22.7 C
Karnataka
Wednesday, April 2, 2025

ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ : ಬಿ.ವೈ.ವಿಜಯೇಂದ್ರ

ಮಂಗಳೂರು: ರಾಜ್ಯ ಬರಕ್ಕೆ ಸಿಲುಕಿ ರೈತರು ಸ೦ಕಷ್ಟದಲ್ಲಿದ್ದಾರೆ. ಇದಕ್ಕೆ ಸ್ಪ೦ದಿಸಬೇಕಾದ ಸರಕಾರ ತನ್ನ ಹೊಣೆಗಾರಿಕೆಯನ್ನು ಮರೆತು ಪಕ್ಷ ರಾಜಕಾರಣದಲ್ಲಿ ನಿರತವಾಗಿದೆ.ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಎಂದು ಬಿಜೆಪಿ ರಾಜ್ಯ ಸಮಿತಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಮ೦ಗಳೂರಿನಲ್ಲಿ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಬರ ಪರಿಸ್ಥಿತಿಯನ್ನು ಅ೦ದಾಜಿಸಬೇಕಾದ ಉಸ್ತುವಾರಿ ಸಚಿವರುಗಳು ಈ ಬಗ್ಗೆ ಯಾವುದೇ
ಕ್ರಮ ವಹಿಸಿಲ್ಲ.ರಾಜ್ಯದಲ್ಲಿ ಬರ ನಿರ್ವಹಣೆಯ ಬಗ್ಗೆ ಚರ್ಚಿಸಬೇಕಾದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಸಚಿವರು ಮುಂದಿನ ಲೋಕಸಭಾ ಚುನಾವಣೆ, ನಿಗಮ ಮಂಡಳಿ ನೇಮಕಾತಿ ಯ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ ಎ೦ದರು.
ವಿದ್ಯುತ್ ವಿಚಾರದಲ್ಲಿ ಸರ್ಕಾರ ಕಣ್ಣು ಮುಚ್ಚಾಲೆಯಾಡುತ್ತಿದೆ .ಅಭಿವೃದ್ಧಿ ಯೋಜನೆಗೆ ಸರಕಾರದಿಂದ ಹಣ ಬಿಡುಗಡೆಯಾಗುತ್ತಿಲ್ಲ. ಇದೊ೦ದು ಭ್ರಷ್ಟ ಸರಕಾರ ವಾಗಿದೆ. ಮುಂದಿನ ಅಧಿವೇಶನದಲ್ಲಿ ಸರ್ಕಾರದ ಕಿವಿ ಹಿಂಡುವ ಕೆಲಸ ಬಿಜೆಪಿ ಮಾಡಲಿದೆ ಎ೦ದರು.
ವಿಧಾನ ಸಭಾ ಸ್ಪೀಕರ್‌ ಪದವಿಗೆ ಅಗೌರವ ತರುವ ರೀತಿಯಲ್ಲಿ ಮಾತನಾಡಿರುವ ಸಚಿವ ಜಮಿರ್ ಅಹಮದ್ ಖಾನ್ ಅವರ ರಾಜಿನಾಮೆ ಯನ್ನು ಸರಕಾರ ಪಡೆಯಬೇಕು. ಅವರು ಸ್ಪೀಕರ್ ಸ್ಥಾನಕ್ಕೆ ಚ್ಯುತಿ ಯಾಗುವಂತೆ ಮಾತನಾಡಿದ್ದಾರೆ. ಈ ಬಗ್ಗೆ ಮು೦ದಿನ ವಿಧಾನಸಭಾ ಅಧಿವೇಶನದಲ್ಲಿ ಬಿಜೆಪಿ ತೀವ್ರ ಹೋರಾಟ ನಡೆಸಲಿದೆ ಎಂದು ವಿಜಯೇಂದ್ರ ಹೇಳಿದರು.
.ಜಾತಿಗಣತಿಗೆ ಬಿಜೆಪಿಯ ವಿರೋಧ ವಿಲ್ಲ. ಈ ವಿಚಾರದಲ್ಲಿ ರಾಜಕೀಯ ಲಾಭ ಪಡೆಯುವ ದುರುದ್ದೇಶಕ್ಕೆ ಬಿಜೆಪಿಯ ವಿರೋಧ ವಿದೆ. ಕೆಲವು ಜಾತಿಗಳನ್ನು ವರದಿಯಲ್ಲಿ ಕೈಬಿಡಲಾಗಿದೆ ಎಂದು ಹೇಳಿದರು.
ಪಕ್ಷದ ಹಿರಿಯರ ಮಾಗ೯ದಶ೯ನ ಪಡೆದುಕೊ೦ಡು ಪಕ್ಷವನ್ನು ರಾಜ್ಯದಲ್ಲಿ ಸದೃಡವಾಗಿ ಸ೦ಘಟಿಸಲಾಗುವುದು.ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರದಲ್ಲಿ ಜಯಗಳಿಸುವುದು ಬಿಜೆಪಿಯ ಗುರಿಯಾಗಿದೆ ಎಂದು ವಿಜಯೇಂದ್ರ ತಿಳಿಸಿದರು.ಬಿಜೆಪಿಯಿಂದ ಯಾರು ಹೊರ ಹೋಗುವುದಿಲ್ಲ. ಬಿಜೆಪಿ ತೊರೆದು ಹೋಗಿರುವವರನ್ನು ಮರಳಿ ಪಕ್ಷ ಕ್ಕೆ ಕರೆತರಲು ಪ್ರಯತ್ನಿಸಲಾಗುವುದುಎಂದರು
ಸುದ್ದಿ ಗೋಷ್ಠಿಯಲ್ಲಿ ಸಂಸದ, ನಿಕಟಪೂವ೯ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್,ಶಾಸಕರಾದ ವೇದವ್ಯಾಸ ಕಾಮತ್,ಉಮನಾಥ ಕೋಟ್ಯಾನ್, ಡಾ.ವೈ.ಭರತ್ ಶೆಟ್ಟಿ,ಹರೀಶ್ ಪೂಂಜಾ, ರಾಜೇಶ್ ನಾಯ್ಕ್,ಭಾಗೀರಥಿ ಮುರುಳ್ಯಪ್ರತಾಪ್ ಸಿಂಹ ನಾಯಕ್, ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಮನಪಾ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು,ವಿಭಾಗದ ಪ್ರಭಾರಿ ಉದಯ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತ ರಿದ್ದರು.
ಬಿ.ವೈ.ವಿಜಯೇಂದ್ರ ಅವರನ್ನು ವಿಮಾನ ನಿಲ್ದಾಣದಿ೦ದ ವಾಹನ ಮೆರವಣಿಗೆಯಲ್ಲಿ ಬಿಜೆಪಿ ಕಚೇರಿ ಕರೆತರಲಾಯಿತು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles