18.8 C
Karnataka
Wednesday, December 11, 2024

ಮಂಗಳೂರು ವಿಶ್ವವಿದ್ಯಾನಿಲಯ ವಾರ್ಷಿಕ ಘಟಿಕೋತ್ಸವ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ನಲ್ವತ್ತ ಮೂರನೆಯ ವಾರ್ಷಿಕ ಘಟಿಕೋತ್ಸವವನ್ನು 2025ನೇ ಮಾರ್ಚ್ ತಿಂಗಳಿನಲ್ಲಿ ನಡೆಯಲಿದೆ. ದಿನಾಂಕವನ್ನು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‍ಸೈಟ್, ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಪ್ರಕಟಿಸಿ ತಿಳಿಸಲಾಗುತ್ತದೆ.

ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಸಂಯೋಜಿತ. ಘಟಕ ಮತ್ತು ಸ್ವಾಯತ್ತ ಕಾಲೇಜುಗಳಲ್ಲಿ 2023-24ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಪೂರ್ಣಗೊಳಿಸಿ ಡಿಸೆಂಬರ್ 12ರೊಳಗೆ ವಿವಿಧ ಪದವಿಗಳನ್ನು ಪಡೆಯಲು ಅರ್ಹರಾಗಿರುವ ಅಭ್ಯರ್ಥಿಗಳ ಯಾದಿಯನ್ನು ನಲ್ವತ್ತ ಮೂರನೆಯ ವಾರ್ಷಿಕ ಘಟಿಕೋತ್ಸವದಲ್ಲಿ ದೃಢೀಕರಿಸಲಾಗುತ್ತದೆ.

ಈ ಘಟಿಕೋತ್ಸವ ಸಮಾರಂಭದಲ್ಲಿ ಪದವಿ ಪಡೆಯಲು ಅರ್ಹರಾದ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ವಿತರಣೆಯ ಕಾರ್ಯಕ್ರಮಗಳನ್ನು ವಿಂಗಡಿಸಲಾಗಿದೆ.

ಪ್ರಥಮವಾಗಿ ಘಟಿಕೋತ್ಸವ ಸಂದರ್ಭ ವೇದಿಕೆಯಲ್ಲಿ ಗಣ್ಯರಿಂದ ಪದವಿ ಸ್ವೀಕರಿಸುವ ವಿದ್ಯಾರ್ಥಿಗಳು, ಡಾಕ್ಟರಲ್ ಡಿಗ್ರಿ ಪಡೆಯಲು ಅರ್ಹರಾದ ಅಭ್ಯರ್ಥಿಗಳು, ರಾಂಕ್/ಚಿನ್ನದ /ಪದಕ/ನಗದು ಬಹುಮಾನ ಪಡೆಯುವ ಸ್ನಾತಕೋತ್ತರ ಮತ್ತು ಪದವಿ ಮಟ್ಟದ ಅಭ್ಯರ್ಥಿಗಳು, ದ್ವಿತೀಯವಾಗಿ ಮುಖ್ಯ ಸಭಾ ಕಾರ್ಯಕ್ರಮ ಮುಗಿದ ನಂತರ ಪದವಿ ಪ್ರಮಾಣ ಪತ್ರ ಸ್ವೀಕರಿಸುವ ವಿದ್ಯಾರ್ಥಿಗಳು, ಪದವಿ/ಸ್ನಾತಕೋತ್ತರ ಪದವಿಯಲ್ಲಿ 6 ಮತ್ತು 6ಕ್ಕಿಂತ ಹೆಚ್ಚಿನ ಸರಾಸರಿ ನಂಚಿತ ವಗಾರ್ಂಶ (ಅಉPಂ) ಪಡೆದು ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು online Registrationಮಾಡಿಕೊಂಡ ಎಲ್ಲಾ ಸ್ನಾತಕ/ಸ್ನಾತಕೋತ್ತರ ಅಭ್ಯರ್ಥಿಗಳು.

ಬಿ.ಪಿ.ಎಸ್. ಮತ್ತು ಬಿ.ಎಡ್. ಪದವೀಧರರನ್ನು ಸ್ನಾತಕೋತ್ತರ ವಿದ್ಯಾರ್ಥಿಗಳೆಂದು ಪರಿಗಣಿಸಲಾಗುವುದಿಲ್ಲ. ಈ ವಿಷಯದಲ್ಲಿ ಪದಕ/ಬಹುಮಾನ ಪಡೆಯಲು ಅರ್ಹರಾದ ಮತ್ತು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳು ಮಾತ್ರ ಘಟಿಕೋತ್ಸವಕ್ಕೆ ಪ್ರವೇಶ ಪಡೆಯಲು ಅರ್ಹರು.

ಅರ್ಹ ಅಭ್ಯರ್ಥಿಗಳು ಪದವಿಯನ್ನು ಘಟಿಕೋತ್ಸವದಲ್ಲಿ ‘ಹಾಜರಿ’ ಅಥವಾ ‘ಗೈರುಹಾಜರಿ’ ಯಲ್ಲಿ ಪಡೆದುಕೊಳ್ಳಬಹುದಾಗಿದೆ. ಆದರೆ ಆಗಸ್ಟ್ 31 ರೊಳಗೆ ವಿವಿಧ ಪದವಿಗಳನ್ನು ಪಡೆಯಲು ಅರ್ಹರಾದ ಎಲ್ಲಾ ಪುನರಾವರ್ತಿತ ಅಭ್ಯರ್ಥಿಗಳು ‘ಗೈರು ಹಾಜರಿ’ ಯಲ್ಲೇ ಪದವಿ ಪ್ರಮಾಣ ಪತ್ರಗಳನ್ನು ಪಡೆದುಕೊಳ್ಳಬೇಕು. ಘಟಿಕೋತ್ಸವದ ಅಧಿಕೃತ ದಿನಾಂಕವನ್ನು ವಿಶ್ವವಿದ್ಯಾನಿಲಯದ ವೆಬ್‍ಸೈಟ್, ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಪ್ರಕಟಿಸಿ ತಿಳಿಸಲಾಗುತ್ತದೆ.

ಹಾಜರಿಯಲ್ಲಿ ಪದವಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳಿಗೆ ವಿಶ್ವವಿದ್ಯಾನಿಲಯದ ಅಂರ್ತಜಾಲದಲ್ಲಿ ನೊಂದಣಿಗೆ ಅವಕಾಶ ಕಲ್ಪಿಸಿ, ಕೊನೆಯ ದಿನಾಂಕದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ಅಂತರ್ಜಾಲದಲ್ಲಿ ಪ್ರಕಟಿಸಲಾಗುವುದು. ಹಾಜರಾತಿಯಲ್ಲಿ ಪದವಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳು ಮಾತ್ರ ಔಟಿಟiಟಿe ಖegisಣಡಿಚಿಣioಟಿ ಮಾಡಿಕೊಳ್ಳಬೇಕು.

‘ಗೈರು ಹಾಜರಿಯಲ್ಲಿ ಪದವಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳಿಗೆ ಪದವಿ ಪ್ರಮಾಣ ಪತ್ರಗಳನ್ನು ಸಂಬಂಧಪಟ್ಟ ಕಾಲೇಜು/ಸ್ನಾತಕೋತ್ತರ ವಿಭಾಗಕ್ಕೆ ಕಳುಹಿಸಿ ಕೊಡಲಾಗುವುದು. ಅಂತಹ ವಿದ್ಯಾರ್ಥಿಗಳು ಪದವಿ ಪ್ರಮಾಣ ಪತ್ರಗಳನ್ನು ಕಾಲೇಜು ಪ್ರಾಂಶುಪಾಲರಿಂದ / ವಿಭಾಗದ ಅಧ್ಯಕ್ಷರಿಂದ ಪಡೆದುಕೊಳಬೇಕು.

ಪಿ.ಹೆಚ್.ಡಿ./ಡಿ.ಎಸ್ಸಿ./ಡಿಲಿಟ್ ಪದವಿಯನ್ನು ಪಡೆಯಲು ಅರ್ಹರಾದ ಅಭ್ಯರ್ಥಿಗಳು ಅರ್ಜಿಯೊಂದಿಗೆ ಪಾಸ್ ಪೆÇೀರ್ಟ್ ಅಳತೆಯ ಭಾವಚಿತ್ರವನ್ನು ಲಗತ್ತಿಸಬೇಕು.

ಎಲ್ಲಾ ಸಂಯೋಜಿತ, ಘಟಕ ಮತ್ತು ಸ್ವಾಯತ್ತ ಕಾಲೇಜುಗಳ ಪ್ರಾಂಶುಪಾಲರುಗಳು/ಸ್ನಾತಕೋತ್ತರ ವಿಭಾಗದ ಅಧ್ಯಕ್ಷರು ಎಲ್ಲಾ ಅರ್ಹ ಅಭ್ಯರ್ಥಿಗಳಿಂದ ನಿಗದಿತ ಶುಲ್ಕ ಸಂಗ್ರಹಿಸಿ ರಾಷ್ಟ್ರೀಕೃತ ಬ್ಯಾಂಕಿನ ಶಾಖೆಗಳ ಮುಖಾಂತರ ವಿಶ್ವವಿದ್ಯಾನಿಲಯದ ನಿಧಿಗೆ ಜಮೆ ಆಗುವಂತೆ ಡಿ.ಡಿ./ಚಲನ್ ಮೂಲಕ ಅಥವಾ ವಿಶ್ವವಿದ್ಯಾನಿಲಯದ ಅಂತರ್ಜಾಲದ ((www.mangaloreuniversity.ac.in) quick links
online fees collection fees Examination Activities 008 ಮೂಲಕ ಪಾವತಿಸಿ ವಿದ್ಯಾರ್ಥಿಗಳ ವಿವರಗಳನ್ನು ಕುಲಸಚಿವರ (ಪ) ಕಚೇರಿಯಿಂದ ನೀಡಲ್ಪಟ್ಟ ನಿಗದಿತ ನಮೂನೆಯಲ್ಲಿ ಜನವರಿ 15ರೊಳಗೆ ಸಲ್ಲಿಸಬೇಕು ಎಂದು ಮಂಗಳೂರು ವಿಶ್ವ ವಿದ್ಯಾನಿಲಯ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles