ಮ೦ಗಳೂರು : ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮನವಿಯ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯು ಬಹನಿರೀಕ್ಷಿತ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ಧಾರಿ-275ರ (ಮಾಣಿ-ಮೈಸೂರು-ಬೆಂಗಳೂರು ವಿಭಾಗದಲ್ಲಿ) ಕಿ.ಮೀ 0.00 ರಿಂದ ಕಿಮೀ 71.60ರವರೆಗಿನ ರಸ್ತೆಯ ಚತುಷ್ಪಥ ಕಾಮಗಾರಿಗೆ ವಿವರವಾದ ಯೋಜನಾ ವರದಿ (ಡಿ.ಪಿ.ಆರ್), ಕಾರ್ಯಸಾಧ್ಯತೆಯ ಅಧ್ಯಯನ, ಸಮೀಕ್ಷೆ ಮತ್ತು ಭೂ ಯೋಜನೆಯನ್ನು ಸಿದ್ಧಪಡಿಸಲು ಅರ್ಹ ಸಲಹೆಗಾರರಿಂದ ಟೆಂಡರ್ ಆಹ್ವಾನಿಸಿದೆ.
ರಾಷ್ಟ್ರೀಯ ಹೆದ್ದಾರಿ – 169ರಲ್ಲಿ ಸಾಣೂರುನಿಂದ ಬಿಕರ್ನಕಟ್ಟೆವರೆಗೆ ಹಾಗೂ ರಾಷ್ಟ್ರೀಯ ಹೆದ್ದಾರಿ –75 ಬಿಸಿರೋಡ್ ನಿಂದ–ಅಡ್ಡಹೊಳೆ ವರೆಗಿನ ರಸ್ತೆಗಳ ಮೇಲ್ದರ್ಜೆ ಕಾಮಗಾರಿಗಳು ನಡೆಯುತ್ತಿರುವಾಗಲೇ ಇನ್ನೊಂದು ಪ್ರಮುಖ ಹೆದ್ದಾರಿಯೂ ಮೇಲ್ದರ್ಜೆಗೇರುತ್ತಿರುವುದು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಸಂಸದರು ಅಭಿಪ್ರಾಯಪಟ್ಟರು.
ಈ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಹಾಗೂ ಕೇಂದ್ರ ಹೆದ್ದಾರಿ ಸಚಿವನಿತಿನ್ ಗಡ್ಕರಿಯವರನ್ನು ವಿಶೇಷವಾಗಿ ಅಭಿನಂದಿಸಿದ್ದಾರೆ.