24.9 C
Karnataka
Thursday, April 30, 2026

ನಿತ್ಯಶ್ರೀ ಬಿ.ವಿ.ಗೆ ಪಿಎಚ್ ಡಿ ಪದವಿ

ಮಂಗಳೂರು : ಯೆನೆಪೋಯ ಪರಿಗಣಿತ ವಿಶ್ವವಿದ್ಯಾಲಯದ ಯೆನೆಪೋಯ ನರ್ಸಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ನಿತ್ಯಶ್ರೀ ಬಿ.ವಿ. ಇವರು ಮಂಗಳೂರಿನ ಆಯ್ದ ಶಾಲೆಗಳ ಹದಿಹರೆಯದ ಬಾಲಕಿಯರಲ್ಲಿ ಲೈಂಗಿಕ ಕಿರುಕುಳ ತಡೆಗಟ್ಟುವ ಉದ್ದೇಶದಿಂದ ಅರಿವು, ದೃಢವಾದ ನಡವಳಿಕೆ ಮತ್ತು ಸ್ವಾಭಿಮಾನವನ್ನು ಹೆಚ್ಚಿಸುವ ಸಾಮರ್ಥ್ಯ ವರ್ಧನಾ ಕಾರ್ಯಕ್ರಮದ ಪರಿಣಾಮಕಾರಿತ್ವದ ಕುರಿತು ನಡೆಸಿದ ಸಂಶೋಧನಾ ಪ್ರಬಂಧಕ್ಕೆ ಯೆನೆಪೋಯ ಪರಿಗಣಿತ ವಿ.ವಿ. ಪಿಎಚ್ ಡಿ ಪದವಿ ನೀಡಿದೆ.

ಯೆನೆಪೋಯ ನರ್ಸಿಂಗ್ ಕಾಲೇಜಿನ ಡೀನ್ ಡಾ. ಲೀನಾ ಕೆ.ಸಿ. ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಪೂರೈಸಿದ್ದರು. ಯೆನೆಪೋಯ ಪರಿಗಣಿತ ವಿ.ವಿ.ಯ ಯೂತ್ ರೆಡ್‌ಕ್ರಾಸ್ ನೋಡಲ್
ಅಧಿಕಾರಿಯಾಗಿರುವ ನಿತ್ಯಶ್ರೀ ಬಿ.ವಿ. ಇವರು ಸುಳ್ಯದ ನಿವೃತ್ತ ಸರ್ವೆ ಮೇಲ್ವಿಚಾರಕ ವಿಠಲ ಬಿ.ಕೆ.- ರುಕ್ಮಿಣಿ ಬಿ.ವಿ. ದಂಪತಿ ಪುತ್ರಿ .ಗಣೇಶ್ ಮಾಣಿಬೆಟ್ಟು ಅವರ ಪತ್ನಿ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles