24.8 C
Karnataka
Thursday, April 30, 2026

ಎಂ.ಸಿ.ಸಿ. ಬ್ಯಾಂಕಿನ 21ನೇ ಶಾಖೆ ಹಾಗೂ 13ನೇ ಎಟಿಎ೦ ಕಲ್ಯಾಣಪುರ ಸಂತೆಕಟ್ಟೆಯಲ್ಲಿ ಉದ್ಘಾಟನೆ

ಮ೦ಗಳೂರು: ಎಂ.ಸಿ.ಸಿ. ಬ್ಯಾಂಕಿನ 21ನೇ ಶಾಖೆ ಮತ್ತು 13ನೇ ಎಟಿಎಮ್ ಅನ್ನು ಉಡುಪಿಯ ಕಲ್ಯಾಣಪುರ-ಸಂತೆಕಟ್ಟೆಯಲ್ಲಿ ಅಕ್ಟೋಬರ್ 5 ರಂದು ಜೆಎಸ್ ಸ್ಕೇರ್ನ ನೆಲಮಹಡಿಯಲ್ಲಿ ಉದ್ಘಾಟಿಸಲಾಯಿತು. ನೂತನ ಶಾಖೆಯನ್ನು ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೋ ಉದ್ಘಾಟಿಸಿದರು.

ಸಂತೆಕಟ್ಟೆಯ ಮೌಂಟ್ ರೋಸರಿ ಚರ್ಚ್ ನ ಧರ್ಮಗುರು ರೆ.ಡಾ.ರೋಕ್ ಡಿಸೋಜ ನೂತನ ಶಾಖೆಯನ್ನು ಆಶೀರ್ವಚಿಸಿದರು. ಉಡುಪಿ ಧರ್ಮಪ್ರಾಂತ್ಯದ ಪಿಆರ್ ಒ ಮತ್ತು ತೊಟ್ಟಂ ಚರ್ಚ್ನ ಧರ್ಮಗುರು ರೆ.ಫಾ.ಡೆನಿಸ್ ಡೆಸಾ ಅವರು ಎಟಿಎಂ ಅನ್ನು ಉದ್ಘಾಟಿಸಿದರು. ಕಲ್ಯಾಣಪುರ-ಸಂತೆಕಟ್ಟೆ ಕರಾವಳಿ ಸಹಕಾರ ಸಂಘದ ಅಧ್ಯಕ್ಷ ಉಮೇಶ್ ಶೆಟ್ಟಿ ಅವರು ಎಟಿಎಂನಿ೦ದ ಮೊದಲ ಹಣ ಹಿಂಪಡೆದರು. ಸೇಫ್ ರೂಮ್ ಅನ್ನು ಉಡುಪಿ ಧರ್ಮಪ್ರಾಂತ್ಯದ ವಿಕಾರ್ ಜನರಲ್ ಅತೀ ವಂ. ಮೊ| ಫರ್ಡಿನಾಂಡ್ ಗೊನ್ಸಾಲ್ವಿಸ್ ಮತ್ತು ಇ-ಸ್ಟಾಂಪಿ೦ಗ್ ಸೌಲಭ್ಯವನ್ನು ಸುಬ್ರಹ್ಮಣ್ಯ ನಗರದ ಸೇಂಟ್ ಪಾಲ್ ಚರ್ಚ್ನ ಸಭಾಪಾಲಕರು ರೆವೆರೆಂಡ್ ಕಿಶೋರ್ ಕುಮಾರ್ ಉದ್ಘಾಟಿಸಿದರು.

ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೋ ವಹಿಸಿದ್ದರು. ಶಾಸಕ ಯಶಪಾಲ್ ಸುವರ್ಣ ಮತ್ತು ಉಡುಪಿ ಧರ್ಮಪ್ರಾಂತ್ಯದ ವಿಕಾರ್ ಜನರಲ್ ಅತೀ ವಂ. ಮೊ| ಫರ್ಡಿನಾಂಡ್ ಗೊನ್ಸಾಲ್ವಿಸ್ ಮುಖ್ಯ ಅತಿಥಿಗಳಾಗಿದ್ದರು. ರೆ.ಡಾ.ರೋಕ್ ಡಿಸೋಜ – ಧರ್ಮಗುರು, ಮೌಂಟ್ ರೋಸರಿ ಚರ್ಚ್, ರೆವೆರೆಂಡ್ ಕಿಶೋರ್ ಕುಮಾರ್ – ಸಭಾಪಾಲಕರು ಸೇಂಟ್ ಪಾಲ್ ಚರ್ಚ್, ಸುಬ್ರಹ್ಮಣ್ಯ ನಗರ ಮತ್ತು ಅಧ್ಯಕ್ಷರು, ಉಡುಪಿ ವಲಯ ಪರಿಷತ್ತು (ಸಿಎಸ್ಐ, ಕೆಎಸ್ಡಿ), ರೆ. ಫಾ. ಡೆನಿಸ್ ಡಿ’ಸಾ – ಪಿಆರ್ ಒ, ಉಡುಪಿ ಧರ್ಮಪ್ರಾಂತ್ಯ, ಡಾ ವಿನ್ಸೆಂಟ್ ಆಳ್ವಾ ಪ್ರಾಂಶುಪಾಲರು, ಮಿಲಾಗ್ರಿಸ್ ಕಾಲೇಜು, ಕಲ್ಯಾಣಪುರ, ಶ್ರೀಮತಿ ವೆರೊನಿಕಾ ಕರ್ನೆಲಿಯೊ – ಮಾಜಿ ಅಧ್ಯಕ್ಷರು, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್, ಜನಾಬ್ ಎಂ.ಎಸ್. ಖಾನ್ – ಮಾಜಿ ಅಧ್ಯಕ್ಷರು, ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆ ಮತ್ತು ಉಮೇಶ್ ಶೆಟ್ಟಿ – ಅಧ್ಯಕ್ಷರು, ಕರಾವಳಿ ಕೊ-ಅಪರೇಟಿವ್ ಸೊಸೈಟಿ, ಕಲ್ಯಾಣಪುರ ಸಂತೆಕಟ್ಟೆ ಇವರು ಗೌರವ ಅತಿಥಿಗಳಾಗಿದ್ದರು.

ನಿರ್ದೇಶಕ ಡಾ|.ಜೆರಾಲ್ಡ್ ಪಿಂಟೋ ಸ್ವಾಗತಿಸಿದರು. ಶಾಖಾ ವ್ಯವಸ್ಥಾಪಕ ಅಜಿತ್ ಪ್ರಿಸ್ಟಲ್ ಡಿಸೋಜ ವಂದಿಸಿದರು. ಸ್ಟೀವನ್ ಕೊಲಾಕೋ ಕಾರ್ಯಕ್ರಮವನ್ನು ನಿರೂಪಿಸಿದರು.
ಉಪಾಧ್ಯಕ್ಷ, ಜೆರಾಲ್ಡ್ ಜೂಡ್ ಡಿಸಿಲ್ವಾ, ನಿರ್ದೇಶಕರು ಆಂಡ್ರ್ಯೂ ಡಿಸೋಜಾ, ಡೇವಿಡ್ ಡಿಸೋಜಾ, ಮೆಲ್ವಿನ್ ವಾಸ್, ಜೆ.ಪಿ. ರೋಡ್ರಿಗಸ್, ಅನಿಲ್ ಪತ್ರಾವೊ, ಹೆರಾಲ್ಡ್ ಮೊಂತೇರೊ, ರೋಶನ್ ಡಿಸೋಜಾ, ಎಲ್ರಾಯ್ ಕಿರಣ್ ಕ್ರಾಸ್ಟೊ, ಸುಶಾಂತ್ ಸಲ್ಡಾನ್ಹಾ, ಫೆಲಿಕ್ಸ್ ಡಿಕ್ರೂಜ್ ಮತ್ತು ಅಲ್ವಿನ್ ಮೊಂತೇರೊ, ಮಹಾಪ್ರಬಂಧಕ ಸುನಿಲ್ ಮಿನೇಜಸ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles