24.5 C
Karnataka
Thursday, April 30, 2026

ಬೈಂದೂರಿನಲ್ಲಿ ಎಂ.ಸಿ.ಸಿ. ಬ್ಯಾಂಕಿನ 20ನೇ ಶಾಖೆ ಉದ್ಘಾಟನೆ

ಮಂಗಳೂರು: ತನ್ನ ಬೆಳವಣಿಗೆಯ ಪಯಣದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುವ ಮೂಲಕ, ಎಂ.ಸಿ.ಸಿ. ಬ್ಯಾಂಕ್ 20ನೇ ಶಾಖೆಯನ್ನು ಬೈಂದೂರಿನ ಪೆಟ್ರೋಲ್ ಬಂಕ್ ಬಳಿಯ ಮುಖ್ಯ ರಸ್ತೆಯ ದೀಪಾ ಕಾಂಪ್ಲೆಕ್ಸ್’ನ ನೆಲ ಮಹಡಿಯಲ್ಲಿ ಆಗಸ್ಟ್ 3 ರ೦ದು ಉದ್ಘಾಟಿಸಿತು.
ಶಾಖೆಯನ್ನು ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷ ‘ಸಹಕಾರ ರತ್ನ’ ಅನಿಲ್ ಲೋಬೊ ಅವರು ಗಣ್ಯ ಅತಿಥಿಗಳು, ಸಮುದಾಯದ ಸದಸ್ಯರು ಮತ್ತು ಬ್ಯಾಂಕ್ ಅಧಿಕಾರಿಗಳ ಸಮ್ಮುಖದಲ್ಲಿ ಉದ್ಘಾಟಿಸಿದರು. ಬೈಂದೂರಿನ ಹೋಲಿ ಕ್ರಾಸ್ ಚರ್ಚ್’ನ ಧರ್ಮಗುರುಗಳಾದ ರೆವರೆಂಡ್ ಫಾದರ್ ವಿನ್ಸೆಂಟ್ ಕುವೆಲ್ಲೊ ಅವರು ಆಶೀರ್ವದಿಸಿ, ಹೊಸ ಶಾಖೆಯ ಯಶಸ್ಸಿಗೆ ಪ್ರಾರ್ಥನೆ ಸಲ್ಲಿಸಿದರು.
ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಬಾಬು ಶೆಟ್ಟಿ ಸೇಫ್ ಡೆಪಾಸಿಟ್ ಲಾಕರ್ ಉದ್ಘಾಟಿಸಿದರು ಇ-ಸ್ಟ್ಯಾಂಪಿಂಗ್ ಸೌಲಭ್ಯವನ್ನು ಬೈಂದೂರಿನ ಸೈಂಟ್ ಥಾಮಸ್ ವಸತಿ ಶಾಲೆಯ ಪ್ರಾಂಶುಪಾಲ ರೆವರೆಂಡ್ ಫಾದರ್ ಫಿಲಿಪ್ ನೆಲಿವಿಲ್ಲಾ ಉದ್ಘಾಟಿಸಿದರು.
ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ರಾಜು ಪೂಜಾರಿ, ಬೈಂದೂರು ಪಟ್ಟಣ ಪಂಚಾಯತ್ ನಾಮನಿರ್ದೇಶಿತ ಸದಸ್ಯರಾದ ಸದಾಶಿವ ಡಿ. ಪಡುವರಿ, ಶಿರೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಕಾಪ್ಸಿನೂರ್ ಮೊಹಮ್ಮದ್, ನಾಡದೋಣಿ ರಾಜ್ಯ ಸಂಘದ ಅಧ್ಯಕ್ಷರಾದ ನಾಗೇಶ್ ಖಾರ್ವಿ, ಬೈಂದೂರು ವಕೀಲರ ಸಂಘದ ಅಧ್ಯಕ್ಷ ಮೋಬಿ ಪಿ.ಸಿ. ಅವರು ಗೌರವಾನ್ವಿತ ಅತಿಥಿಗಳಾಗಿದ್ದರು.
ಬ್ಯಾಂಕಿನ ಅಧ್ಯಕ್ಷ ‘ಸಹಕಾರ ರತ್ನ’ ಅನಿಲ್ ಲೋಬೊ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಬ್ಯಾಂಕಿನ ಸೇವೆ ಮತ್ತು ಸೌಲಭ್ಯಗಳನ್ನು ಉತ್ತೇಜಿಸಲು ಮತ್ತು ಅಮಂತ್ರಣ ಪತ್ರವನ್ನು ನೀಡಲು ಭೇಟಿ ನೀಡಿದ ಸಂದರ್ಭದಲ್ಲಿ ಸಿಬ್ಬಂದಿಗೆ ನೀಡಿದ ಆತ್ಮೀಯ ಸ್ವಾಗತ, ಸಹಾಯ ಮತ್ತು ಸಹಕಾರಕ್ಕಾಗಿ ಸಂಸ್ಥೆಗಳು ಮತ್ತು ಪ್ರದೇಶದ ಸಾರ್ವಜನಿಕರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಉದ್ಘಾಟನೆಯಾದ ಒಂದು ವರ್ಷದೊಳಗೆ ಶಾಖೆಯು 10 ಕೋಟಿ ರೂ. ವಹಿವಾಟು ಸಾಧಿಸಲು ಬೆಂಬಲವನ್ನು ಕೋರಿದರು. ಬೈಂದೂರು ಪ್ರದೇಶದಲ್ಲಿ ಬ್ಯಾಂಕಿನ ಬ್ರಾಂಡ್ ರಾಯಭಾರಿಗಳಾಗುವಂತೆ ಅವರು ಪ್ರೇರೆಪಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರೆವರೆಂಡ್ ಫಾದರ್ ಫಿಲಿಪ್ ನೆಲಿವಿಲ್ಲಾ ಅವರು ಎಂಸಿಸಿ ಬ್ಯಾಂಕಿನ ಅಸಾಧಾರಣ ಗ್ರಾಹಕ ಸೇವೆಯನ್ನು ಶ್ಲಾಘಿಸಿದರು ಮತ್ತು ಬ್ಯಾಂಕ್ ಕರ್ನಾಟಕದಾದ್ಯಂತ ವಿಸ್ತರಣೆಯಾಗುವುದನ್ನು ಹಾರೈಸಿದರು.
ಬೈಂದೂರಿನಲ್ಲಿ ಶಾಖೆಯನ್ನು ಸ್ಥಾಪಿಸಿದ್ದಕ್ಕಾಗಿ ಬಾಬು ಶೆಟ್ಟಿ ಎಂಸಿಸಿ ಬ್ಯಾಂಕ್‌ಗೆ ಧನ್ಯವಾದಗಳನ್ನು ಅರ್ಪಿಸಿದರು ಮತ್ತು ಸ್ಥಳೀಯ ನಿವಾಸಿಗಳು ಅದರ ಬೆಳವಣಿಗೆಗೆ ಬೆಂಬಲ ನೀಡುವಂತೆ ಪ್ರೋತ್ಸಾಹಿಸಿದರು.
ರಾಜು ಪೂಜಾರಿ ಅವರು ತಮ್ಮ ಭಾಷಣದಲ್ಲಿ ಬ್ಯಾಂಕನ್ನು ಅಭಿನಂದಿಸಿ ಇನ್ನೂ ಹೆಚ್ಚಿನ ಸಾಧನೆಗಳತ್ತ ಸಿಬ್ಬಂದಿ ಶ್ರದ್ಧೆಯಿಂದ ಕೆಲಸ ಮಾಡುವಂತೆ ಕರೆ ನೀಡಿ ನಿರಂತರ ಬೆಂಬಲದ ಭರವಸೆ ನೀಡಿದರು.
ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಫಲಿತಾಂಶಗಳನ್ನು ಗಳಿಸಿದ ಬೈಂದೂರು ಪ್ರದೇಶದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಬೈಂದೂರು ಶಾಖೆಯಲ್ಲಿ ಖಾತೆಗಳನ್ನು ತೆರೆದ ಗ್ರಾಹಕರನ್ನು ಸನ್ಮಾನಿಸಲಾಯಿತು. ವಿವಿಧ ಸ್ಥಳೀಯ ಸಂಘಗಳ ಪದಾಧಿಕಾರಿಗಳ ಕೊಡುಗೆಯನ್ನು ಗುರುತಿಸಿ, ಅವರನ್ನು ಸನ್ಮಾನಿಸಲಾಯಿತು. ಸಿಎ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾದ ನಿಕೋಲ ರೋಶನಿ ಡಾಯಸ್ ಅವರನ್ನು ಸನ್ಮಾನಿಸಲಾಯಿತು. ಕಟ್ಟಡದ ಮಾಲಿಕರಾದ ಜಗನ್ನಾಥ ಶೆಟ್ಟಿ ಮತ್ತು ಸಿವಿಲ್ ಎಂಜಿನಿಯರ್ ಕಾರ್ತಿಕ್ ಕಿರಣ್ ಅವರಿಗೆ ಈ ಸಂದರ್ಭದಲ್ಲಿ ಕೃತಜ್ಞತೆಗಳನ್ನು ಸಲ್ಲಿಸಲಾಯಿತು. ಬೈಂದೂರು ಶಾಖೆಗೆ ನೇಮಕಗೊಂಡ ಸಿಬ್ಬಂದಿಯನ್ನು ಜನರಲ್ ಮ್ಯಾನೇಜರ್ ಸುನಿಲ್ ಮಿನೆಜಸ್ ಪರಿಚಯಿಸಿದರು.
ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಜೆರಾಲ್ಡ್ ಜೂಡ್ ಡಿಸಿಲ್ವಾ ಮತ್ತು ನಿರ್ದೇಶಕರಾದ ಆಂಡ್ರ‍್ಯೂ ಡಿಸೋಜಾ, ಡೇವಿಡ್ ಡಿಸೋಜಾ, ಹೆರಾಲ್ಡ್ ಮೊಂತೇರೊ, ಮೆಲ್ವಿನ್ ವಾಸ್, ಜೆ.ಪಿ. ರೊಡ್ರಿಗಸ್, ರೋಶನ್ ಡಿಸೋಜಾ, ಡಾ| ಜೆರಾಲ್ಡ್ ಪಿಂಟೊ, ವಿನ್ಸೆಂಟ್ ಲಸ್ರಾದೊ, ಸಿ.ಜಿ. ಪಿಂಟೊ, ಸುಶಾಂತ್ ಸಲ್ಡಾನ್ಹಾ, ಅಲ್ವಿನ್ ಪಿ. ಮೊಂತೇರೊ, ಫೆಲಿಕ್ಸ್ ಡಿ’ಕ್ರೂಜ್ ಮತ್ತು ಜನರಲ್ ಮ್ಯಾನೇಜರ್ ಸುನಿಲ್ ಮೆನೆಜಸ್ ಉಪಸ್ಥಿತರಿದ್ದರು.
ನಿರ್ದೇಶಕರಾದ ಎಲ್ರಾಯ್ ಕಿರಣ್ ಕ್ರಾಸ್ಟೊ ಸ್ವಾಗತಿಸಿದರು. ಬೈಂದೂರು ಶಾಖೆಯ ಹಿರಿಯ ವ್ಯವಸ್ಥಾಪಕರಾದ ಸಂದೀಪ್ ಕ್ವಾಡ್ರಸ್ ಧನ್ಯವಾದ ಅರ್ಪಿಸಿದರು. ಕಾರ್ಯಕ್ರಮವನ್ನು ಸ್ಟೀವನ್ ಕುಲಾಸೊ ಉದ್ಯಾವರ ನಿರೂಪಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles