ಮಂಗಳೂರು: ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‍ನಲ್ಲಿ 8ನೇ ತರಗತಿಗೆ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಜೂನ್ 7 ರಂದು ನಡೆಸಲಾಗುತ್ತದೆ.
ಅಭ್ಯರ್ಥಿಗಳು ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದಿರುವ ಯಾವುದೇ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ಹಾಗೂ ಜನವರಿ 1-01-2027 ರಂತೆ 11ಳಿ ವರ್ಷದಿಂದ 13 ವರ್ಷದೊಳಗಿರುವ (ಅಂದರೆ ದಿನಾಂಕ 02-01-2014 ರಿಂದ 01-07-2015 ರೊಳಗೆ ಜನಿಸಿರುವ) ಬಾಲಕರು ಮತ್ತು ಬಾಲಕಿಯರು ಮಾತ್ರ ಪ್ರವೇಶ ಪರೀಕ್ಷೆಗೆ ಅರ್ಹರಿರುತ್ತಾರೆ. ಈ ಸಂಸ್ಥೆಯ ಮುಖ್ಯಗುರಿ ಯುವಕ ಮತ್ತು ಯುವತಿಯರನ್ನು ದೇಶದ ಸಶಸ್ತ್ರ ಪಡೆಗೆ ಸೇರಲು ಸಿದ್ಧಗೊಳಿಸುವುದು ಹಾಗೂ ಈ ನಿಟ್ಟಿನಲ್ಲಿ ಯುವಕ ಮತ್ತು ಯುವತಿಯರಿಗೆ ಸರ್ವರೀತಿಯ ವಿದ್ಯಾಭ್ಯಾಸ/ ತರಬೇತಿ ನೀಡುವುದು. ಕಾಲೇಜಿನಲ್ಲಿ ವರ್ಷವೊಂದಕ್ಕೆ ಪ್ರಸಕ್ತ ವಿಧ್ಯಾಭ್ಯಾಸ ಶುಲ್ಕ ರೂ.98650 (ಉeಟಿ ಅಚಿಣegoಡಿಥಿ) ಹಾಗೂ ರೂ.81850/-(Sಅ/Sಖಿ) ಗಳಾಗಿರುತ್ತದೆ. ಇದು ಕಾಲ ಕಾಲಕ್ಕೆ ಹೆಚ್ಚಾಗಬಹುದು. ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯು ಪ್ರವೇಶ ಸಮಯದಲ್ಲಿ ರೂ.50,000/- ಭದ್ರತಾ ಠೇವಣಿ ನೀಡಬೇಕಾಗುತ್ತದೆ. ಮೊತ್ತವನ್ನು ವಿದ್ಯಾರ್ಥಿಗಳು ಪದವೀಧರರಾದ ಬಳಿಕ ಹಿಂತಿರುಗಿಸಲಾಗುತ್ತದೆ.
ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತಕವನ್ನು ರಾಷ್ಟ್ರೀಯ ಭಾರತೀಯ ಮಿಲಿಟರಿ ಕಾಲೇಜು, ಗರಹಿ ಕ್ಯಾಂಟ್, ಡೆಹ್ರಾಡೂನ್, ಉತ್ತರಾಖಂಡ್, ಪಿನ್ – 248003 ಇಲ್ಲಿಗೆ ಸಾಮಾನ್ಯ ಅಭ್ಯರ್ಥಿಗಳಿಗೆ ರೂ.600 ಮತ್ತು ಎಸ್‍ಸಿ/ಎಸ್‍ಟಿ ಅಭ್ಯರ್ಥಿಗಳಿಗೆ ರೂ.555 ಡಿ.ಡಿ ಕಳುಹಿಸಿ ಪಡೆಯಬಹುದು.
ಭರ್ತಿ ಮಾಡಿದ ನಿಗದಿತ ಅರ್ಜಿ ನಮೂನೆಯನ್ನು ದ್ವಿಪ್ರತಿಯಲ್ಲಿ ಕೆಳಗಿನ ಅಡಕಗಳೊಂದಿಗೆ ಎಪ್ರಿಲ್ 5 ರೊಳಗಾಗಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ ಎಮ್‍ಕಾರ್ಯಪ್ಪ ಭವನ್, ನಂ.58 ಫೀಲ್ಡ್ ಮಾರ್ಷಲ್ ಕೆ ಎಮ್ ಕಾರ್ಯಪ್ಪರಸ್ತೆ, ಬೆಂಗಳೂರು – 25 ಇವರಿಗೆ ದಾಖಲೆಗಳೊಂದಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 080-25589459 ಅಥವಾ ಸಮೀಪದಲ್ಲಿರುವ ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಾರ್ಯಾಲಯವನ್ನು ಸಂಪರ್ಕಿಸಬಹುದು ಎಂದು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


