ಮಂಗಳೂರು : ನಗರದ ಮಾತಾ ಅಮೃತಾನಂದಮಯಿ ಮಠದ ಸಂಸ್ಕೃತಿ ಮತ್ತು ಶ್ರೇಷ್ಠತಾ ಕೇಂದ್ರದ ವತಿಯಿಂದ ಮಾದಕ ವ್ಯಸನಗಳ ವಿರುದ್ಧ ಯುವ ಜನರ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಮಠದ ಮುಖ್ಯಸ್ಥರಾದ ಸ್ವಾಮಿನಿ ಮಂಗಳಾಮೃತ ಪ್ರಾಣರವರ ನಿರ್ದೇಶನದಂತೆ ಮಂಗಳೂರಿನ ಅಮೃತ ವಿದ್ಯಾಲಯಂನಲ್ಲಿ ಜರುಗಿದ ಈ ವಿಶೇಷ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಹಾಯಕ ಪೊಲೀಸ್ ಆಯುಕ್ತರಾದ ಗೀತಾ ಕುಲಕರ್ಣಿಯವರು “ಮಾದಕದ್ರವ್ಯ ವ್ಯಸನ ಮತ್ತು ಪರಿಹಾರೋಪಾಯಗಳು” ಎಂಬ ವಿಷಯದ ಕುರಿತು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ
ಯುವಜನರು ಹಾಗೂ ವಿದ್ಯಾರ್ಥಿಗಳು ಮಾದಕದ್ರವ್ಯ ವ್ಯಸನಗಳಿಗೆ ಬಲಿಯಾಗದಂತೆ ಜಾಗೃತಿ ಮೂಡಿಸುವುದು ಅತ್ಯಗತ್ಯ ಎಂದರು.
ಇನ್ನೋರ್ವ ಅತಿಥಿ ಮಂಗಳೂರು ಆಕಾಶವಾಣಿಯ ಕಾರ್ಯಕ್ರಮ ಸಹಾಯಕ ನಿರ್ದೇಶಕರಾದ ಸೂರ್ಯನಾರಾಯಣ ಭಟ್ ಅವರು “ಆಧುನಿಕ ಸಮಾಜದಲ್ಲಿ ಸಮೂಹ ಮಾಧ್ಯಮಗಳ ಬಳಕೆ” ಬಗ್ಗೆ ಮಾತನಾಡಿ ಮಾಧ್ಯಮಗಳು ಬೆಳೆದುಬಂದ ಮೈಲಿಗಲ್ಲುಗಳ ಬಗ್ಗೆ ಮಾಹಿತಿ ನೀಡಿದರು.
ಅಮೃತಸಂಸ್ಕೃತಿ ಮತ್ತು ಶ್ರೇಷ್ಠತಾ ಕೇಂದ್ರದ ಗೌರವ ಸಲಹೆಗಾರ ಡಾ. ಜೀವರಾಜ್ ಸೊರಕೆ ಅಮ್ಮ ಮತ್ತು ಆಶ್ರಮದ ಪರಿಚಯ ನೀಡಿದರು. ಕೇಂದ್ರದ ಅಧ್ಯಕ್ಷ ಡಾ.ವಸಂತಕುಮಾರ ಪೆರ್ಲ ಅವರು ಅತ್ಯುತ್ತಮ ಕಾರ್ಯಕ್ರಮಗಳೊಂದಿಗೆ ಯುವ ಸಮುದಾಯಕ್ಕೆ ಸ್ಪೂರ್ತಿ ತುಂಬುವ ಕಾರ್ಯ ಯಶಸ್ವಿಯಾಗಿ ಈ ಕೇಂದ್ರದಿಂದ ನಡೆಯುತ್ತಿದೆ ಎಂದರು. ಅಮೃತ ವಿದ್ಯಾಲಯಂ ಪ್ರಾಂಶುಪಾಲರಾದ ಅಕ್ಷತಾ ಶೆಣೈ ಅತಿಥಿಗಳ ಪರಿಚಯವಿತ್ತರು.
ಡಾ.ಕಬ್ಬಿನಾಲೆ ಬಾಲಕೃಷ್ಣ ಭಾರದ್ವಾಜ್ ಸ್ವಾಗತಿಸಿದರು, ಸೇವಾ ಸಮಿತಿಯ ಅಧ್ಯಕ್ಷ ಸುರೇಶ್ ಅಮಿನ್ ವಂದಿಸಿದರು. ಪ್ರವೀಣ್ ಚಂದ್ರ ಶರ್ಮ ವಂದಿಸಿದರು.