23.9 C
Karnataka
Monday, March 3, 2025

ಫೆ.17 ರಂದು ಜಿಲ್ಲಾ ಕೇಂದ್ರ ಗ್ರಂಥಾಲಯ ನೂತನ ಕಟ್ಟಡದ ಉದ್ಘಾಟನೆ

ಮಂಗಳೂರು : ಸಾರ್ವಜನಿಕ ಗ್ರಂಥಾಲಯ ಇಲಾಖೆ, ದ.ಕ ಜಿಲ್ಲಾ ಕೇಂದ್ರ ಗ್ರಂಥಾಲಯ ಇದರ ಕೇಂದ್ರ ಕಚೇರಿಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಫೆಬ್ರವರಿ 17 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಯೆಯ್ಯಾಡಿ ಕೈಗಾರಿಕಾ ಪ್ರದೇಶದಲ್ಲಿ ನಡೆಯಲಿದೆ.
ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಫರೀದ್ ಘನ ಉಪಸ್ಥಿತಿಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಲಿದ್ದಾರೆ.
ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಡಾ| ಎಸ್.ಆರ್ ರಂಗನಾಥನ್‍ರವರ ಪುತ್ಥಳಿ ಅನಾವರಣ ಮಾಡಲಿದ್ದಾರೆ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ.

ಜೋಕಟ್ಟೆ ಆಯುರ್ವೇದ ಆಸ್ಪತ್ರೆ ಕಾಮಗಾರಿಗೆ ಶಂಕುಸ್ಥಾಪನೆ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಆಯುಷ್‌ ಇಲಾಖೆ ದಕ್ಷಿಣ ಕನ್ನಡ ಇವರ ಸಂಯುಕ್ತ ಆಶ್ರಯದಲ್ಲಿ ಫೆಬ್ರವರಿ 17 ರಂದು ಸಂಜೆ 4 ಗಂಟೆಗೆ ತೋಕೂರು ಜೋಕಟ್ಟೆ ಸರ್ಕಾರಿ ಆಯುರ್ವೇದ ಆಸ್ಪತ್ರೆಯನ್ನು ರಾಷ್ಟ್ರೀಯ ಆಯುಷ್‌ಅಭಿಯಾನದಡಿ ಮೇಲ್ದರ್ಜೆಗೇರಿಸುವ ಕಾಮಗಾರಿಗೆ ಶಂಕುಸ್ಥಾಪನೆ ನಡೆಯಲಿದೆ.
ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಫರೀದ್ ಘನ ಉಪಸ್ಥಿತಿಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮೂಡಬಿದ್ರೆ ವಿಧಾನಸಭಾ ಕ್ಷೇತ್ರ ಶಾಸಕ ಉಮಾನಾಥ ಎ ಕೋಟ್ಯಾನ್ ಅಧ್ಯಕ್ಷತೆ ವಹಿಸಲಿದ್ದಾರೆ..

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles