ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಭಾಗಿತ್ವದಲ್ಲಿ ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಿದ ಕುತ್ಲುರು ಸರಕಾರಿ ಶಾಲೆಗೆ ಬಿಎಎಸ್ಎಫ್ ಇಂಡಿಯಾ ಲಿಮಿಟೆಡ್ ಸಿಎಸ್ಆರ್ ನಿಧಿ ಯಿಂದ ನೀಡಲಾಗಿರುವ ನೋಟ್ ಬುಕ್ ಹಸ್ತಾಂತರ ಹಾಗೂ ಶಾಲಾ ಮಕ್ಕಳ ಬ್ಯಾಂಡ್ ಸೆಟ್ ನ ಸಮವಸ್ತ್ರ ವಿತರಣಾ ಕಾರ್ಯಕ್ರಮ ಮೇ 23 ರಂದು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಪತ್ರಿಕಾ ಭವನ ದಲ್ಲಿ ನಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲಾ ಪ್ರಭಾರ ಜಿಲ್ಲಾಧಿಕಾರಿ ಡಾ. ಆನಂದ್ ನೋಟ್ ಬುಕ್ ಹಸ್ತಾಂತರ ಮಾಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಧಿಕಾರಿ ಯತೀಶ್ ಎನ್ ಶಾಲಾ ಮಕ್ಕಳ ಬ್ಯಾಂಡ್ ಸೆಟ್ ನ ಸಮವಸ್ತ್ರ ವಿತರಣೆ ಮಾಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಬಿಎಎಸ್ ಎಫ್ ಇಂಡಿಯಾ ಲಿಮಿಟೆಡ್ ಸೈಟ್ ಡೈರೆಕ್ಟರ್ ಶ್ರೀನಿವಾಸ್ ಪ್ರಾಣೇಶ್, ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಸಂತೋಷ್ ಪೈ, ದಕ್ಷಿಣ ಕನ್ನಡ ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ, ಕುತ್ಲುರು ಸರಕಾರಿ ಶಾಲೆಯ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್ ಮುಖ್ಯ ಅತಿಥಿ ಗಳಾಗಿ ಭಾಗವಹಿಸಲಿದ್ದಾರೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ ಬಿ ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಗೌರವ ಉಪಸ್ಥಿತರಿಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇ0ದ್ರ ಕುಂದೇಶ್ವರ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
