ಮ೦ಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ 110 ನೆ ಮನ್ ಕೀ ಬಾತ್ ಕಾರ್ಯಕ್ರಮವನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರ ನೇತೃತ್ವದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಜೊತೆಯಲ್ಲಿ ಬಿಜೆಪಿ, ದಕ್ಷಿಣ ಕನ್ನಡ ಜಿಲ್ಲಾ ಕಚೇರಿಯಲ್ಲಿ ವೀಕ್ಷಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿಯ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಂತಹ ಕಾರ್ಮಿಕರನ್ನು ಸನ್ಮಾನಿಲಾಯಿತು. ರಾಜ್ಯ ಕಾರ್ಯದರ್ಶಿ ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಪುತ್ತೂರು , ಜಿಲ್ಲಾ ಉಪಾಧ್ಯಕ್ಷರು ಹಾಗೂ ಮನ್ ಕಿ ಬಾತ್ ಜಿಲ್ಲಾ ಸಂಯೋಜಕಿ ಪೂಜಾ ಪೈ, ಬಿಜೆಪಿ ಪ್ರಮುಖರಾದ ರವಿಶಂಕರ್ ಮಿಜಾರ್, ನಂದನ್ ಮಲ್ಯ, ವಸಂತ್ ಜೆ ಪೂಜಾರಿ ದಕ್ಷಿಣ ಮಂಡಲದ ಅಧ್ಯಕ್ಷ ರಮೇಶ್ ಕಂಡೆಟ್ಟು,ಮಹೇಶ್ ಜೋಗಿ ಬಿಜೆಪಿಯ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.