ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ತೆರಿಗೆದಾರರಿಗೆ ಆಸ್ತಿತೆರಿಗೆ ಪಾವತಿಯನ್ನು ಪರಿಣಾಮಕಾರಿಯಾಗಿ ಹೆಚ್ಚಿಸುವ ಸಲುವಾಗಿ ಹಾಗೂ ಸ್ವಯಂಘೋಷಿತ ಆಸ್ತಿತೆರಿಗೆ ಪಾವತಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ರಾಜ್ಯದ ಮಹಾನಗರಪಾಲಿಕೆಗಳಲ್ಲಿ 2025-26ನೇ ಸಾಲಿನ ಆಸ್ತಿತೆರಿಗೆಯನ್ನು ಆರ್ಥಿಕ ವರ್ಷದ ಪ್ರಾರಂಭದ 30 ದಿನಗಳಲ್ಲಿ (ಎಪ್ರಿಲ್ ತಿಂಗಳಲ್ಲಿ) ಪಾವತಿ ಮಾಡಿದಲ್ಲಿ ಶೇಕಡಾ 5 ರಷ್ಟು ರಿಯಾಯಿತಿ ನೀಡಲು ಕಲ್ಪಿಸಿರುವ ಅವಕಾಶದ ಅವಧಿಯನ್ನು ಜೂನ್ 30 ರವರೆಗೆ ವಿಸ್ತರಿಸಲಾಗಿದೆ.
ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದು ಆಸ್ತಿ ತೆರಿಗೆ ಪಾವತಿಸಿ ನಗರದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
