ಮಂಗಳೂರು : ಮಾದಕ ವಸ್ತು ಎ೦ಡಿಎ೦ಎ ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬ೦ಧಿಸಿದ್ದಾರೆ.ಮಂಜೇಶ್ವರ ಹೊಸಬೆಟ್ಟುನ ಮುಸ್ತಫಾ (37) ಹಾಗೂ ಮಂಜೇಶ್ವರ ಕುಂಜತ್ತೂರು ನ ಶಂಶುದ್ದೀನ್ ಎ(38 ) ಬ೦ಧಿತ ಆರೋಪಿಗಳು.ಆರೋಪಿಗಳಿಂದ ಒಟ್ಟು 95,000 ರೂ ಮೌಲ್ಯದ ಸೊತ್ತು ವಶಕ್ಕೆ ಪಡೆಯಲಾಗಿದೆ.
ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಕೆ ಸಿ ರೋಡ್ ನ ರಾಷ್ಟ್ರೀಯ ಹೆದ್ದಾರಿ 66 ರ ಬಳಿಯಲ್ಲಿ ಇಬ್ಬರು
ಅಕ್ರಮವಾಗಿ ಮಾದಕ ವಸ್ತು ಎ೦ಡಿಎ೦ಎ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾರೆಂದು ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿದರು. ಆರೋಪಿಗಳಿಂದ 75 ಸಾವಿರ ರೂ ಮೌಲ್ಯದ 15 ಗ್ರಾಂ ನಿಷೇಧಿತ MDMA ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಹಾಗೂ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿರುತ್ತಾರೆ.