24.5 C
Karnataka
Thursday, April 30, 2026

ಮೂಡಬಿದ್ರೆ: ಅ.31 ರಂದು ಲೋಕಾಯುಕ್ತ ಜನಸಂಪರ್ಕ ಸಭೆ

ಮಂಗಳೂರು: ಲೋಕಾಯುಕ್ತ ಜನಸಂಪರ್ಕ ಸಭೆ ಮೂಡಬಿದ್ರೆ ತಾಲೂಕು ಕಚೇಯಲ್ಲಿ ಅಕ್ಟೋಬರ್ 31 ರಂದು ಬೆಳಿಗ್ಗೆ 11 ಗಂಟೆಯಿಂದ ನಡೆಯಲಿದೆ.
ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಅಂದು ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು.
ಇದಲ್ಲದೇ ಉಳಿದ ದಿನಗಳಲ್ಲೂ ಕಚೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದು.
ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆಗಳು: ಪೊಲೀಸ್ ಅಧೀಕ್ಷಕರ ಕಛೇರಿ-0824 – 2950997, 9364062517, ಪೊಲೀಸ್ ಉಪಾಧೀಕ್ಷಕರ ಕಛೇರಿ 1- 0824–2453420, 9364062579, ಪೊಲೀಸ್ ಉಪಾಧೀಕ್ಷಕರ ಕಛೇರಿ 2- 0824 – 2453420, 9364062580, ಪೊಲೀಸ್ ನಿರೀೀಕ್ಷಕರು-1 ಕಛೇರಿ- 0824 – 2427237, 9364062691, ಪೊಲೀಸ್ ನಿರೀಕ್ಷಕರು-2 ಕಛೇರಿ- 9364062692, ಪೊಲೀಸ್ ನಿರೀೀಕ್ಷಕರು-3 ಕಛೇರಿ- 9364062693
ಅರ್ಜಿದಾರರು ನಮೂನೆ I & II ರಲ್ಲಿ ಭರ್ತಿ ಮಾಡಿ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಕಛೇರಿಗೆ ಅಥವಾ ನೇರವಾಗಿ ಮಾನ್ಯ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ/ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ರವರಿಗೆ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles