ಮಂಗಳೂರು: ನಗರದ ಪಳ್ನೀರು ನಲ್ಲಿ ಮಾದಕ ವಸ್ತು ಎ೦ಡಿಎ೦ಎ ಮಾರಾಟ ಮಾಡುತ್ತಿದ್ದ ಮಡಿಕೇರಿ ಮೂಲದ ಮೂವರು ಆರೋಪಿಗಳನ್ನು ಬ೦ಧಿಸಿರುವ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಗಳಿಂದ 75 ಸಾವಿರ ರೂ ಮೌಲ್ಯದ 15 ಗ್ರಾಂ ನಿಷೇಧಿತ ಎ೦ಡಿಎ೦ಎ ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಹಾಗೂ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿರುತ್ತಾರೆ.ಮಡಿಕೇರಿಯ ಪ್ರಮೋದ್ ಎ೦.ಜಿ @ ಡಿಸ್ಕ್, (30 ), ದರ್ಶನ್ ಎಸ್. (24 ), ಮೊಹಮ್ಮದ್ ರಾಶೀದ್ ಎಂ.ಝಡ್ @ ರಾಶೀ(:41 )ಬ೦ಧಿತ ಆರೋಪಿಗಳು.
ಆರೋಪಿತರಲ್ಲಿ ಪ್ರಮೋದ್ ಎಮ್ ಜಿ @ ಡಿಸ್ಕ್ ಎಂಬಾತನ ಮೇಲೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ಹಾಗೂ ಮಂಗಳೂರು ನಗರದ ಬರ್ಕೆ ಠಾಣೆಯಲ್ಲಿ ಕೊಲೆಯತ್ನ ಹಾಗೂ ಮಡಿಕೇರಿ ಜಿಲ್ಲೆಯ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಸುಲಿಗೆ, ದರೋಡೆ
ಪ್ರಕರಣಗಳು ದಾಖಲಾಗಿರುತ್ತವೆ.
ಮೊಹಮ್ಮದ್ ರಾಶೀದ್ ಎಂ.ಝಡ್ @ ರಾಶೀ ಎಂಬಾತನ ಮೇಲೆ ಮಡಿಕೇರಿ ಜಿಲ್ಲೆಯ ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ದರೋಡೆ
ಪ್ರಕರಣ ಹಾಗೂ ಮಡಿಕೇರಿ ನಗರ ಠಾಣೆಯಲ್ಲಿ ಕೊಲೆ, ದರೋಡೆ, ಸುಲಿಗೆ ಪ್ರಕಣಗಳು ದಾಖಲಾಗಿರುತ್ತವೆ. ದರ್ಶನ್ ಎಸ್ ಎಂಬಾತನ ಮೇಲೆ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿರುತ್ತದೆ