26.1 C
Karnataka
Friday, November 22, 2024

ಸಿದ್ದರಾಮಯ್ಯರ ರಾಜೀನಾಮೆ ಕೇಳುವುದು ಬಿಜೆಪಿಗರ ಮೂರ್ಖತನ” :ಮಂಜುನಾಥ್ ಭಂಡಾರಿ

ಮಂಗಳೂರು: “ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರ ರಾಜೀನಾಮೆ ಕೇಳುವುದು ಬಿಜೆಪಿಯವರ ಮೂರ್ಖತನ. ಯಾಕೆಂದರೆ ಸಿದ್ದರಾಮಯ್ಯ ವಿರುದ್ಧ ದಾಖಲಾಗಿರುವ ಮೊಕದ್ದಮೆ ರಾಜಕೀಯ ಪ್ರೇರಿತವಾಗಿರುವುದರಿಂದ ರಾಜೀನಾಮೆ ಕೊಡುವ ಅವಶ್ಯಕತೆ ಇರುವುದಿಲ್ಲ. ಕಾಂಗ್ರೆಸ್ ಪಕ್ಷವು ಸಿದ್ದರಾಮಯ್ಯರವರ ಹಿಂದೆ ಸಂಪೂರ್ಣವಾಗಿ ಬೆಂಬಲಕ್ಕೆ ನಿಂತಿದೆ ಎಂದು ವಿಧಾನ ಪರಿಷತ್ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಅವರು ಹೇಳಿದ್ದಾರೆ.


“ಕೇಂದ್ರ ಸರ್ಕಾರವು ರಾಜ್ಯಪಾಲರನ್ನು ಉಪಯೋಗಿಸಿ ಪ್ರಜಾಪ್ರಭುತ್ವದ ಕಗ್ಗೊಲೆಯನ್ನು ಮಾಡುತ್ತಿದೆ. ಜನರಿಂದ ಚುನಾಯಿಸಲ್ಪಟ್ಟ ಸರ್ಕಾರಗಳನ್ನು ನಾಮಾಂಕಿತ ರಾಜ್ಯಪಾಲರಿಂದ ಉರುಳಿಸುವ ಕೆಲಸವನ್ನು ಮಾಡುತ್ತಿದೆ. ಕಾಂಗ್ರೆಸ್ ಸರ್ಕಾರಗಳಿರುವ ರಾಜ್ಯಗಳಲ್ಲಿ ಕಾಂಗ್ರೆಸ್ ಮುಖಂಡರನ್ನು ಗುರಿಯಾಗಿಸಿಕೊಂಡು ಇಡಿ, ಐಟಿ ಮತ್ತು ಸಿಬಿಐ ಕಾನೂನಿನ ದುರ್ಬಳಕೆ ಮಾಡಿ ಅಸ್ಥಿರಗೊಳಿಸುತ್ತಿರುವುದು ಪ್ರಜಾಪ್ರಭುತ್ವ ದೇಶದ ಸಂವಿಧಾನಕ್ಕೆ ಅಪಾಯಕಾರಿ ಬೆಳವಣಿಗೆ“ ಎಂದವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles