17.9 C
Karnataka
Saturday, November 23, 2024

ಸಣ್ಣ ಕೈಗಾರಿಕೆಗಳು ಸಕಾಲದಲ್ಲಿ ಆರ್ಥಿಕ ನೆರವು ಅಗತ್ಯ: ಜಯಪ್ರಕಾಶ್ ಹೆಗ್ಡೆ

ಕಿರು ಮತ್ತು ಸಣ್ಣ ಕೈಗಾರಿಕೆಗಳ ಸಮಸ್ಯೆಗಳು ಪರಿಹಾರವಾದರೆ ಮಾತ್ರ ಉದ್ಯಮ ರಂಗ ಅಭಿವೃದ್ಧಿ ಸಾಧ್ಯ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹೇಳಿದರು.
ಅವರು ಶನಿವಾರ ಬೈಕಂಪಾಡಿ ಕೈಗಾರಿಕಾ ಪ್ರದೇಶದ ಕೆನರಾ ಕೈಗಾರಿಕಾ ಸಂಘದ ಸಭಾಂಗಣದಲ್ಲಿ ನಡೆದ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಸವಲತ್ತುಗಳು ಮತ್ತು ಹಣಕಾಸಿನ ಅರಿವು ಕುರಿತು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಿರು ಮತ್ತು ಸಣ್ಣ ಕೈಗಾರಿಕೆಗಳ ಸಮಸ್ಯೆಗಳನ್ನು ಪರಿಹರಿಸಿ ಹಣಕಾಸಿನ ನೆರವು ಸಿಕ್ಕಾಗ ಮಾತ್ರ ಕೈಗಾರಿಕೆಗಳು ಮುಂದೆ ಬರಲು ಸಾಧ್ಯವಾಗುತ್ತದೆ. ಯುವ ಜನತೆ ಉದ್ಯೋಗದ ಕಡೆ ಮುಖಮಾಡದೆ ಕೈಗಾರಿಕೆಗಳ ಸ್ಥಾಪನೆಗೆ ಮುಂದಾಗುವಂತೆ ಕರೆ ನೀಡಿದರು. ಕಾಸಿಯಾ ಇಂತಹ ಕಾರ್ಯಕ್ರಮಗಳನ್ನು ರಾಜ್ಯಾದ್ಯಂತ ಆಯೋಜಿಸುತ್ತಿರುವುದು ಉತ್ತಮ ಕಾರ್ಯವಾಗಿದ್ದು ಸಣ್ಣ ಕೈಗಾರಿಕೆಗಳಿಗೆ ದೊರೆಯುವ ಯೋಜನೆಗಳು ಮತ್ತು ಪ್ರೋತ್ಸಾಹಕಗಳನ್ನು ತಿಳಿಯಪಡಿಸುವುದಲ್ಲದೇ ಬ್ಯಾಂಕ್‍ಗಳ ಸಹಾಯದೊಂದಿಗೆ ಕೈಗಾರಿಕೆಗಳಿಗೆ ಹಣಕಾಸಿನ ಬೆಂಬಲ ನೀಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದರು.
ಸಣ್ಣ ಕೈಗಾರಿಕೆಗಳಿಗೆ ಸಂಬಂಧಿಸಿದಂತಹ ವಿಷಯಗಳನ್ನು ಚರ್ಚಿಸಲು ಸಣ್ಣ ಕೈಗಾರಿಕೆಗಳ ಸಚಿವರೊಂದಿಗೆ ಸಭೆ ಏರ್ಪಡಿಸಿ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕ್ರಮ ವಹಿಸಲು ಕಾಸಿಯಾ ಜೊತೆ ಕೈಜೋಡಿಸುವುದಾಗಿ ಅವರು ತಿಳಿಸಿದರು.
ಕಾಸಿಯಾ, ಅಧ್ಯಕ್ಷ ಸಿಎ ಶಶಿಧರ ಶೆಟ್ಟಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಂಎಸ್‍ಎಂಇ ವಲಯದ ಉತ್ತೇಜನಕ್ಕಾಗಿ ಘೋಷಿಸಿರುವ ವಿವಿಧ ಯೋಜನೆಗಳು, ಮತ್ತು ರಿಯಾಯಿತಿಗಳ ಕುರಿತು ಉಪಕ್ರಮಗಳನ್ನು ಪ್ರಾರಂಭಿಸುತ್ತಿವೆಯಾದರು, ಸರಿಯಾದ ಮಾರ್ಗದರ್ಶನ ಮತ್ತು ಅರಿವಿನ ಕೊರತೆಯಿಂದಾಗಿ ಈ ಸೌಲಭ್ಯಗಳು ಸದ್ಭಳಕೆಯಾಗಿರುವುದಿಲ್ಲ. ಯಾವುದೇ ಯೋಜನೆಗಳ / ಉಪಕ್ರಮಗಳ ಯಶಸ್ವಿ ಅನುμÁ್ಠನವು ಮಾಹಿತಿಯು ಪೂರ್ಣಪ್ರಮಾಣದಲ್ಲಿ ಫಲಾನುಭವಿಗಳನ್ನು ತಲುಪಿದಾಗ ಮಾತ್ರ ಸಾಧ್ಯವಾಗುತ್ತದೆ ಎಂದರು.
ರಾಜ್ಯದಾದ್ಯಂತ ಎಂಎಸ್‍ಎಂಇಗಳನ್ನು ಸಬಲೀಕರಣಗೊಳಿಸುವ ಮೂಲ ಉದ್ದೇಶದಿಂದ “ಅವಕಾಶಗಳನ್ನು ಸೃಷ್ಟಿಸುವುದು, ಅಂತರವನ್ನು ನಿವಾರಿಸುವುದು” ಎಂಬ ಶೀಷಿ೯ಕೆಯಡಿ ಆರ್ಥಿಕ ಸಾಕ್ಷರತೆ ಹಾಗೂ ಕ್ರೆಡಿಟ್ ಲಿಂಕ್, ಮಾರುಕಟ್ಟೆಯ ಮಾನ್ಯತೆ, ಡಿಜಿಟಲ್ ಉಪಸ್ಥಿತಿಯ ಮೂಲಕ ತಮ್ಮ ಗ್ರಾಹಕರ ನೆಲೆಯನ್ನು ವಿಸ್ತರಿಸುವ ಮತ್ತು ನಿರ್ದಿಷ್ಟವಾಗಿ ಒ.ಎನ್.ಡಿ.ಸಿ., ಟ್ರೆಡ್ಸ್ ಪ್ಲಾಟ್‍ಫಾಮ್ರ್ನ ಸದುಪಯೋಗಪಡಿಸಿಕೊಳ್ಳುವ ಕುರಿತಂತೆ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದ್ದು ಈಗಾಗಲೇ 11 ಜಿಲ್ಲೆಗಳಲ್ಲಿ ಕಾರ್ಯಕ್ರಮಗಳನ್ನು ಯಶ್ಸಸ್ವಿಯಾಗಿ ಆಯೋಜಿಸಲಾಗಿದ್ದು ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳು ಇಂತಹ ಕಾರ್ಯಕ್ರಮಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಹೇಳಿದರು.
ಬೆಂಗಳೂರಿನ ಸಿಡಿ ಪ್ರಾದೇಶಿಕ ಕಚೇರಿ ಉಪ ಪ್ರಧಾನ ವ್ಯವಸ್ಥಾಪಕ ಬಿ. ಉಳಗಿಯನ್, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗೋಕುಲ್‍ದಾಸ್ ನಾಯಕ್, ಕೆನರಾ ಕೈಗಾರಿಕೆಗಳ ಸಂಘದ ಅಧ್ಯಕ್ಷ ಹಾಗೂ ಜಂಟಿ ಕಾರ್ಯದರ್ಶಿ-ಗ್ರಾಮೀಣ ಕಾಸಿಯಾ ಅರುಣ್ ಪಡಿಯಾರ್ ಎನ್, ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ವಿಶಾಲ್ ಎಲ್. ಸಾಲಿಯಾನ್, ಗೌರವ ಪ್ರಧಾನ ಕಾರ್ಯದರ್ಶಿ ಎಸ್. ನಾಗರಾಜು, ಖಜಾಂಚಿ ಹೆಚ್.ಕೆ. ಮಲ್ಲೇಶ ಗೌಡ ಮತ್ತಿತರರು ಇದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles