20.8 C
Karnataka
Saturday, November 16, 2024

ಕೃತಕ ಬುದ್ದಿಮತ್ತೆ ಹಾಗೂ ಯಂತ್ರಕಲಿಕೆ ಬಗ್ಗೆ ಇನ್ನಷ್ಟು ಸಂಶೋಧನೆಗಳಾಗಲಿ: ಪ್ರೊ. ಪಿ. ನಾಗಭೂಷಣ್

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಗಣಕ ವಿಜ್ಞಾನ ವಿಭಾಗವು, ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (AICTE) – ಎ.ಐ.ಸಿ.ಟಿ.ಇ ತರಬೇತಿ ಮತ್ತು ಕಲಿಕಾ ಅಕಾಡೆಮಿ (ATAL) ಗಳ ಸಹಯೋಗದೊಂದಿಗೆ, “ಡೀಪ್ ಲರ್ನಿಂಗ್ ಟೆಕ್ನಿಕ್ಸ್ ಫಾರ್ ಅಡ್ವಾನ್ಸಿಂಗ್‌ ಮೆಡಿಕಲ್‌ ಇಮೇಜ್ ಪ್ರೊಸೆಸಿಂಗ್” ಎಂಬ ಒಂದು ವಾರದ ಬೋಧನಾ ವಿಭಾಗದ ಅಭಿವೃದ್ಧಿ ಕಾರ್ಯಕ್ರಮ (FDP) ವನ್ನು ಮಂಗಳಗಂಗೋತ್ರಿಯಲ್ಲಿ ನವೆಂಬರ್‌ 20 ರಿಂದ 25 ರವರೆಗೆ ಆಯೋಜಿಸಿತ್ತು.

ಕಾರ್ಯಕ್ರಮ ಉದ್ಘಾಟಿಸಿದ ಆಂಧ್ರಪ್ರದೇಶದ ಗುಂಟೂರಿನ ವಿಜ್ಞಾನ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ನಾಗಭೂಷಣ್, ವೈದ್ಯಕೀಯ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನಗಳಾದ ಕೃತಕ ಬುದ್ದಿಮತ್ತೆ ಹಾಗೂ ಯಂತ್ರಕಲಿಕೆಯ ಆಳವಾದ ಸಂಶೋಧನೆಯ ಅವಶ್ಯಕತೆಯ ಬಗ್ಗೆ ವಿವರಿಸಿದರು. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಯರಾಜ್ ಅಮೀನ್ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ವೈದ್ಯಕೀಯ ಕ್ಷೇತ್ರ ಮತ್ತು ತಂತ್ರಜ್ಞಾನ ಒಂದೇ ನಾಣ್ಯದ ಎರಡು ಮುಖಗಳು. ಇಂತಹ ಮೌಲ್ಯಯುತ ಕಾರ್ಯಕ್ರಮಗಳು ಯುವಜನತೆಯನ್ನು ಗುಣಮಟ್ಟದ ಸಂಶೋಧನೆಗೆ ಪ್ರೇರೇಪಿಸುತ್ತವೆ, ಎಂದರು .

ಕಾರ್ಯಕ್ರಮ ಸಂಯೋಜಕ, ಗಣಕ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಪ್ರೊ.ಬಿ.ಎಚ್. ಶೇಖರ್, ಕಾರ್ಯಕ್ರಮದ ಉದ್ದೇಶಗಳನ್ನು ವಿವರಿಸಿದರು. ಗಣಕ ವಿಜ್ಞಾನ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ.ಮಂಜಯ್ಯ ಡಿ.ಎಚ್. ಸ್ವಾಗತಿಸಿದರು. ವಿಭಾಗದ ಮುಖ್ಯಸ್ಥೆ ಪ್ರೊ.ಎಚ್.ಎಲ್. ಶಶಿರೇಖಾ ಅವರು ವಂದಿಸಿದರು. ವಿಶ್ವವಿದ್ಯಾನಿಲಯ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಭಾರತಿ ಪಿಲಾರ್ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಇಲೆಕ್ಟ್ರಾನಿಕ್ಸ್ ವಿಭಾಗದ ಅಧ್ಯಕ್ಷ ಪ್ರೊ.ಎ.ಎಂ.ಖಾನ್, ಪಿ.ಎ ಇಂಜಿನಿಯರಿಂಗ್ ಕಾಲೇಜಿನ ಉಪಪ್ರಾಂಶುಪಾಲೆ ಡಾ.ಶರ್ಮಿಳಾ ಕುಮಾರಿ ಉಪಸ್ಥಿತರಿದ್ದರು. ಈ ಕಾರ್ಯಕ್ರಮವು ಐಐಐಟಿ ಅಲಹಾಬಾದ್, ಐಐಟಿ ಹೈದರಾಬಾದ್, ಐಐಟಿ ಮದ್ರಾಸ್, ಯೆನೆಪೋಯ ವಿಶ್ವವಿದ್ಯಾಲಯ, ಕೆನಡಾ- ಟೊರೆಂಟೋ ವಿಶ್ವವಿದ್ಯಾನಿಲಯ ಹಾಗೂ ಹಲವು ಸಾಫ್ಟ್‌ವೇರ್‌ ಕಂಪೆನಿಗಳಿಂದ ಬಂದ ಸಂಪನ್ಮೂಲ ವ್ಯಕ್ತಿಗಳ ಉಪನ್ಯಾಸದ ಜೊತೆಗೆ ಪ್ರಾಯೋಗಿಕ ತರಗತಿಗಳು ಹಾಗೂ ಕೈಗಾರಿಕೆಗಳಿಗೆ ಭೇಟಿ ಇತ್ಯಾದಿಗಳನ್ನೊಳಗೊಂಡಿತ್ತು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles