ಮಂಗಳೂರು: ಕಾರು ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದು ಸ೦ಭವಿಸಿದ ಅಪಘಾತದಲ್ಲಿ ತೊಕ್ಕೊಟ್ಟಿನ ಶಮಿತ್ ಶೆಟ್ಟಿ ಯಾನೆ ಬಂಟಿ (29) ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ ೬೬ ರ ನಂತೂರಿನಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.
ಶಮಿತ್ ಶೆಟ್ಟಿಯವರು ಸ್ನೇಹಿತನ ಮನೆಯಲ್ಲಿ ದೈವದ ಕೋಲ ಕಾಯ೯ಕ್ರಮದಲ್ಲಿ ಭಾಗವಹಿಸಿ ತೊಕ್ಕೊಟ್ಟಿನಲ್ಲಿರುವ ಮನೆಗೆ ಹಿಂದಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.ಕಾರು ಡಿಕ್ಕಿಯಾದ ರಭಸಕ್ಕೆ ಡಿವೈಡರ್ ಮೇಲೆ ಹಾಕಿದ್ದ ಕಬ್ಬಿಣದ ತಡೆಬೇಲಿ ಮುರಿದು ಹೋಗಿದೆ. ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು ತಡೆಬೇಲಿಯ ಮೇಲೆ ಸಿಕ್ಕಿಕೊಂಡಿತ್ತು. ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಮಿತ್ ಶೆಟ್ಟಿ ಬಿಜೆಪಿ ಹಿರಿಯ ನಾಯಕಿ ಲಲಿತಾ ಸುಂದರ್ ಅವರ ಮೊಮ್ಮಗನಾಗಿದ್ದು ತಾಯಿ, ಸಹೋದರಿ, ಅಜ್ಜಿಯನ್ನು ಅಗಲಿದ್ದಾರೆ.