17.9 C
Karnataka
Saturday, November 23, 2024

ಮಂಗಳೂರು ವಿವಿ: ಪಿ.ಹೆಚ್.ಡಿ. ಕಾರ್ಯಕ್ರಮಕ್ಕೆ ಪ್ರವೇಶಾತಿ ಅಧಿಸೂಚನೆ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ವಿವಿಧ ಸ್ನಾತಕೋತ್ತರ ವಿಭಾಗಗಳು, ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು, ಫಿಲ್ಡ್‌ ಮಾರ್ಷಲ್‌ ಕೆ.ಎಂ. ಕಾರ್ಯಪ್ಪ ಕಾಲೇಜು, ಮಡಿಕೇರಿ ಮತ್ತು ಜ್ಞಾನಕಾವೇರಿ ಸ್ನಾತಕೋತ್ತರ ಕೇಂದ್ರ ಕುಶಾಲನಗರ, ಹಾಗೂ ಮಾನ್ಯತೆ ಪಡೆದ ಸಂಶೋಧನಾ ಕೇಂದ್ರಗಳಲ್ಲಿ ಪಿ.ಹೆಚ್.ಡಿ ಕಾರ್ಯಕ್ರಮಕ್ಕೆ ಖಾಲಿ ಇರುವ ಸೀಟುಗಳಿಗೆ ನೋಂದಾಯಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿತ ಅರ್ಜಿ ನಮೂನೆಯನ್ನು ವಿವರವಾದ ಅಧಿಸೂಚನೆಯೊಂದಿಗೆ ಕುಲಸಚಿವರು, ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ-574199 ಅಥವಾ ವಿಶ್ವವಿದ್ಯಾನಿಲಯ ಕಾಲೇಜು, ಹಂಪನಕಟ್ಟ, ಮಂಗಳೂರು. ದ ಕ. ಇವರಿಂದ ರೂ. 1,100 ನ್ನು (ಎಸ್‌ಸಿ/ಎಸ್‌ಟಿ/ ಪ್ರವರ್ಗ-I ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದಲ್ಲಿ ರೂ.550) ಚಲನ್/‌ ರಾಷ್ಟ್ರೀಕೃತ ಬ್ಯಾಂಕಿನಿಂದ ಹಣಕಾಸು ಅಧಿಕಾರಿ, ಮಂಗಳೂರು ವಿಶ್ವವಿದ್ಯಾನಿಲಯ ಇವರ ಹೆಸರಿನಲ್ಲಿ ಪಡೆದ ಡಿ. ಡಿ. ಮುಖಾಂತರ ಪಾವತಿಸಿ ಪಡೆಯ ಬಹುದಾಗಿದೆ.

ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟ ಸ್ನಾತಕೋತ್ತರ ವಿಭಾಗದ ಅಧ್ಯಕ್ಷರು/ ಮಾನ್ಯತೆ ಪಡೆದ ಸಂಶೋಧನಾ ಕೇಂದ್ರದ ಮುಖ್ಯಸ್ಥರಿಗೆ ಮಾರ್ಚ್ 5, 2024 ರ ಒಳಗೆ ಸಲ್ಲಿಸತಕ್ಕದ್ದು.
ಖಾಲಿ ಇರುವ ಸೀಟುಗಳು/ ಮೀಸಲಾತಿ ವಿವರ ಮತ್ತು ನಿಯಮಾವಳಿ, ಮಾರ್ಗಸೂಚಿಯ ವಿವರ ಮತ್ತು ಅರ್ಜಿ ನಮೂನೆಗಳಿಗಾಗಿ www.mangaloreuniversity.ac.in ಭೇಟಿ ನೀಡಬಹುದು, ಎಂದು ಪ್ರಕಟಣೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles