24.3 C
Karnataka
Thursday, April 30, 2026

ಮಂಗಳೂರು ನಗರ ಪೊಲೀಸ್ : ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಮೆರವಣಿಗೆಗಳ ಆಚರಣೆಗಾಗಿ ಷರತ್ತುಗಳು

ಮ೦ಗಳೂರು: ಮುಂಬರುವ ಹಬ್ಬದ ಋತುವಿನ ಹಿನ್ನೆಲೆಯಲ್ಲಿ, ಮಂಗಳೂರು ನಗರದಲ್ಲಿ ಹಲವು ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಮೆರವಣಿಗೆಗಳು ನಡೆಯಲಿದೆ. ಇವುಗಳಲ್ಲಿ ಮೊಹರಂ , ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ , ಗಣೇಶ ಚತುರ್ಥಿ , ಈದ್ ಮಿಲಾದ್ ಪ್ರಮುಖವಾದುದು. ಈ ಸಂಬಂಧ, ಸಾರ್ವಜನಿಕ ಶಾಂತಿ, ಸುರಕ್ಷತೆ ಮತ್ತು ಕಾನೂನು ಪಾಲನೆಯ ಹಿತದೃಷ್ಠಿಯಿಂದ ಮಂಗಳೂರು ನಗರ ಪೊಲೀಸ್ ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಮೆರವಣಿಗೆಗಳ ಆಚರಣೆಗಾಗಿ ಷರತ್ತುಗಳು ಹೊರಡಿಸಿದೆ.

ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯಲ್ಲಿ ಯಾವುದೇ ಕಾರ್ಯಕ್ರಮಕ್ಕೆ ಅನುಮತಿ ಪಡೆಯುವ ಎಲ್ಲ ಆಯೋಜಕರು ಈ ಷರತ್ತುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪ್ರತಿ ಹಬ್ಬದ ಮುಂಚಿತವಾಗಿ ನಿಖರವಾದ ಮಾರ್ಗಸೂಚಿಗಳನ್ನು (ರಸ್ತೆ, ಸಮಯ, ಧ್ವನಿ ನಿಯಂತ್ರಣ) ಹೊರಡಿಸಲಾಗುತ್ತದೆ. ಷರತ್ತುಗಳ ಪಾಲನೆಗಾಗಿ ಆಯೋಜಕರು ತಮ್ಮ ಪ್ರತಿನಿಧಿಗಳ ಹೆಸರು ಮತ್ತು ಸಂಪರ್ಕ ವಿವರಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಈ ವಿವರ ನೀಡದಿರುವ ಆಯೋಜಕರಿಗೆ ಕಾರ್ಯಕ್ರಮಗಳಿಗೆ ಅನುಮತಿ ನೀಡಲಾಗುವುದಿಲ್ಲ. ಯಾವುದೇ ಷರತ್ತುಗಳ ಉಲ್ಲಂಘನೆ ಅಥವಾ ಘಟನೆಯ ಹೊಣೆಗಾರಿಕೆ ಈ ನಿಯೋಜಿತ ವ್ಯಕ್ತಿಗಳ ಮೇಲೆ ಇರಲಿದೆ ನಗರ ಪೊಲೀಸ್ ಪ್ರಕಟನೆಯಲ್ಲಿ ತಿಳಿಸಿದೆ.

  1. ಕಡ್ಡಾಯ ಪೊಲೀಸ್ ಅನುಮತಿ ಮತ್ತು ಸಮಯದ ನಿರ್ಬಂಧ ಪಾಲನೆ:

ಪೊಲೀಸ್ ಹಾಗೂ ಇತರ ಸಂಬಂಧಿತ ಇಲಾಖೆಗಳ ಲಿಖಿತ ಅನುಮತಿ ಇಲ್ಲದೆ ಯಾವುದೇ ಕಾರ್ಯಕ್ರಮ ಅಥವಾ ಮೆರವಣಿಗೆ ನಡೆಸಬಾರದು. ಯಾವುದೇ ಕಾರಣಕ್ಕೂ ರಾತ್ರಿ 11:30 ಗಂಟೆಯ ನಂತರ ಯಾವುದೇ ಮೆರವಣಿಗೆಯನ್ನು ನಡೆಸಲು ಅನುಮತಿಸಲಾಗದು. ಈ ಸಮಯದ ನಂತರ ನಡೆಯುವ ಯಾವುದೇ ಸಮಾವೇಶವನ್ನು ಕಾನೂನುಬಾಹಿರ ಸಮಾವೇಶವೆಂದು ಪರಿಗಣಿಸಲಾಗುವುದು. ಖಾಸಗಿ ಸ್ಥಳಗಳಲ್ಲಿ ಕಾರ್ಯಕ್ರಮ ನಡೆಸುವುದಕ್ಕೆ ಆ ಸ್ಥಳದ ಮಾಲೀಕರಿಂದ ನಿರಾಕ್ಷೇಪಣಾ ಪತ್ರ’ (NOC) ಪಡೆದು ಹಾಜರುಪಡಿಸುವುದು ಕಡ್ಡಾಯವಾಗಿದೆ. ಅನುಮೋದಿತ ಸ್ಥಳ ಅಥವಾ ಮಾರ್ಗದಲ್ಲಿಯೇ ಕಾರ್ಯಕ್ರಮ ನಡೆಸಬೇಕು. ಯಾವುದೇ ವ್ಯತಿರಿಕ್ತತೆಯನ್ನು ಕಾನೂನುಬಾಹಿರವೆಂದು ಪರಿಗಣಿಸಲಾಗುತ್ತದೆ.

ಉಲ್ಲಂಘನೆ: ಭಾರತೀಯ ನ್ಯಾಯ ಸಂಹಿತ 2023 ರ ಕಲಂ: 189 (ಕಾನೂನುಬಾಹಿರ ಕೂಟ) ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ 1963 ರ ಕಲಂ: 92(1) (ಸಾರ್ವಜನಿಕ ಶಾಂತಿಯ ಉಲ್ಲಂಘನೆ) ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು.

2. ಡಿಜೆ ಸಂಪೂರ್ಣ ನಿಷೇಧ; ಧ್ವನಿವರ್ಧಕಗಳಿಗೆ ಅನುಮತಿ ಅಗತ್ಯ:

ಡಿ.ಜೆ, ಜೋರಾದ ಸ್ಪೀಕ‌ರ್ ಅಥವಾ ಈ ರೀತಿಯ ಯಾವುದೇ ಧ್ವನಿವರ್ಧಕ ಉಪಕರಣಗಳ ಬಳಕೆ ಸಂಪೂರ್ಣ ನಿಷೇಧವಾಗಿದೆ. ಧ್ವನಿವರ್ಧಕ ಬಳಕೆಗೆ ಮುಂಚಿತವಾಗಿ ಅನುಮತಿ ಪಡೆಯುವುದು ಅಗತ್ಯವಿದೆ ಮತ್ತು ರಾತ್ರಿ 10 ಗಂಟೆಗೆ ಅವುಗಳನ್ನು ಸ್ಥಗಿತಗೊಳಿಸಬೇಕು. ಶಬ್ದ ಮಟ್ಟಗಳು ಈ ಮಿತಿಗಳ ಒಳಗಿರಬೇಕು: ವಾಣಿಜ್ಯ ಪ್ರದೇಶ – 65 ಡೆಸಿಬಲ್, ವಾಸಸ್ಥಳ – 55 ಡೆಸಿಬಲ್, ನಿಶ್ಯಬ್ದ ವಲಯ – 50 ಡೆಸಿಬಲ್.
ಉಲ್ಲಂಘನೆ: ಕಲಂ: 270 ಮತ್ತು ಕಲಂ: 223 ಭಾರತೀಯ ನ್ಯಾಯ ಸಂಹಿತೆ 2023 (ಸಾರ್ವಜನಿಕ ಉಪದ್ರವ ಮತ್ತು ಆದೇಶಕ್ಕೆ ಅವಿಧೇಯತೆ), ಪರಿಸರ ಸಂರಕ್ಷಣಾ ಕಾಯ್ದೆ 1986 ರ ಕಲಂ: 15, ಶಬ್ದ ಮಾಲಿನ್ಯ ನಿಯಮಗಳು 2000, ಕರ್ನಾಟಕ ಪೊಲೀಸ್ ಕಾಯ್ದೆ ಕಲಂ: 31 ಮತ್ತು ಸ್ಫೋಟಕಗಳ ಕಾಯ್ದೆ 1884 ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು.
.

  1. 24×7 ಭದ್ರತೆ ಮತ್ತು ಸಿಸಿಟಿವಿ ಕಡ್ಡಾಯ:

ಆಯೋಜಕರು ಸ್ಥಳದಲ್ಲಿ 24×7 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಬೇಕು. ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಬೇಕು ಹಾಗೂ 30 ದಿನಗಳ ಕಾಲ ದೃಶ್ಯಾವಳಿ ಸಂಗ್ರಹಿಸಬೇಕು.ಉಲ್ಲಂಘನೆ: ಕರ್ನಾಟಕ ಪೊಲೀಸ್ ಕಾಯ್ದೆ ಕಲಂ: 31, 34, 70 ಮತ್ತು ಕರ್ನಾಟಕ ಸಾರ್ವಜನಿಕ ಸುರಕ್ಷತಾ ಕ್ರಮಗಳು (ಕ್ರಮಗಳು) ಕಾಯ್ದೆ, 2017 ರ ಕಲಂ: 3(1) ಮತ್ತು 6 ಅಡಿಯಲ್ಲಿ ಕ್ರಮ.

  1. ಧಾರ್ಮಿಕ ವಿರೋಧಿ ಘೋಷಣೆಗಳು ಮತ್ತು ದ್ವೇಷ ಭಾಷಣ ದ್ವೇಷ ನಿಷೇಧ (ಮುದ್ರಣ & ಸಾಮಾಜಿಕ ಮಾಧ್ಯಮದಲ್ಲಿ):

ಯಾವುದೆ ಘೋಷಣೆಗಳು, ಭಿತ್ತಿಪತ್ರಗಳು, ಪ್ರದರ್ಶನಗಳು ಅಥವಾ ಸೋಷಿಯಲ್ ಮೀಡಿಯಾ ಪೋಸ್ಟ್‌ಗಳ ವಿಷಯಗಳು ಯಾವುದೇ ಧರ್ಮದ ವಿರೋಧ ಅಥವಾ ದ್ವೇಷವನ್ನು ಉಂಟುಮಾಡುವ ರೀತಿಯಲ್ಲಿರಬಾರದು.

ಉಲ್ಲಂಘನೆ: ಕಲಂ:196 (ದ್ವೇಷಭಾವನೆ ಉಂಟುಮಾಡುವುದು), 299 (ಧಾರ್ಮಿಕ ನಂಬಿಕೆಗೆ ಅಪಮಾನ), 352/353 (ಸಾರ್ವಜನಿಕ ಕೇಡು) BNS 2023 ಅಡಿಯ

5. ಜನಸಂದಣಿಗೆ ಕಡ್ಡಾಯ ಸ್ವಯಂಸೇವಕರ ನೇಮಕಾತಿ:

ಅನುಮತಿತ ಸಾಮರ್ಥ್ಯ ಮೀರದಂತೆ ಜನಸಮೂಹ ನಿಯಂತ್ರಿಸಬೇಕು. ಸಮರ್ಪಕವಾಗಿ ಸ್ವಯಂಸೇವಕರನ್ನು ನಿಯೋಜಿಸಿಕೊಳ್ಳಬೇಕು.

ಉಲ್ಲಂಘನೆ: ಕಲಂ: 125 BNS 2023 (ಇತರರ ದೈಹಿಕ ಸುರಕ್ಷತೆಗೆ ಅಪಾಯ), ಕಲಂ: 92 ಮತ್ತು ಕಲಂ: 30 ಕರ್ನಾಟಕ ಪೊಲೀಸ್ ಕಾಯ್ದೆ 963 ಅಡಿಯಲ್ಲಿ ಕ್ರಮ.

6. ಪೆಂಡಾಲ್ ಎತ್ತರ ನಿಯಮಗಳು ಮತ್ತು ವಾಹನ ಸುರಕ್ಷಾ ನಿಯಮ ಪಾಲನೆ:

ಪೆಂಡಾಲು, ಕಾರ್ಯಕ್ರಮದಲ್ಲಿ ಬಳಸುವ ವಾಹನಗಳು ಇತ್ಯಾದಿಗಳ ಎತ್ತರಗಳ ಕಾನೂನು ಅಥವಾ ಮೆಸ್ಕಾಂ ಮಾನದಂಡಗಳನ್ನು ಮೀರುವಂತಿರಬಾರದು. ವಾಹನಗಳು ನೋಂದಣಿ ಪತ್ರ, ದೃಢತೆ ಪ್ರಮಾಣಪತ್ರ, ವಿಮೆ ಮತ್ತು PUC ಪ್ರಮಾಣ ಪತ್ರ ಹೊಂದಿರಬೇಕು.
ಉಲ್ಲಂಘನೆ: BNS 2023 ರ ಕಲಂ: 125 ಹಾಗೂ ಮೋಟಾರು ವಾಹನ ಕಾಯ್ದೆ 2019 ರ ಕಲಂ: 39, 130, 192 ಅಡಿಯಲ್ಲಿ ಕ್ರಮ.

  1. ಅಗ್ನಿಶಾಮಕ ಮತ್ತು ತುರ್ತು ವ್ಯವಸ್ಥೆಗಳ ಒದಗಿಕೆ:

ಅಗ್ನಿ ನಂದಕಗಳು, ಆಂಬುಲೆನ್ಸ್, ಪ್ರಥಮ ಚಿಕಿತ್ಸಾ ಪೆಟ್ಟಿಗೆ ಇಟ್ಟುಕೊಳ್ಳುವುದು ಕಡ್ಡಾಯವಾಗಿವೆ. ಬೆಂಕಿಯ ಮೂಲಗಳ ಬಳಿಯಲ್ಲಿ ಸುಲಭವಾಗಿ ಹೊತ್ತಿಕೊಳ್ಳುವ ವಸ್ತುಗಳನ್ನು ಇರಿಸಬಾರದು. ವಿಷಕಾರಿ ಬಣ್ಣಗಳು, ನಿಷೇಧಿತ ರಾಸಾಯನಿಕಗಳು, ಏಕ ಬಳಕೆ ಪ್ಲಾಸ್ಟಿಕ್ ನಿಷೇದಿಸಿದೆ.

ಉಲ್ಲಂಘನೆ: BNS 2023 ರ ಕಲಂ:125, 287 ಮತ್ತು ಪರಿಸರ ಕಾಯ್ದೆ 1986 ರ ಕಲಂ:15, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ನಿಯಮಗಳು 2016 ಅಡಿಯಲ್ಲಿ ಕ್ರಮ.

8. ವಾಹನ ಸಂಚಾರ ಮುಕ್ತವಾಗಿ ನಿರ್ವಹಣೆ ಮತ್ತು ತುರ್ತು ಮಾರ್ಗಗಳ ನಿರ್ಬಂಧ:

ವಾಹನ ಮತ್ತು ಪಾದಚಾರಿ ಸಂಚಾರಕ್ಕೆ ಯಾವುದೇ ತಡೆ ಇಲ್ಲದಂತೆ ವ್ಯವಸ್ಥೆ ಮಾಡಬೇಕು. ತುರ್ತು ಮಾರ್ಗಗಳಿಗೆ ತಡ ಉಂಟುಮಾಡಬಾರದು. ನಿಗದಿತ ಸ್ಥಳದಲ್ಲಿಯೇ ಪಾರ್ಕಿಂಗ್ ವ್ಯವಸ್ಥೆ ಇರಬೇಕು.

ಉಲ್ಲಂಘನೆ: BNS 2023 ರ ಕಲಂ: 126(2), 285, 194E ಮತ್ತು ಮೋಟಾರು ವಾಹನ ಕಾಯ್ದೆ 2019 ರ ಕಲಂ122, 201 ಅಡಿಯಲ್ಲಿ ಕ್ರಮ.

  1. ಸಾರ್ವಜನಿಕ/ಖಾಸಗಿ ಆಸ್ತಿಗೆ ಹಾನಿ ಮಾಡಬಾರದು:

ಯಾವುದೇ ಸಾರ್ವಜನಿಕ ಅಥವಾ ಖಾಸಗಿ ಆಸ್ತಿಗೆ ಹಾನಿಯುಂಟುಮಾಡಬಾರದು.

ಉಲ್ಲಂಘನೆ: BNS 2023 ರ ಕಲಂ:117/118, 324/326 ಮತ್ತು ಕರ್ನಾಟಕ ಸಾರ್ವಜನಿಕ ಆಸ್ತಿ ಹಾನಿ ತಡ ಕಾಯ್ದೆ 1984 ರ ಕಲಂ: 3 ಅಡಿಯಲ್ಲಿ ಕ್ರಮ.

10. ಸಮಯ, ಕಾರ್ಯಕ್ರಮ ವಿವರ ಮತ್ತು ಪೊಲೀಸ್ ಸೂಚನೆ ಪಾಲನೆ:

ಕಾರ್ಯಕ್ರಮದ ಪೂರ್ಣ ವಿವರಗಳನ್ನು ಮುಂಚಿತವಾಗಿ ನೀಡಬೇಕು. ಅನುಮತಿ ಪತ್ರದಲ್ಲಿ ನೀಡಿದ ಸಮಯವನ್ನು ಕಡ್ಡಾಯವಾಗಿ ಪಾಲಿಸಬೇಕು. ಎಲ್ಲಾ ಪೊಲೀಸ್ ಸೂಚನೆಗಳನ್ನು ಪಾಲಿಸಬೇಕು.

ಉಲ್ಲಂಘನೆ: ಕರ್ನಾಟಕ ಪೊಲೀಸ್ ಕಾಯ್ದೆ 1963 ರ ಕಲಂ 92 ಮತ್ತು BNS 2023 ರ ಕಲಂ: 221 ಅಡಿಯಲ್ಲಿ ಕ್ರಮ.


  1. ಮಹಿಳೆಯರ ಸುರಕ್ಷತೆಗೆ ಶೂನ್ಯ ಸಹಿಮ್ಮತೆ ನೀತಿ:
    ಕಾರ್ಯಕ್ರಮದ ಸಮಯ ಮಹಿಳೆಯರ ಚುಡಾವಣೆ, ಹಿಂಬಾಲಿಸುವುಕೆ, ಲೈಂಗಿಕ ಕಿರುಕುಳ ಮುಂತಾದ ಅಪರಾಧಗಳು ನಡೆಯದಂತೆ ನೋಡಿಕೊಳ್ಳಬೇಕು.

ಉಲ್ಲಂಘನೆ: BNS 2023 ರ ಕಲಂ: 74, 75, 77, 78 ಅಡಿಯಲ್ಲಿ ಕ್ರಮ.

  1. ಸ್ವಚ್ಛತೆ, ಪ್ಲೆಕ್ಸ್ ಮತ್ತು ಬ್ಯಾನರ್ ನಿಯಂತ್ರಣ:

ಯಾವುದೇ ಬ್ಯಾನರ್ ಅಥವಾ ಪ್ಲೆಕ್ಸ್ ಅನ್ನು ಸಂಬಂಧಿತ ಪ್ರಾಧಿಕಾರದಿಂದ ಮುಂಚಿತ ಅನುಮತಿ ಇಲ್ಲದೆ ಹಾಕಬಾರದು. ಕಾರ್ಯಕ್ರಮ ಮುಗಿದ ತಕ್ಷಣ ಅವುಗಳನ್ನು ತೆರವುಗೊಳಿಸಿ ಸ್ವಚ್ಛಗೊಳಿಸಬೇಕು.

ಉಲ್ಲಂಘನೆ: ಕರ್ನಾಟಕ ತೆರೆದ ಸ್ಥಳ (ಅಲಂಕಾರ ತಡೆಯುವಿಕೆ) ಕಾಯ್ದೆ 1981 BNS 2023 ರ ಕಲಂ: 196, ಪರಿಸರ ಕಾಯ್ದೆ 1986 ರ ಕಲಂ: 15 ಮತ್ತು MCC ಕಸ ನಿರ್ವಹಣಾ ನಿಬಂಧನೆಗಳು ಅಡಿಯಲ್ಲಿ ಕ್ರಮ.

  1. ಶಸ್ತ್ರಾಸ್ತ್ರಗಳು ಮತ್ತು ಅಪಾಯಕಾರಿಯಾದ ವಸ್ತುಗಳ ನಿಷೇಧ:

ಕಾರ್ಯಕ್ರಮಗಳಲ್ಲಿ ಸಾರ್ವಜನಿಕ ಸ್ಥಳದಲ್ಲಿ ಶಸ್ತ್ರಾಸ್ತ್ರ, ಹರಿತವಾದ ಆಯುಧಗಳು ಇತ್ಯಾದಿ ಅಪಾಯಕಾರಿ ಆಯುಧಗಳ ಪ್ರದರ್ಶನ ಮತ್ತು ಸಾಗಾಟ ಮಾಡಬಾರದು.

ಉಲ್ಲಂಘನೆ: Arms Act 1959 ರ ಕಲಂ: 25 ಅಡಿಯಲ್ಲಿ ಕ್ರಮ.

  1. ಡೋನ್ ಬಳಸಲು ಮುಂಚಿತ ಅನುಮತಿ ಕಡ್ಡಾಯ:
    ಮುಂಚಿತ ಅನುಮತಿ ಇಲ್ಲದೆ ಯಾವುದೇ ಡೋನ್ ಅಥವಾ UAV ಬಳಸುವುದು ನಿಷಿದ್ಧ.

ಉಲ್ಲಂಘನೆ: ಡೋನ್ ನಿಯಮಗಳು 2021 ರ ನಿಯಮ 49 ಅಡಿಯಲ್ಲಿ ಕ್ರಮ.

  1. ಮೆರವಣಿಗೆಯಲ್ಲಿ ಪ್ರಾಣಿಗಳ ಬಳಕೆಗೆ ನಿಯಂತ್ರಣ:

ಮೆರವಣಿಗೆ ಅಥವಾ ಪ್ರದರ್ಶನಗಳಲ್ಲಿ ಪ್ರಾಣಿಗಳನ್ನು ಬಳಸಲು ಮುಂಚಿತ ಅನುಮತಿ ಪಡೆಯಬೇಕು ಮತ್ತು ಪ್ರಾಣಿ ಹಕ್ಕುಗಳ ನಿಯಮ ಪಾಲನೆ ಕಡ್ಡಾಯ.

ಉಲ್ಲಂಘನೆ: ಪ್ರಾಣಿ ಹಿಂಸೆ ತಡೆ ಕಾಯ್ದೆ 1960 ರ ಕಲಂ: 11 ಮತ್ತು 22 ಅಡಿಯಲ್ಲಿ ಕ್ರಮ.

  1. ಪೊಲೀಸ್ ತಪಾಸಣೆಗೆ ಅಡ್ಡಿ ಮಾಡುವುದು ನಿಷೇಧ:
    ಪೊಲೀಸರು ಅಥವಾ ಅಧಿಕೃತ ಅಧಿಕಾರಿಗಳು ಯಾವುದೇ ಸಮಯದಲ್ಲಿ ಸ್ಥಳವನ್ನು ತಪಾಸಣೆ ಮಾಡಬಹುದು.

ಉಲ್ಲಂಘನೆ: BNS 2023 ರ ಕಲಂ: 221 ಅಡಿಯಲ್ಲಿ ಕ್ರಮ.


17. ಅನುಮಾನಾಸ್ಪದ ಚಟುವಟಿಕೆಗಳ ವರದಿ ನೀಡುವುದು ಕಡ್ಡಾಯ:

ಆಯೋಜಕರು ಮತ್ತು ಸಾರ್ವಜನಿಕರು ಯಾವುದೇ ಸಂಶಯಾಸ್ಪದ ಚಟುವಟಿಕೆ, ಸುಳ್ಳು ಮಾಹಿತಿ ಅಥವಾ ಗಲಭೆಗಳನ್ನು ಹತ್ತಿರದ ಪೊಲೀಸ್ ಠಾಣೆಗೆ ಅಥವಾ 112 ಗೆ ಕರೆಮಾಡಿ ವರದಿ ಮಾಡಬೇಕು.

ಉಲ್ಲಂಘನೆ: BNS 2023 ರ ಕಲಂ 217 ಅಡಿಯಲ್ಲಿ ಕ್ರಮ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles