24.3 C
Karnataka
Thursday, April 30, 2026

ಕಾರು ಮಾರಾಟದ ಹೆಸರಿನಲ್ಲಿ ಹಣ ಪಡೆದು ವಂಚನೆ ಮಾಡುತ್ತಿದ್ದ ಆರೋಪಿಯ ಬಂಧನ.

ಮ೦ಗಳೂರು: OLX APP ನಲ್ಲಿ ಕಾರು ಮಾರಾಟದ ಹೆಸರಿನಲ್ಲಿ ಹಣ ಪಡೆದು ವಂಚನೆ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ನಗರ ಸೆನ್ ಕ್ರೈಂ ಪೊಲೀಸರು ಬ೦ಧಿಸಿದ್ದಾರೆ. ಉತ್ತರ ಕನ್ನಡ ಬನವಾಸಿ ನಿವಾಸಿ ರವಿಚಂದ್ರ ಮಂಜುನಾಥ ರೇವಣಕರ (29 ) ಬ೦ಧಿತ ಆರೋಪಿ., .
ರವಿಚಂದ್ರ ಮಂಜುನಾಥ ಎಂಬ ವ್ಯಕ್ತಿ OLX APP ನಲ್ಲಿ ಕಾರು ಮಾರಾಟದ ಹೆಸರಿನಲ್ಲಿ ರೂ,2,50,000 ಹಣ ಪಡೆದು ವಂಚನೆ ಮಾಡಿರುವ ಬಗ್ಗೆ ಜೂ.28ರಂದು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದಲ್ಲಿ ತನಿಖೆ ಕೈಗೊಂಡು OLX APP ನಲ್ಲಿ ಕಾರು ಮಾರಾಟದ ಹೆಸರಿನಲ್ಲಿ ಹಣ ಪಡೆದು ವಂಚನೆ ಮಾಡಿದ್ದ ಆರೋಪಿಯ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿ, ಆರೋಪಿತನು ಹೊಸಪೇಟೆಯಲ್ಲಿರುವ ಬಗ್ಗೆ ಮಾಹಿತಿ ತಿಳಿದುಬಂತು. , ಕೂಡಲೇ ಬೇರೆ ಪ್ರಕರಣದಲ್ಲಿ ಹೊಸಪೇಟೆ ಹತ್ತಿರ ಆರೋಪಿ ಪತ್ತೆ ಕರ್ತವ್ಯದ್ದಲ್ಲಿದ್ದ ಸೆನ್ ಪೊಲೀಸ್ ಠಾಣಾ ತನಿಖಾ ತಂಡವನ್ನು ಹೊಸಪೇಟೆಗೆ ಕಳುಹಿಸಿ ಆರೋಪಿತ ರವಿಚಂದ್ರ ಮಂಜುನಾಥ ರೇವಣಕರ ನನ್ನು ವಶಕ್ಕೆ ಪಡೆದು ಸೆನ್ ಪೊಲೀಸ್‍ ಠಾಣೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸಲಾಯಿತು.
ತನಿಖೆಯ ವೇಳೆ ಆರೋಪಿ ವಿವಿಧ ಬ್ಯಾಂಕ್ ಗಳಲ್ಲಿ ಒಟ್ಟು 21 ಬ್ಯಾಂಕ್ ಖಾತೆಗಳನ್ನು ಹೊಂದಿದ್ದು, ಹಾಗೂ 8 ಸಿಮ್ ಕಾರ್ಡ್‍ ಗಳು ಬಳಕೆ ಮಾಡಿದ್ದು, ಕಂಡುಬಂದಿರುತ್ತದೆ. ಸದ್ರಿ 8 ಮೊಬೈಲ್ ನಂಬ್ರ ಗಳ ಮೇಲೆ 80 ಕ್ಕೂ ಹೆಚ್ಚಿನ ಸೈಬರ್ ವಂಚನೆ ದೂರುಗಳು ದಾಖಲಾಗಿರುವುದು ತಿಳಿದುಬಂದಿರುತ್ತದೆ.
ಆರೋಪಿ ಕಳೆದ 3 ವರ್ಷಗಳಿಂದ OLX APP ನಲ್ಲಿ ಕಾರು ಮಾರಾಟದ ಹೆಸರಿನಲ್ಲಿ ಹಣ ಪಡೆದು ವಂಚನೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ತಾನು ಉಪಯೋಗಿಸುತ್ತಿದ್ದ ಮೊಬೈಲ್ ನ್ನು ಕೆಲವು ದಿನಗಳ ಮಟ್ಟಿಗೆ ಇಟ್ಟುಕೊಂಡು ಅದನ್ನು ಮಾರಾಟ ಮಾಡುತ್ತಿದ್ದು ಹೊಸ ಸಿಮ್‍ ಗಳನ್ನು ಉಪಯೋಗಿಸುತ್ತಿರುವುದು ಕಂಡುಬಂದಿರುತ್ತದೆ. ಆರೋಪಿಯನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ.
ಕಾರ್ಯಾಚರಣೆಯನ್ನು ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ನಡೆಸಿರುತ್ತಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles