20.6 C
Karnataka
Friday, November 22, 2024

ಮೀಸಲಾತಿ ಹಿಂದುಳಿದ ವರ್ಗಗಳ ಸಾಮಾಜಿಕ ನ್ಯಾಯಕ್ಕಿರುವ ಉಪಕ್ರಮ: ಡಾ. ರವೀಂದ್ರನಾಥ ರಾವ್‌

ಮಂಗಳೂರು: ಭಾರತದಲ್ಲಿರುವ ಬಹುತೇಕ ಹಿಂದುಳಿದ ವರ್ಗಗಳಲ್ಲಿ ಬಡತನ, ಶಿಕ್ಷಣದ ಕೊರತೆ, ಸಾಮಾಜಿಕ ಬಹಿಷ್ಕಾರ ಮೊದಲಾದ ಸಮಸ್ಯೆಗಳಿವೆ. ಈ ನಿಟ್ಟಿನಲ್ಲಿ ಮೀಸಲಾತಿ ಹಿಂದುಳಿದ ಜಾತಿ ಮತ್ತು ವರ್ಗಗಳಿಗೆ ಸಾಮಾಜಿಕ ನ್ಯಾಯ ತರಲು ಇರುವ ಪ್ರಮುಖ ಉಪಕ್ರಮವಾಗಿದೆ ಎಂದು ಬ್ರಹ್ಮಾವರದ ಎಸ್.ಎಂ.ಎಸ್. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ವೈ. ರವೀಂದ್ರನಾಥ ರಾವ್ ಹೇಳಿದರು.
ಮಂಗಳೂರು ವಿಶ್ವವಿದ್ಯಾನಿಲಯ, ಸಮಾಜಶಾಸ್ತ್ರ ಸ್ನಾತಕೋತ್ತರ ಮತ್ತು ಸಂಶೋಧನಾ ಅಧ್ಯಯನ ಕೇಂದ್ರ, ಸಮಾಜಶಾಸ್ತ್ರ ವಿಭಾಗ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು, ಸುಲಬ್ ಅಂತಾರಾಷ್ಟ್ರೀಯ ಸಾಮಾಜಿಕ ಸೇವಾ ಸಂಸ್ಥೆ ನವದೆಹಲಿ ಹಾಗೂ ಮಂಗಳೂರು ಸಮಾಜಶಾಸ್ತ್ರ ಸಂಘ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಹಿಂದುಳಿದ ವರ್ಗ, ನೈರ್ಮಲ್ಯೀಕರಣ ಮತ್ತು ಸಾಮಾಜಿಕ ಅಭಿವೃದ್ಧಿ ವಿಷಯದ ಕುರಿತು ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಏರ್ಪಡಿಸಲಾಗಿದ್ದ ಎರಡು ದಿನದ ರಾಷ್ಟ್ರೀಯ ವಿಚಾರ ಸಂಕಿರಣದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಆಧುನಿಕ ಕಾಲಘಟ್ಟದಲ್ಲಿ ಜನರನ್ನು ರಾಷ್ಟ್ರಗಳ ನಿಜವಾದ ಸಂಪತ್ತು ಎಂದು ಪರಿಗಣಿಸಲ್ಪಟ್ಟಿರುವುದರಿಂದ, ಸಾಮಾಜಿಕ ಅಭಿವೃದ್ಧಿ ಆ ದಿಕ್ಕಿನಲ್ಲಿ ಸಾಗಬೇಕು. ಜನರು ತಮ್ಮ ಸಂಪೂರ್ಣ ಸಾಮರ್ಥ್ಯ, ಕೌಶಲ್ಯಗಳನ್ನು ಅರಿತು ದುಡಿಯುವ ಚೈತನ್ಯ ಪಡೆಯುವ ಮೂಲಕ ತಮ್ಮ ಸಮಸ್ಯೆಗಳನ್ನು ನಿವಾರಿಕೊಳ್ಳಲು ಸಾಧ್ಯವಾಗುವಂತಹ ಸಾಮಾಜಿಕವಾತಾವರಣವನ್ನು ಸೃಷ್ಟಿಸುವ ಅವಶ್ಯಕತೆಯಿದೆ ಎಂದು ಅಭಿಪ್ರಾಯಪಟ್ಟರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ, ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ ಎರಡು ದಿನಗಳ ಕಾಲ ಅತ್ಯಂತ ಯಶಸ್ವಿಯಾಗಿ ನಡೆದಿದೆ. ಹಿಂದುಳಿದ ವರ್ಗಗಳು, ನೈರ್ಮಲ್ಯ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳ ಕುರಿತು ಬಹಳ ಪ್ರಬುದ್ಧವಾಗಿ ಚರ್ಚೆ ನಡೆಸಲಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ವಿನಯ್ ರಜತ್, ಮಂಗಳೂರು ಸಮಾಜಶಾಸ್ತ್ರ ಸಂಘದ ಅಧ್ಯಕ್ಷ ಪ್ರೊ. ಯೋಗೀಂದ್ರ ಬಿ., ರಾಷ್ಟ್ರೀಯ ವಿಚಾರ ಸಂಕಿರಣದ ಸಂಚಾಲಕ ಡಾ. ರಿಚರ್ಡ್ ಪಾಯಿಸ್ ಸಂಘಟನಾ ಕಾರ್ಯದರ್ಶಿ ಡಾ. ಗಾಯತ್ರಿ ಎನ್. ಸೇರಿದಂತೆ ವಿವಿಧ ಸಂಶೋಧನಾರ್ಥಿಗಳು,ವಿದ್ಯಾರ್ಥಿಗಳು ಹಾಗೂ ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles