ಮಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಎಪ್ರಿಲ್ 5 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ.
ಎಪ್ರಿಲ್ 5 ರಂದು ಬೆಳಿಗ್ಗೆ 6:55 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣ ಆಗಮನ, ಬೆಳಿಗ್ಗೆ 7:40 ಗಂಟೆಗೆ ಸಕ್ರ್ಯೂಟ್ ಹೌಸ್, 9:30- ನಗರದ ಕೊಡಿಯಾಲ್‍ಬೈಲ್ ಜೈಲ್ ರಸ್ತೆಯಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಮತ್ತು ಪಶುರೋಗ ತಪಾಸಣೆ ಮತ್ತು ಮಾಹಿತಿ ಕೇಂದ್ರದ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ, 10 – ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಭೇಟಿ ಮತ್ತು ಕಾರ್ಯಕರ್ತರ ಜೊತೆ ಸಂವಾದ, 11:30 – ಉರ್ವಸ್ಟೋರ್ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಡಾ.ಬಾಬು ಜಗಜೀವನ ರಾಂ ರವರ 118 ನೇ ಜನ್ಮದಿನಾಚರಣೆ ಕಾರ್ಯಕ್ರಮ.
ಮಧ್ಯಾಹ್ನ 12:30 – ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಹೊಸ ಕಚೇರಿಯ ಕಟ್ಟಡ ವೀಕ್ಷಣೆ, 2:30 – ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೇಸಿಗೆಯ ಸಂದರ್ಭದಲ್ಲಿ ಕುಡಿಯುವ ನೀರಿನ ವ್ಯವಸ್ಥೆ (ಮಂಗಳೂರು ಮಹಾನಗರಪಾಲಿಕೆಯು ಸೇರಿದಂತೆ) ಹಾಗೂ ಜಿಲ್ಲೆಯಲ್ಲಿ ಬೇಸಿಗೆಯಿಂದ ತ¯ದೋರಬಹುದಾದ ಸಮಸ್ಯೆಗಳ ಪರಿಹಾರಕ್ಕೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ, ಸಂಜೆ 5:35 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣದಿಂದ ಸಚಿವರು ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.
