ಮಂಗಳೂರು:ಎಂ.ಆರ್.ಪಿ.ಎಲ್ ನ 4ನೇ ಹಂತದ ವಿಸ್ತೃತ ಯೋಜನೆಗಳಿಗಾಗಿ ಮಂಗಳೂರು ತಾಲೂಕಿನ ಕುತ್ತ್ತೆತ್ತೂರು, ಪೆರ್ಮುದೆ, ತೆಂಕ ಎಕ್ಕಾರು, ಮೂಳೂರು ಮತ್ತು ಕಂದಾವರ ಗ್ರಾಮಗಳಲ್ಲಿ ಭೂಸ್ವಾಧೀನತೆ ಕುರಿತಂತೆ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರ ಅಧ್ಯಕ್ಷತೆಯಲ್ಲಿ ಆರ್ ಮತ್ತು ಆರ್ ಸಮಿತಿಯ ಸಭೆ ನಡೆಯಿತು.
ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಪ್ರೊಬೇಷನರಿ ಐಎಎಸ್ ಅಧಿಕಾರಿ ಮುಕುಲ್ ಜೈನ್, ವಿಶೇಷ ಭೂಸ್ವಾಧೀನ ಅಧಿಕಾರಿ ರಾಜು, ಎಂ.ಆರ್.ಪಿ.ಎಲ್ ಸಂಸ್ಥೆಯ ಪ್ರತಿನಿಧಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗೋಕುಲ್‍ದಾಸ್ ನಾಯಕ್, ಬೈಕಂಪಾಡಿ ಕೆಐಡಿಬಿ ವಿಶೇಷ ಭೂಸ್ವಾಧೀನ ಅಧಿಕಾರಿ, ಕಾರ್ಯನಿರ್ವಾಹಕ ಅಭಿಯಂತರರು ಹಾಗೂ ಲೀಡ್ ಬ್ಯಾಂಕ್ ಮ್ಯಾನೇಜರ್, ಎಂ.ಆರ್.ಪಿ.ಎಲ್ 4ನೇ ಹಂತದ ಭೂನಿರ್ವಸಿತರ ಹಿತರಕ್ಷಣಾ ಸಮಿತಿ ಗೌರವಾಧ್ಯಕ್ಷ ಜೆ.ಐ. ಡೋನಿ ಸುವಾರಿಸ್, ಅಧ್ಯಕ್ಷ ಸುಧಾಕರ್ ಶೆಟ್ಟಿ, ಉಪಾಧ್ಯಕ್ಷ ಜಿ.ಕೆ ಪೂವಪ್ಪ, ಸದಸ್ಯರಾದ ಕೃಷ್ಣಮೂರ್ತಿ, ಮಾರ್ಕ್ ಡಿ’ಸೋಜಾ, ಕಾರ್ಯದರ್ಶಿ ಕೇಶವ ಶೆಟ್ಟಿ, ಸಂಯುಕ್ತ ನಾಗರೀಕ ಹಿತ ರಕ್ಷಣ ಸಮಿತಿಯ ಅಧ್ಯಕ್ಷ ರೊನಾಲ್ಡ್ ಫೆನಾರ್ಂಡಿಸ್, ಉಪಾಧ್ಯಕ್ಷ ಸಂದೇಶ ಪೂಜಾರಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.