಳನ್ನು ಮಹಾನಗರಪಾಲಿಕೆಗೆ ತಿಳಿಸುತ್ತಿದೆ. ಮಲೇರಿಯಾ ನಿಯಂತ್ರಣ ಘಟಕದ ಮೇಲ್ವಿಚಾರಕರು ನಿರ್ಮಾಣ ಹಂತದ ಕಟ್ಟಡಗಳಿಗೆ ಭೇಟಿ ನೀಡಿ, ಪರಿಶೀಲಿಸಿ ನೋಟೀಸು ನೀಡುತ್ತಿದ್ದಾರೆ. ನಂತರವೂ ಸರಿಪಡಿಸದೇ ಇದ್ದಲ್ಲಿ ದಂಡ ವಿಧಿಸಲು ನಗರಯೋಜನಾ ವಿಭಾಗಕ್ಕೆ ಶಿಫಾರಸು ಮಾಡಲಾಗುತ್ತಿದೆ.

ಡೆಂಗ್ಯು/ಮಲೇರಿಯಾ ಪ್ರಕರಣ ಕಂಡು ಬಂದ ಪ್ರದೇಶಗಳಲ್ಲಿ 24 ಗಂಟೆಗಳೊಳಗೆ ಸುಮಾರು 30 ರಿಂದ 40 ಮನೆಗಳ ಸುತ್ತಮುತ್ತ ಧೂಮೀಕರಣ ಹಾಗೂ ಕ್ರಿಮಿನಾಶಕ ಮದ್ದನ್ನು ಕಡ್ಡಾಯವಾಗಿ ಸಿಂಪಡಿಸಲಾಗುತ್ತಿದೆ ಹಾಗೂ ಜೈವಿಕ ವಿಧಾನವಾಗಿ ಬಾವಿಗಳಿಗೆ ಗಪ್ಪಿ ಮೀನುಗಳನ್ನು ಬಿಡಲಾಗುತ್ತಿದೆ.ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳಾಗಿ ತಮ್ಮ ಪರಿಸರದ ಸುತ್ತ ಮುತ್ತಲು ನೀರು ನಿಲ್ಲದ ಹಾಗೆ ಹಾಗೂ ಶುಚಿತ್ವ ಕಾಪಾಡಲು ಸೂಕ್ತ ಕ್ರಮವಹಿಸಬೇಕು, ಸೊಳ್ಳೆ ಉತ್ಪತ್ತಿ ತಾಣಗಳನ್ನ ನಾಶಪಡಿಸಬೇಕು, ಸೊಳ್ಳೆ ಪರದೆಗಳ ಉಪಯೋಗ ಮಾಡುವುದು ಹಾಗೂ ಮನೆಯ ಕಿಟಕಿ, ಬಾಗಿಲುಗಳಿಗೆ ಮೆಶ್ ಅಳವಡಿಸಬೇಕು ಟಿoಟಿ-ಣoxiಛಿ iಟಿseಛಿಣ ಡಿeಠಿeಟಟಚಿಟಿಣ ಗಳ ಬಳಕೆ ಮಾಡುವುದು ಇತ್ಯಾದಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ಕೋರಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles