24.9 C
Karnataka
Thursday, April 30, 2026

ಮಂಗಳೂರು ವಿ.ವಿ 44 ನೇ ವಾರ್ಷಿಕ ಘಟಿಕೋತ್ಸವ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 44 ನೇ ವಾರ್ಷಿಕ ಘಟಿಕೋತ್ಸವವನ್ನು 2026ನೇ ಮಾರ್ಚ್ ತಿಂಗಳಿನಲ್ಲಿ ನಡೆಸಲು ಉದ್ದೇಶಿಸಿದ್ದು, ನಿಖರವಾದ ದಿನಾಂಕವನ್ನು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‍ಸೈಟ್, ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಪ್ರಕಟಿಸಲಾಗುತ್ತದೆ.
ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಸಂಯೋಜಿತ, ಘಟಕ ಮತ್ತು ಸ್ವಾಯತ್ತ ಕಾಲೇಜುಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಪೂರ್ಣಗೊಳಿಸಿ ಡಿಸೆಂಬರ್ 31 ರೊಳಗೆ ವಿವಿಧ ಪದವಿಗಳನ್ನು ಪಡೆಯಲು ಅರ್ಹರಾಗಿರುವ ಅಭ್ಯರ್ಥಿಗಳ ಯಾದಿಯನ್ನು ಘಟಿಕೋತ್ಸವದಲ್ಲಿ ದೃಢೀಕರಿಸಲಾಗುತ್ತದೆ. 2025 ನೇ ಅಕ್ಟೋಬರ್/ನವೆಂಬರ್, ಡಿಸೆಂಬರ್ ತಿಂಗಳಲ್ಲಿ ನಡೆಯುವ 1,3,ಮತ್ತು 5ನೇ ಸೆಮಿಸ್ಟರ್ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿದ ಪುನಾರಾವರ್ತಿತ ಅಭ್ಯರ್ಥಿಗಳ ಯಾದಿಯು ಸೇರುವುದಿಲ್ಲ.
ಈ ಘಟಿಕೋತ್ಸವ ಸಮಾರಂಭದಲ್ಲಿ ಪದವಿ ಪಡೆಯಲು ಅರ್ಹರಾದ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ವಿತರಣೆಯ ಕಾರ್ಯಕ್ರಮಗಳನ್ನು ಈ ಕೆಳಗಿನಂತೆ ವಿಂಗಡಿಸಲಾಗಿದೆ.
ಪ್ರಥಮವಾಗಿ ಘಟಿಕೋತ್ಸವ ಸಂದರ್ಭ ವೇದಿಕೆಯಲ್ಲಿ ಗಣ್ಯರಿಂದ ಪದವಿ ಸ್ವೀಕರಿಸುವ ವಿದ್ಯಾರ್ಥಿಗಳು: ಅ) ಡಾಕ್ಟರಲ್ ಡಿಗ್ರಿ ಪಡೆಯಲು ಅರ್ಹರಾದ ಅಭ್ಯರ್ಥಿಗಳು
ಆ) ರಾಂಕ್/ಚಿನ್ನದ /ಪದಕ/ನಗದು ಬಹುಮಾನ ಪಡೆಯುವ ಸ್ನಾತಕೋತ್ತರ ಮತ್ತು ಪದವಿ ಮಟ್ಟದ ಅಭ್ಯರ್ಥಿಗಳು
ದ್ವಿತೀಯವಾಗಿ ಮುಖ್ಯ ಸಭಾ ಕಾರ್ಯಕ್ರಮ ಮುಗಿದ ನಂತರ ಪದವಿ ಪ್ರಮಾಣ ಪತ್ರ ಸ್ವೀಕರಿಸುವ ವಿದ್ಯಾರ್ಥಿಗಳು: ಪದವಿ/ ಸ್ನಾತಕೋತ್ತರ ಪದವಿಯಲ್ಲಿ 6 ಮತ್ತು 6 ಕ್ಕಿಂತ ಹೆಚ್ಚಿನ ಸರಾಸರಿ ಸಂಚಿತ ವಗಾರ್ಂಶ ಪಡೆದು ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಆನ್‍ಲೈನ್ ನೋಂದಣಿ ಮಾಡಿಕೊಂಡ ಎಲ್ಲಾ ಸ್ನಾತಕ/ಸ್ನಾತಕೋತ್ತರ ಅಭ್ಯರ್ಥಿಗಳು.
ಬಿ.ಪಿ.ಎಡ್. ಮತ್ತು ಬಿ.ಎಡ್. ಪದವೀಧರರನ್ನು ಸ್ನಾತಕೋತ್ತರ ವಿದ್ಯಾರ್ಥಿಗಳೆಂದು ಪರಿಗಣಿಸಲಾಗುವುದಿಲ್ಲ. ಈ ವಿಷಯದಲ್ಲಿ ಪದಕ/ಬಹುಮಾನ ಪಡೆಯಲು ಅರ್ಹರಾದ ಮತ್ತು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳು ಮಾತ್ರ ಘಟಿಕೋತ್ಸವಕ್ಕೆ ಪ್ರವೇಶ ಪಡೆಯಲು ಅರ್ಹರು.
ಅರ್ಹ ಅಭ್ಯರ್ಥಿಗಳು ಪದವಿಯನ್ನು ಘಟಿಕೋತ್ಸವದಲ್ಲಿ ‘ಹಾಜರಿ’ ಅಥವಾ ‘ಗೈರುಹಾಜರಿ’ಯಲ್ಲಿ ಪಡೆದುಕೊಳ್ಳಬಹುದು. 2025ನೇ ಅಕ್ಟೋಬರ್/ನವೆಂಬರ್, ಡಿಸೆಂಬರ್ ತಿಂಗಳಲ್ಲಿ ನಡೆಯುವ 1,3 ಮತ್ತು 5ನೇ ಸೆಮಿಸ್ಟರ್ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿದ ಪುನಾರಾವರ್ತಿತ ಅಭ್ಯರ್ಥಿಗಳನ್ನು ಹೊರತುಪಡಿಸಿ, ಡಿಸೆಂಬರ್ 31 ರೊಳಗೆ ವಿವಿಧ ಪದವಿಗಳನ್ನು ಪಡೆಯಲು ಅರ್ಹರಾದ ಎಲ್ಲಾ ಪುನರಾವರ್ತಿತ ಅಭ್ಯರ್ಥಿಗಳು ‘ಗೈರು ಹಾಜರಿ’ ಯಲ್ಲೇ ಪದವಿ ಪ್ರಮಾಣ ಪತ್ರಗಳನ್ನು ಪಡೆದುಕೊಳ್ಳಬೇಕು. ಘಟಿಕೋತ್ಸವದ ಅಧಿಕೃತ ದಿನಾಂಕವನ್ನು ವಿಶ್ವವಿದ್ಯಾನಿಲಯದ ವೆಬ್‍ಸೈಟ್, ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಪ್ರಕಟಿಸಲಾಗುತ್ತದೆ.
ಹಾಜರಿಯಲ್ಲಿ ಪದವಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳಿಗೆ ಗೂಗಲ್ ಲಿಂಕ್ ಮೂಲಕ ನೊಂದಣಿಗೆ ಅವಕಾಶ ಕಲ್ಪಿಸಿ, ಕೊನೆಯ ದಿನಾಂಕದ ಬಗ್ಗೆ ಮಾಹಿತಿಯನ್ನು ವಿಶ್ವವಿದ್ಯಾನಿಲಯದ ಅಂತರ್ಜಾಲದಲ್ಲಿ ಪ್ರಕಟಿಸಲಾಗುತ್ತದೆ. ಹಾಜರಾತಿಯಲ್ಲಿ ಪದವಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳು ಮಾತ್ರ ಆನ್‍ಲೈನ್ ನೋಂದಣಿ ಮಾಡಿಕೊಳ್ಳಬೇಕು.
‘ಗೈರು ಹಾಜರಿಯಲ್ಲಿ ಪದವಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳಿಗೆ ಪದವಿ ಪ್ರಮಾಣ ಪತ್ರಗಳನ್ನು ಸಂಬಂಧಪಟ್ಟ ಕಾಲೇಜು/ಸ್ನಾತಕೋತ್ತರ ವಿಭಾಗಕ್ಕೆ ಕಳುಹಿಸಿ ಕೊಡಲಾಗುವುದು. ಅಂತಹ ವಿದ್ಯಾರ್ಥಿಗಳು ಪದವಿ ಪ್ರಮಾಣ ಪತ್ರಗಳನ್ನು ಕಾಲೇಜು ಪ್ರಾಂಶುಪಾಲರಿಂದ / ವಿಭಾಗದ ಅಧ್ಯಕ್ಷರಿಂದ ಪಡೆದುಕೊಳ್ಳುವುದು.
ಪದವಿ ಪ್ರಮಾಣ ಪತ್ರದ ಶುಲ್ಕ ವಿವರಗಳು: ಪದವಿ ಮಟ್ಟ-1300 ರೂ, ಸ್ನಾತ್ತಕೋತ್ತರ ಪದವಿ- 1850 ರೂ, ಪಿ.ಹೆಚ್.ಡಿ – 3,200, ಡಿ.ಎಸ್ಸಿ./ಡಿ.ಲಿಟ್ – 10,200.
ಪಿ.ಹೆಚ್.ಡಿ./ಡಿ.ಎಸ್ಸಿ./ಡಿಲಿಟ್ ಪದವಿಯನ್ನು ಪಡೆಯಲು ಅರ್ಹರಾದ ಅಭ್ಯರ್ಥಿಗಳು ಅರ್ಜಿಯೊಂದಿಗೆ ಪಾಸ್‍ಪೆÇೀರ್ಟ್ ಅಳತೆಯ ಭಾವಚಿತ್ರವನ್ನು ಲಗತ್ತಿಸಬೇಕು.
ಎಲ್ಲಾ ಸಂಯೋಜಿತ, ಘಟಕ ಮತ್ತು ಸ್ವಾಯತ್ತ ಕಾಲೇಜುಗಳ ಅರ್ಹ ವಿದ್ಯಾರ್ಥಿಗಳು ಶುಲ್ಕವನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಬರೋಡ, ಕೆನರಾ ಬ್ಯಾಂಕ್ ಶಾಖೆಗಳ ಮುಖಾಂತರ ವಿಶ್ವವಿದ್ಯಾನಿಲಯದ ನಿಧಿಗೆ ಜಮೆ ಆಗುವಂತೆ ಚಲನ್ ಮೂಲಕ ಅಥವಾ ಲಿಂಕ್ https://onlinesbi.sbi.bank.in/sbicollect/icollecthome.htm (Educational institution- mangalore university) ಅಥವಾ
www.mangaloreuniversity.ac.in (online fees collection) ಮೂಲಕ ಪಾವತಿಸಿ ರಶೀದಿಯನ್ನು ವಿಶ್ವವಿದ್ಯಾನಿಲಯದಿಂದ ನೀಡಲ್ಪಟ್ಟ ಅಂತಿಮ ಸೆಮಿಸ್ಟರ್ ಅಂಕಪಟ್ಟಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಕುಲಸಚಿವರ ಕಚೇರಿಗೆ ನಿಗದಿತ ನಮೂನೆಯಲ್ಲಿ ಡಿಸೆಂಬರ್ 31 ರೊಳಗೆ ಸಲ್ಲಿಸಬೇಕು ಎಂದು ವಿವಿ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles