24.9 C
Karnataka
Thursday, April 30, 2026

ಮಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿದ ವ್ಯಕ್ತಿಯ ಬ೦ಧನ

ಮ೦ಗಳೂರು: ಮಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿದ ವ್ಯಕ್ತಿಯನ್ನು ಮ೦ಗಳೂರು ಪೊಲೀಸರು ಬ೦ಧಿಸಿದ್ದಾರೆ. ತಮಿಳುನಾಡು ರಾಜ್ಯ ವೆಲ್ಲೂರು ಜಿಲ್ಲೆಯ ನಿವಾಸಿ ಶಶಿ ಕುಮಾರ್‌ (38) ಬ೦ಧಿತ ಆರೋಪಿ.

ದಿನಾಂಕ 29-08-2025 ರಂದು ರಾತ್ರಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾನಕ್ಕೆ ಅನಾಮಿಕ ವ್ಯಕ್ತಿ ಫೋನ್ ಕರೆ ಮಾಡಿ ಟರ್ಮಿನಲ್ ಬಿಲ್ಡಿಂಗ್ ನ್ನು ಖಾಲಿ ಮಾಡಬೇಕು ಇಲ್ಲವಾದರೆ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿರುತ್ತಾನೆ. ಈ ಬಗ್ಗೆ ವಿಮಾನ ನಿಲ್ದಾಣದ ಡ್ಯೂಟಿ ಟರ್ಮಿನಲ್ ಮ್ಯಾನೇಜರ್ ಅವರು ಬಜಪೆ ಪೊಲೀಸ್ ಠಾಣೆಗೆ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು. ಬೆದರಿಕೆ ಕರೆ ಮಾಡಿದ ಆಪಾಧಿತ ತಮಿಳುನಾಡು ರಾಜ್ಯ ವೆಲ್ಲೂರು ಜಿಲ್ಲೆಯ ನಿವಾಸಿ ಶಶಿ ಕುಮಾರ್‌ ಎಂಬಾತನನ್ನು ತಮಿಳುನಾಡು ರಾಜ್ಯ ವೆಲ್ಲೂರ್ ನಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆಪಾಧಿತನು ದೇಶದ ಎಲ್ಲಾ ವಿಮಾನ ನಿಲ್ದಾನಗಳ ಮೊಬೈಲ್ ನಂಬ್ರವನ್ನು ಸಾಮಾಜಿಕ ಜಾಲತನದಲ್ಲಿ ಸರ್ಚ್ ಮಾಡಿ ಕರೆ ಮಾಡಿ ಬೆದರಿಕೆ ಹಾಕಿದ್ದು, ಅದೇ ತರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾನಕ್ಕೂ ಸಹ ಫೋನ್ ಮಾಡಿ ಟರ್ಮಿನಲ್ ಬಿಲ್ಡಿಂಗ್ ನ್ನು ಖಾಲಿ ಮಾಡಲು ತಿಳಿಸಿ ಖಾಲಿ ಮಾಡದೆ ಹೋದರೆ ಟರ್ಮಿನಲ್ ಬಿಲ್ಡಿಂಗ್ ನ್ನು ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿರುವುದಾಗಿ ತಿಳಿಸಿರುತ್ತಾನೆ. ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುತ್ತಾನೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles