ಮಂಗಳೂರು: ಪಡೀಲ್ ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ನೂತನ ಕಚೇರಿ ”ಪ್ರಜಾ ಸೌಧ” ಶುಕ್ರವಾರ ಉದ್ಘಾಟನೆಗೊಳ್ಳಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 16ರಂದು ಸಂಜೆ 4:15ಕ್ಕೆ ಜಿಲ್ಲಾಧಿಕಾರಿಗಳ ನೂತನ ಕಚೇರಿ ”ಪ್ರಜಾ ಸೌಧ” ಉದ್ಘಾಟಿಸುವರು.

ಒಳಾಂಗಣ ಕ್ರೀಡಾಂಗಣ
ಮಧಾಹ್ನ 3:20 ಕ್ಕೆ ನಗರಕ್ಕೆ ಆಗಮಿಸುವ ಮುಖ್ಯಮಂತ್ರಿಗಳು ಮೊದಲು ನಗರದ ಉರ್ವಾ ಮಾರ್ಕೆಟ್‍ನಲ್ಲಿ ನಿರ್ಮಾಣಗೊಂಡಿರುವ ಒಳಾಂಗಣ ಕ್ರೀಡಾಂಗಣವನ್ನು ಉದ್ಘಾಟಿಸಲಿದ್ದಾರೆ.
ಮುಖ್ಯಮಂತ್ರಿಗಳೊಂದಿಗೆ ಕಂದಾಯ ಸಚಿವ ಕೃಷ್ಣಭೈರೇಗೌಡ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಮತ್ತಿತರರು ಭಾಗವಹಿಸಲಿದ್ದಾರೆ.
