22 C
Karnataka
Friday, November 15, 2024

ಕಾಂಗ್ರೆಸ್ ನಿ೦ದ ಕಾನೂನು ಸುವ್ಯವಸ್ಥೆ ಹದಗೆಡಿಸುವ ಪ್ರಯತ್ನ: ನಳಿನ್ ಕುಮಾರ್

ಮ೦ಗಳೂರು: ಕಾಂಗ್ರೆಸ್ ನಾಯಕರು ಹತಾಶರಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಸಂಸದ ಹಾಗೂ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ. ನೈತಿಕತೆ ಇದ್ದರೆ ಸಿದ್ದರಾಮಯ್ಯ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.

ಮಂಗಳೂರುನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ನಳಿನ್ ಕುಮಾರ್ ಕಟೀಲ್ ಮೂಡಾ ಹಗರಣ ದಲ್ಲಿ ಸಾವಿರಾರು ಕೋಟಿ ಲೂಟಿ ಆಗಿದೆ. ವಾಲ್ಮೀಕಿ ನಿಗಮದಲ್ಲೂ 187 ಕೋಟಿ ಹಗರಣ ಆಗಿದೆ. ಆದರೂ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಧಿಕಾರದ ಆಸೆಗೆ ಆಂಟಿ ಕುಳಿತುಕೊಂಡಿದ್ದಾರೆ. ಸಿದ್ದರಾಮಯ್ಯ ನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಲಿ ಎಂದು ಸವಾಲು ಹಾಕಿದರು. ಹೋರಾಟದ ನೆಪದಲ್ಲಿ ಕಾಂಗ್ರೆಸ್ ಆರಾಜಕತೆ ಸ್ರಷ್ಟಿಸಲು ಪ್ರಯತ್ನಿಸುತ್ತಿದೆ. ಕಾನೂನು ಸುವ್ಯವಸ್ಥೆ ಹದಗೆಡಲು ಕಾರಣವಾಗುತ್ತಿದೆ. ರಾಜ್ಯಪಾಲರ ನಡೆ ಸಮರ್ಥನಿಯವಾಗಿದೆ ಎ೦ದವರು ಹೇಳಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles