ಮಂಗಳೂರು: ಆಟೋ ರಿಕ್ಷಾದಲ್ಲಿಎ೦ಡಿಎ೦ಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬ೦ಧಿಸಿದ್ದಾರೆ.ಬಜಾಲ್ ನಂತೂರು ನಿವಾಸಿ ತೌಸೀಫ್ @ ತೌಚಿ ( 23 ) ಬ೦ಧಿತ ಆರೋಪಿ.

ಮಂಗಳೂರು ನಗರ ಪಳ್ನೀರು ನ ಎಸ್.ಎಲ್ ಮಥಾಯಿಸ್ ರಸ್ತೆಯ ಕೊಯಿಲೊ ಲೇನ್ ಬಳಿ ಆಟೋ ರಿಕ್ಷಾದಲ್ಲಿ ಒಬ್ಬ ವ್ಯಕ್ತಿ ಎ೦ಡಿಎ೦ಎ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾನೆಂದು ಬಂದ ಖಚಿತ ಮಾಹಿತಿ ಮೇರೆಗೆ

ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಯನ್ನು ಬ೦ಧಿಸಿದರು. 45,000 ರೂ. ಮೌಲ್ಯದ 9 ಗ್ರಾಂ
ಎ೦ಡಿಎ೦ಎ, ಡಿಜಿಟಲ್ ತೂಕ ಮಾಪನ , ಆಟೋರಿಕ್ಷಾ ಸೇರಿದ೦ತೆ ಒಟ್ಟು ಮೌಲ್ಯದ ಸೊತ್ತು ವಶಪಡಿಸಿಕೊಳ್ಳಲಾಗಿದೆ.ಪತ್ತೆ ಕಾರ್ಯದಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ಅವರ ಮಾರ್ಗದರ್ಶನದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಸಿದ್ದಾರ್ಥ ಗೋಯಲ್ ಮತ್ತು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕ ಶ್ಯಾಮ್ ಸುಂದರ್ ರವರ ನೇತೃತ್ವದ ಸಿಸಿಬಿ ಘಟಕದ ಅಧಿಕಾರಿ, ಸಿಬ್ಬಂದಿಯವರು ಪಾಲ್ಗೊ೦ಡಿದ್ದರು.
