24.5 C
Karnataka
Thursday, April 30, 2026

ಎಂ.ಸಿ.ಸಿ. ಬ್ಯಾಂಕಿನ ನವೀಕೃತ ಕಂಕನಾಡಿ ಶಾಖೆಯ ಉದ್ಘಾಟನೆ

ಮ೦ಗಳೂರು: ಎಂಸಿಸಿ ಬ್ಯಾಂಕ್, ಮಂಗಳೂರು ಇದರ ನವೀಕೃತ ಕಂಕನಾಡಿ ಶಾಖೆಯನ್ನುಡಿ.4ರಂದು ಪಂಪ್‌ವೆಲ್ ರಸ್ತೆಯಲ್ಲಿರುವ ಎಂಪೋರಿಯo ವಾಣಿಜ್ಯ ಸಂಕೀರ್ಣದಲ್ಲಿ ಉದ್ಘಾಟಿಸಲಾಯಿತು. ನವೀಕರಿಸಿದ ಶಾಖೆಯನ್ನು ಅನಿವಾಸಿ ಭಾರತೀಯ ಉದ್ಯಮಿ, ಉದಾರ ದಾನಿ ಮತ್ತು ವಿಷನ್ ಕೊಂಕಣಿಯ ಪ್ರವರ್ತಕ ಮೈಕಲ್ ಡಿಸೋಜಾ ಉದ್ಘಾಟಿಸಿದರು. ಕಂಕನಾಡಿ ಫಾದರ್ ಮುಲ್ಲರ್ಸ್ ಚಾರಿಟೇಬಲ್ ಸಂಸ್ಥೆಗಳ ನಿರ್ದೇಶಕ ವಂದನೀಯ ಫಾದರ್ ಫೌಸ್ಟಿನ್ ಲೋಬೊ ಆಶೀರ್ವದಿಸಿದರು.

ಎಂಸಿಸಿ ಬ್ಯಾಂಕ್‌ನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಅಧ್ಯಕ್ಷತೆ ವಹಿಸಿದ್ದರು. ಜೆಪ್ಪುವಿನ ಸೇಂಟ್ ಆ್ಯಂಟನಿ ಆಶ್ರಮದ ನಿರ್ದೇಶಕ ವಂದನೀಯ ಫಾದರ್ ಜೆ.ಬಿ.ಕ್ರಾಸ್ತಾ, ಬೆಂದೂರಿನ ಸೇವಾನಿಲಯ ಕಾನ್ವೆಂಟ್‌ನ ಸುಪೀರಿಯರ್‌ನ ಸಿಸ್ಟರ್ ಸಿಂತಿಯಾ ಡಿಸೋಜಾ, ಮತ್ತು ಕೊಂಕಣಿ ಸಾಂಸ್ಕೃತಿಕ ಸಂಸ್ಥೆ (ಕೆಸಿಒ) ಅಧ್ಯಕ್ಷ ಲಿಯೋ ರೋಡ್ರಿಗಸ್, ಮುಖ್ಯ ಅತಿಥಿಗಳಾಗಿದ್ದರು.

ಅಧ್ಯಕ್ಷರಾದ ಅನಿಲ್ ಲೋಬೊ ಅವರು ತಮ್ಮ ಸ್ವಾಗತ ಭಾಷಣದಲ್ಲಿ ಕಂಕನಾಡಿ ಶಾಖೆಯ ನವೀಕರಣದ ಹಿಂದಿನ ಉದ್ದೇಶ ಮತ್ತು ದೃಷ್ಟಿಕೋನವನ್ನು ವಿವರಿಸಿದರು. ಇತ್ತೀಚಿನ ದಿನಗಳಲ್ಲಿ ಗ್ರಾಹಕರು ಆಧುನೀಕರಣ ಮತ್ತು ಹೊಸ ಆಲೋಚನೆಗಳನ್ನು ನಿರೀಕ್ಷಿಸುತ್ತಾರೆ. ನಮ್ಮ ಬ್ಯಾಂಕ್ ಅದನ್ನು ಹೇಗೆ ಸಾಧಿಸುವುದು ಎಂಬುದರ ಸ್ಪಷ್ಟ ದೃಷ್ಟಿಕೋನದೊಂದಿಗೆ ಡಿಜಿಟಲೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಎಲ್ಲಾ 16 ಶಾಖೆಗಳನ್ನು ನವೀಕರಿಸಿದೆ. ಗ್ರಾಹಕರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಪೂರೈಸುವಲ್ಲಿ ಯಶಸ್ವಿಯಾಗಿದೆ. ಕಂಕನಾಡಿ ಶಾಖೆಯು 54 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ, ಗ್ರಾಹಕರು ತಮ್ಮ ವಹಿವಾಟುಗಳನ್ನು ಸಂತೋಷದಾಯಕವಾಗಿ ನಡೆಸಲು ಅನುಕೂಲವಾಗುವಂತೆ ಶಾಖೆಯನ್ನು ನವೀಕರಿಸಲಾಗಿದೆ ಎಂದು ಅವರು ಹೇಳಿದರು.

ಪ್ರಸ್ತುತ ಆಡಳಿತ ಮಂಡಳಿ ಅಧಿಕಾರ ವಹಿಸಿಕೊಂಡಾಗ ಕೇವಲ 16 ಶಾಖೆಗಳಿದ್ದು, ಕಳೆದ 7 ವರ್ಷಗಳಲ್ಲಿ, 22 ವರ್ಷಗಳ ನಂತರ ಐದು ಹೊಸ ಶಾಖೆಗಳನ್ನು ತೆರೆಯಲಾಗಿದೆ. ಆರ್‌ಬಿಐ ಹೆಚ್ಚುವರಿ ಶಾಖೆಗಳನ್ನು ತೆರೆಯಲು ಅನುಮತಿ ನೀಡಿದ್ದು, ಬ್ಯಾಂಕ್ ಆರ್ಥಿಕವಾಗಿ ಸದೃಢವಾಗಿದೆ ಮತ್ತು ಉತ್ತಮವಾಗಿ ನಿರ್ವಹಿಸಲ್ಪಟ್ಟಿದೆ ಎಂದು ಸೂಚಿಸುತ್ತದೆ. ಪ್ರಸ್ತುತ ಆಡಳಿತ ಮಂಡಳಿಯು 2018 ರಲ್ಲಿ ಬ್ಯಾಂಕಿನ ಜವಾಬ್ದಾರಿಯನ್ನು ವಹಿಸಿಕೊಂಡಾಗಿನಿoದ ಬ್ಯಾಂಕ್ ಎಲ್ಲಾ ಹಣಕಾಸು ನಿಯತಾಂಕಗಳನ್ನು ಪೂರೈಸಿದ್ದು, ಇಂದು, ಒಟ್ಟು 21 ಶಾಖೆಗಳು ಮತ್ತು 15 ಎಟಿಎಂಗಳನ್ನು ಹೊಂದಿದೆ. ಮುಂದಿನ ಹಣಕಾಸು ವರ್ಷದಲ್ಲಿ ದೇರಳಕಟ್ಟೆ, ಕಟಪಾಡಿ, ಪಡೀಲ್ ಮತ್ತು ಮುಡಿಪು ಅಥವಾ ವಾಮಂಜೂರಿನಲ್ಲಿ ಇನ್ನೂ ನಾಲ್ಕು ಶಾಖೆಗಳನ್ನು ತೆರೆಯಲು ಯೋಜನೆಯನ್ನು ಹಮ್ಮಿಕೊಂಡಿದೆ. ಕರ್ನಾಟಕ ರಾಜ್ಯದಲ್ಲಿ ಮಾತ್ರವಲ್ಲದೆ ಇಡೀ ರಾಷ್ಟçದಾದ್ಯಂತ ಬ್ಯಾಂಕ್ ಬೆಳೆಯಲು ಅನುವು ಮಾಡಿಕೊಡಲು ಗ್ರಾಹಕರ ಬೆಂಬಲ ಮತ್ತು ಆಶೀರ್ವಾದವನ್ನು ಕೋರಿದರು. ಸಮಾರಂಭದಲ್ಲಿ ಹಾಜರಿದ್ದ ಎಲ್ಲಾ ಗಣ್ಯರು, ಗ್ರಾಹಕರು ಮತ್ತು ಹಿತೈಷಿಗಳನ್ನು ಅವರು ಸ್ವಾಗತಿಸಿದರು.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ, ಮಂಗಳೂರಿನ ದಿ ವೈಟ್ ಡವ್ಸ್ ಸೈಕಿಯಾಟ್ರಿಕ್ ನರ್ಸಿಂಗ್ & ಡೆಸ್ಟಿಟ್ಯೂಟ್ ಹೋಂನ ಸಂಸ್ಥಾಪಕಿ ಶ್ರೀಮತಿ ಕೊರಿನ್ ರಸ್ಕಿನ್ಹಾ ಅವರನ್ನು ಶಾಲು, ಹಣ್ಣು ಹಂಪಲು, ಸ್ಮರಣಿಕೆ, ಸನ್ಮಾನ ಪತ್ರ ಮತ್ತು ಹೂವಿನ ಪುಷ್ಪ್ಪಗುಚ್ಛದೊಂದಿಗೆ ಸನ್ಮಾನಿಸಲಾಯಿತು.

ಮೈಕೆಲ್ ಡಿಸೋಜಾ ಅವರನ್ನು ET Now ಬಿಸಿನೆಸ್ ಕಾನ್ಕ್ಲೇವ್ & ಅವಾರ್ಡ್ಸ್ 2025 – ಮಂಗಳೂರು ಆವೃತ್ತಿಯಲ್ಲಿ ರೂಪಾಂತರಗೊ೦ಡ ಲೋಕೋಪಕಾರಿ ಮತ್ತು ಸಮುದಾಯ ನಾಯಕತ್ವ ವಿಭಾಗದಲ್ಲಿ ಪ್ರಶಸ್ತಿಗೆ ಭಾಜನರಾಗಿದ್ದಕ್ಕಾಗಿ ಗೌರವಿಸಲಾಯಿತು.ಡಿಸೆಂಬರ್ 11 ರಂದು ಚಂಡೀಗಢದಲ್ಲಿ ನಡೆಯುವ ಭಾರತ ಮತ್ತು ದಕ್ಷಿಣ ಆಫ್ರಿಕಾ ಟಿ 20 ಪಂದ್ಯದಲ್ಲಿ ಎಸ್‌ಬಿಐ ಲೈಫ್ ಪರವಾಗಿ ಕ್ರಿಕೆಟ್ ತಾರೆಯೊಬ್ಬರಿಗೆ ಪಂದ್ಯ ಶೇಷ್ಟ ಪ್ರಶಸ್ತಿಯನ್ನು ಪ್ರದಾನ ಮಾಡಲು ಆಯ್ಕೆಯಾಗಿದ್ದಕ್ಕಾಗಿ ಐವಾನ್ ಫ್ರಾಂಕ್ ಅವರನ್ನು ಗೌರವಿಸಲಾಯಿತು.
ಇತ್ತೀಚೆಗೆ ಬಿಡುಗಡೆಯಾದ ಕೊಂಕಣಿ ಚಲನಚಿತ್ರ ‘ಬಾಪಾಚೆ ಪುತಾಚೆ ನಾವಿ’ ದಲ್ಲಿ ನಟಿಸಿರುವ ಮೆಲ್ವಿನ್ ಡಿಅಲ್ಮೇಡಾ ಅವರನ್ನು ಸಹ ಸನ್ಮಾನಿಸಲಾಯಿತು.ಕಾರ್ಯಕ್ರಮದ ಭಾಗವಾಗಿ, ಎಂಸಿಸಿ ಬ್ಯಾಂಕ್ ದಸೆಂಬರ್ ತಿಂಗಳಲ್ಲಿ ವಿಶೇಷ ಹುಟ್ಟು ಹಬ್ಬ ಆಚರಿಸಿದ ಗ್ರಾಹಕರಾದ ಎಡ್ಮಂಡ್ ಫ್ರಾಂಕ್ – 75 ನೇ ಹುಟ್ಟುಹಬ್ಬ (ಡಿಸೆಂಬರ್ 1), ಜಾನ್ ಸೈಮನ್ ಡಿ’ಸೋಜಾ – 60 ನೇ ಹುಟ್ಟುಹಬ್ಬ (ಡಿಸೆಂಬರ್ 3), ಮೆರ್ಲಿನ್ ರೇಗೊ – 60 ನೇ ಹುಟ್ಟುಹಬ್ಬ (ಡಿಸೆಂಬರ್ 7), ಶಾಲೆಟ್ ಡಿ’ಸೋಜಾ – 50 ನೇ ಹುಟ್ಟುಹಬ್ಬ (ಡಿಸೆಂಬರ್ 20), ವಿ. ಸುರೇಶ್ ಕುಮಾರ್ – 50 ನೇ ಹುಟ್ಟುಹಬ್ಬ (ಡಿಸೆಂಬರ್ 21) ಇವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮವನ್ನು ರೋಶನ್ ಕ್ರಾಸ್ತಾ ನಿರೂಪಿಸಿ ವಂದಿಸಿದರು.

ಉಪಾಧ್ಯಕ್ಷ ಶಜೆರಾಲ್ಡ್ ಜೂಡ್ ಡಿಸಿಲ್ವಾ, ಕಂಕನಾಡಿ ಶಾಖಾ ನಿರ್ದೇಶಕರಾದ ಹೆರಾಲ್ಡ್ ಮೊಂತೇರೊ, ನಿರ್ದೆಶಕರಾದ ಮೆಲ್ವಿನ್ ವಾಸ್, ಸಿ.ಜಿ.ಪಿಂಟೊ, ಜೆ.ಪಿ.ರೊಡ್ರಿಗಸ್, ಶ್ರೀಮತಿ ಐರೀನ್ ರೆಬೆಲ್ಲೊ, ಡಾ| ಫ್ರೀಡಾ ಡಿಸೋಜ, ರೋಶನ್ ಡಿಸೋಜ, ಫೆಲಿಕ್ಸ್ ಡಿಕ್ರೂಜ್, ಆಲ್ವಿನ್ ಮೊಂತೇರೊ, ಜನರಲ್ ಮ್ಯಾನೇಜರ್ ಸುನಿಲ್ ಮಿನೇಜಸ್, ಶಾಖಾ ವ್ಯವಸ್ಥಾಪಕಿ ಶ್ರೀಮತಿ ಐಡಾ ಪಿಂಟೊ, ಸಿಬ್ಬಂದಿ ಸದಸ್ಯರು ಮತ್ತು ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles