ಮಂಗಳೂರು: ಕರ್ನಾಟಕ ಗೇರು ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಕರ್ನಾಟಕ ಅರಣ್ಯ ಇಲಾಖೆಯ ಸಹಯೋಗದಲ್ಲಿ ಕರ್ನಾಟಕ ಗೇರು ಮೇಳ ಹಾಗೂ ಕಾರ್ಯಾಗಾರ2026″ ಮೇ 17 ಮತ್ತು 18 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕದ್ರಿ ಪಾರ್ಕ್‍ನಲ್ಲಿ ನಡೆಯಲಿದೆ.
ವಿಧಾನಸಭೆ ಸ್ಪೀಕರ್ ಯು ಟಿ. ಖಾದರ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಉಪಸ್ಥಿತಿಯಲ್ಲಿ, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ.


