ಮಂಗಳೂರು : ಯುವ ರೆಡ್‌ಕ್ರಾಸ್ ಮಂಗಳೂರು ವಿ.ವಿ. ಘಟಕದ ವತಿಯಿಂದ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದ.ಕ. ಮತ್ತು ಉಡುಪಿ ಜಿಲ್ಲಾ ಘಟಕದ ಸಹಯೋಗದಲ್ಲಿ ಮಂಗಳೂರು ವಿ.ವಿ. ಮಟ್ಟದ ಯುವ ರೆಡ್‌ಕ್ರಾಸ್ ಸದಸ್ಯರಿಗೆ ಮೂರು ದಿನಗಳ ಪ್ರೇರಣಾ ಶಿಬಿರ ಗುರುವಾರ ಪಿಲಿಕುಳದ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಗುರುವಾರ ಉದ್ಘಾಟನೆಗೊಂಡಿತು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ರೆಡ್‌ಕ್ರಾಸ್ ಸಂಸ್ಥೆಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಮಾತನಾಡಿ ‘ ವಿದ್ಯಾರ್ಥಿಗಳು ಜೀವನದಲ್ಲಿ ಕರುಣೆ, ಸೇವಾ ಮನೋಭಾವ ಅಳವಡಿಸಿಕೊಳ್ಳಬೇಕು. ಮಾನವೀಯ ಸೇವೆಗೆ ಒಂದಷ್ಟು ಸಮಯ ಮೀಸರಿಲಿಸಬೇಕು. ಸವಾಜ ಸೇವೆ ಹಾಗೂ ವಾನವೀಯ ಮೌಲ್ಯಗಳನ್ನು ರೂಢಿಸಿಕೊಳ್ಳಲು ಯುವ ರೆಡ್‌ಕ್ರಾಸ್ ಪ್ರೇರಣೆ ನೀಡುತ್ತದೆ ಎಂದರು.
ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ.ಅರುಣ್ ಕುಮಾರ್ ಶೆಟ್ಟಿ, ಉದ್ಯಮಿ ಸಂತೋಷ್ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು.
ರೆಡ್‌ಕ್ರಾಸ್ ಸಂಸ್ಥೆಯ ದ.ಕ.ಜಿಲ್ಲಾ ಘಟಕದ ಖಜಾಂಜಿ ಮೋಹನ್ ಶೆಟ್ಟಿ, ಕಾರ್ಯದರ್ಶಿ ಕಿಶೋರ್‌ಚಂದ್ರ ಹೆಗ್ಡೆ, ಉಡುಪಿ ಘಟಕದ ಕಾರ್ಯದರ್ಶಿ ಡಾ.ಗಣನಾಥ ಎಕ್ಕಾರು, ಯುವ ರೆಡ್‌ಕ್ರಾಸ್ ಸಂಯೋಜನಾಧಿಕಾರಿಗಳಾದ ಯೋಗೀಶ್ ಶ್ಯಾನ್‌ಭೋಗ್, ಸಂತೋಷ್ ಪಿಂಟೊ, ದೀಕ್ಷಿತಾ, ಡಾ.ಅನುರಾಧ ಕುರುಂಜಿ ಉಪಸ್ಥಿತರಿದ್ದರು.
ಯುವ ರೆಡ್‌ಕ್ರಾಸ್ ಮಂಗಳೂರು ವಿ.ವಿ. ಘಟಕದ ನೋಡಲ್ ಆಫೀಸರ್ ಡಾ.ಗಾಯತ್ರಿ.ಎನ್. ಸ್ವಾಗತಿಸಿ, ಯುವ ರೆಡ್‌ಕ್ರಾಸ್ ಉಪ ಸಮಿತಿಯ ನಿರ್ದೇಶಕ ಸಚೇತ್ ಸುವರ್ಣ ವಂದಿಸಿದರು. ರಾಮಕೃಷ್ಣ ಕಾಲೇಜಿನ ಯುವ ರೆಡ್‌ಕ್ರಾಸ್ ಸಂಯೋಜನಾಧಿಕಾರಿ ನಟೇಶ್ ಆಳ್ವ ವಂದಿಸಿದರು. ಮಂಗಳೂರು ವಿ.ವಿ.ಯ ವಿವಿಧ ಕಾಲೇಜುಗಳ ಯುವ ರೆಡ್‌ಕ್ರಾಸ್ ಸದಸ್ಯರು ಶಿಬಿರದಲ್ಲಿ
ಭಾಗವಹಿಸಿದ್ದರು.
