ಮ೦ಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ವಿವಿಧ ಸ್ನಾತಕೋತ್ತರ ವಿಭಾಗಗಳು, ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು, ಹಾಗೂ ಮಾನ್ಯತೆ ಪಡೆದ ಸಂಶೋಧನಾ ಕೇಂದ್ರಗಳಲ್ಲಿ ಪಿಹೆಚ್.ಡಿ ಕಾರ್ಯಕ್ರಮಕ್ಕೆ ಲಭ್ಯವಿರುವ ಖಾಲಿ ಸೀಟುಗಳಿಗೆನೋಂದಾಯಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನಿಗದಿತ ಅರ್ಜಿ ನಮೂನೆಯನ್ನು, ಸಂಬಂಧಪಟ್ಟ ವಿಭಾಗಗಳು ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ-574199 ಅಥವಾ ವಿಶ್ವವಿದ್ಯಾನಿಲಯ ಕಾಲೇಜು, ಹಂಪನಕಟ್ಟ, ಮಂಗಳೂರು. ದ ಕ. ಇವರಿಂದ ರೂ. 1,500 (ಎಸ್‌ಸಿ/ಎಸ್‌ಟಿ
ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದಲ್ಲಿ ರೂ.750) ಚಲನ್/ ರಾಷ್ಟ್ರೀಕೃತ ಬ್ಯಾಂಕಿನಿಂದ ಹಣಕಾಸು ಅಧಿಕಾರಿ,ಮಂಗಳೂರು ವಿಶ್ವವಿದ್ಯಾನಿಲಯ ಇವರ ಹೆಸರಿನಲ್ಲಿ ಪಡೆದ ಡಿ. ಡಿ. ಮುಖಾಂತರ ಪಾವತಿಸಿ ಪಡೆಯಬಹುದಾಗಿದೆ.
ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟ ಸ್ನಾತಕೋತ್ತರ ವಿಭಾಗದಮುಖ್ಯಸ್ಥರು/ ಮಾನ್ಯತೆ ಪಡೆದ ಸಂಶೋಧನಾ ಕೇಂದ್ರದ ಮುಖ್ಯಸ್ಥರಿಗೆ ಜುಲೈ 19, 2025 ರ ಒಳಗೆ ಸಲ್ಲಿಸಬೇಕು. ಖಾಲಿ
ಇರುವ ಸೀಟುಗಳು, ಮೀಸಲಾತಿ ವಿವರ, ಪಿಹೆಚ್.ಡಿ ನಿಯಮಾವಳಿ ಹಾಗೂ ಮಾರ್ಗಸೂಚಿಯ ವಿವರಗಳು, ಮತ್ತು ಅರ್ಜಿ ನಮೂನೆಗಳಿಗಾಗಿ ಮಂಗಳೂರು ವಿಶ್ವವಿದ್ಯಾನಿಲಯದ ವೆಬ್ ಸೈಟ್ www.mangaloreuniversity.ac.in ಗೆ ಭೇಟಿ
ನೀಡಬಹುದು, ಎಂದು ಪ್ರಕಟನೆ ತಿಳಿಸಿದೆ.
