ಮಂಗಳೂರು: ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅವರು ಮಂಗಳೂರು ಮಹಾನಗರ ಪಾಲಿಕೆಯ ವಿಪಕ್ಷ ನಾಯಕ ಅನಿಲ್ ಕುಮಾರ್ ಅವರ ಕಚೇರಿಗೆ ತೆರಳಿ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ಕಂಬಳಿ, ದಕ್ಷಿಣ ಕನ್ನಡ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಅಧ್ಯಕ್ಷ ಕುಳಾಲು ಸುಭಾಶ್ಚಂದ್ರ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ಲಾರೆನ್ಸ್ ಡಿಸೋಜ ಹಾಗೂ ಮನಪಾ ಸದಸ್ಯರು ಉಪಸ್ಥಿತರಿದ್ದರು.