22.7 C
Karnataka
Wednesday, April 2, 2025

ಮುತ್ತೂಟ್ ಫೈನಾನ್ಸ್ ದರೋಡೆಗೆ ಯತ್ನ: ಇಬ್ಬರ ಬ೦ಧನ

ಮಂಗಳೂರು: ದೇರಳಕಟ್ಟೆ ಜಂಕ್ಷನ್ ನಲ್ಲಿರುವ ಮುತ್ತೂಟ್ ಫೈನಾನ್ಸ್ ಶಾಖೆ ದರೋಡೆಗೆ ಯತ್ನಿಸಿದ ಘಟನೆ ಶನಿವಾರ ತಡರಾತ್ರಿ ನಡೆದಿದೆ.ದರೋಡೆಗೆ ಯತ್ನಿಸಿದ ಇಬ್ಬರು ಆರೋಪಿಗಳನ್ನು ಕೊಣಾಜೆ ಪೊಲೀಸರು ಬ೦ಧಿಸಿದ್ದಾರೆ.
ಕಳ್ಳರು ಬೀಗ ಒಡೆಯುತ್ತಿರುವ ಸ೦ದಭ೯ದಲ್ಲಿ ಫೈನಾನ್ಸ್ ಮಳಿಗೆಗೆ ಅಳವಡಿಸಿದ್ದ ಸೈರನ್ ಮೊಳಗಿದ್ದು, ಸ್ಥಳಕ್ಕೆ ಧಾವಿಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ದೇರಳಕಟ್ಟೆ ಜಂಕ್ಷನ್ ನಲ್ಲಿರುವ ವಾಣಿಜ್ಯ ಕಟ್ಟಡವೊ೦ದರ ಮೇಲಂತಸ್ತಿನಲ್ಲಿ ಕಾರ್ಯಾಚರಿಸುತ್ತಿರುವ ಮುತ್ತೂಟ್ ಫೈನಾನ್ಸ್ ಗೆ ಕೇರಳ ಮೂಲದ ಮೂವರು ಕನ್ನ ಹಾಕಲು ಯತ್ನಿಸಿದ್ದಾರೆ. ಮಳಿಗೆಯ ಬೀಗ ಒಡೆಯುತ್ತಿರುವಾಗ ಸೈರನ್ ಮೊಳಗಿದ್ದು ಮುತ್ತೂಟ್ ಫೈನಾನ್ಸ್ ನ ಕಂಟ್ರೋಲ್ ರೂಂಗೆ ಮಾಹಿತಿ ರವಾನೆಯಾಗಿದೆ. ಫೈನಾನ್ಸ್ ನ ಮೇಲಧಿಕಾರಿಗಳು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸೈರನ್ ಮೊಳಗುತ್ತಿದ್ದಾಗ ಫೈನಾನ್ಸ್ ಸುತ್ತ ಮುತ್ತ ಸ್ಥಳೀಯರು ಜಮಾಯಿಸಿದ್ದು ಇಬ್ಬರು ಆರೋಪಿಗಳಾದ ಕಾಂಞಂಗಾಡ್ ನ ಮುರಳಿ ಮತ್ತು ಕಾಸರಗೋಡಿನ ಹರ್ಷದ್ ಕಟ್ಟಡದಲ್ಲಿ ಲಾಕ್ ಆಗಿದ್ದಾರೆ. ಸ್ಥಳಕ್ಕೆ ಧಾವಿಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳು ಮತ್ತು ಕೃತ್ಯ ಎಸಗಲು ತಂದಿದ್ದ ಡ್ರಿಲ್ ಮೆಷಿನನ್ನು ವಶಕ್ಕೆ ಪಡೆದಿದ್ದಾರೆ. ಮತ್ತೋರ್ವ ಆರೋಪಿ ಕಾಸರಗೋಡು ಮೂಲದ ಅಬ್ದುಲ್ ಲತೀಫ್ ಪರಾರಿಯಾಗಿದ್ದಾನೆ.
ಫೈನಾನ್ಸ್ ನಲ್ಲಿ ಉತ್ಕೃಷ್ಟ ಮಟ್ಟದ ರಕ್ಷಣಾ ಸಲಕರಣೆ ಅಳವಡಿಸಿದ ಪರಿಣಾಮ ಸಂಭವನೀಯ ಕಳವು ಪ್ರಕರಣ ವಿಫಲವಾಗಿದೆ. ಘಟನಾ ಸ್ಥಳಕ್ಕೆ ಎಸಿಪಿ ಧನ್ಯ ನಾಯಕ್, ಕೊಣಾಜೆ ಇನ್ಸ್ ಪೆಕ್ಟರ್ ರಾಜೇಂದ್ರ ನೇತೃತ್ವದ ತಂಡ ಭೇಟಿ ನೀಡಿ ತನಿಖೆ ನಡಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles