24.2 C
Karnataka
Thursday, June 11, 2026

ರಸ್ತೆಗಳ ಡಿವೈಡರ್‌ ಗಳಿಗೆ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಲು ಸೂಚನೆ

ಮಂಗಳೂರು: ರಸ್ತೆಗಳ ಡಿವೈಡರ್‌ ಗಳಿಗೆ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಲು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಮುಂಗಾರು ಮಳೆ ಚುರುಕುಗೊಂಡಿದ್ದು, ಮಳೆಗಾಲದ ಸಂದರ್ಭದಲ್ಲಿ ಗಾಳಿ ಮತ್ತು ಮಳೆಯ ಪರಿಣಾಮದಿಂದ ರಸ್ತೆಗಳಲ್ಲಿ ವಿಶೇಷವಾಗಿ ರಸ್ತೆಗಳ ಡಿವೈಡರ್‍ಗಳಿಗೆ ಅಳವಡಿಸಲಾಗಿರುವ ಪ್ಲೆಕ್ಸ್, ಬ್ಯಾನರ್ ಮತ್ತು ಬಂಟಿಂಗ್‍ಗಳು ಕಳಚಿ ವಾಹನಗಳ ಮೇಲೆ ಮತ್ತು ಪಾದಚಾರಿಗಳ ಮೇಲೆ ಬೀಳುವುದರಿಂದ ಅಪಘಾತಗಳು, ಜೀವಹಾನಿಗಳು ಸಂಭವಿಸುವ ಸಾಧ್ಯತೆ ಇರುತ್ತದೆ.
ಸಾರ್ವಜನಿಕರ ಸುರಕ್ಷತೆ ಮತ್ತು ಸಂಭವನೀಯ ಅಪಘಾತಗಳನ್ನು ತಡೆಗಟ್ಟುವ ಉದ್ದೇಶದಿಂದ, ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿ ರಸ್ತೆಗಳಲ್ಲಿ ವಿಶೇಷವಾಗಿ ಡಿವೈಡರ್‍ಗಳಿಗೆ ಅಳವಡಿಸಿರುವ ಅಪಾಯಕಾರಿ/ ಅನಧಿಕೃತ ಎಲ್ಲಾ ಪ್ಲೆಕ್ಸ್, ಬ್ಯಾನರ್ ಹಾಗೂ ಬಂಟಿಂಗ್‍ಗಳನ್ನು ಮೊದಲ ಆದ್ಯತೆ ಮೇರೆಗೆ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಹಾಗೂ ಕೈಗೊಂಡ ಕ್ರಮಗಳ ಕುರಿತು ಛಾಯಾಚಿತ್ರ ಸಹಿತ ವರದಿಯನ್ನು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಸಲ್ಲಿಸಬೇಕು. ಇನ್ನೂ ಮುಂದೆಯೂ ರಸ್ತೆಗಳ ಮಧ್ಯ ಡಿವೈಡರ್‍ಗಳಿಗೆ ಅನಧಿಕೃತ ಪ್ಲೆಕ್ಸ್, ಬ್ಯಾನರ್ ಹಾಗೂ ಬಂಟಿಂಗ್‍ಗಳನ್ನು ಅಳವಡಿಸದಂತೆ ಕ್ರಮವಹಿಸಬೇಕು. ಅಳವಡಿಸಿದಲ್ಲಿ, ತಕ್ಷಣ ತೆರವುಗೊಳಿಸಿ ಅವರ ಮೇಲೆ ನಿಯಮಾನುಸಾರ ಕಾನೂನು ಕ್ರಮ ಜರುಗಿಸಬೇಕು.
ಈ ಆದೇಶದ ಅನುಷ್ಠಾನದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಅಥವಾ ವಿಳಂಬ ಕಂಡುಬಂದಲ್ಲಿ, ಅಥವಾ ಅಪಘಾತ/ ಅವಘಡ ಸಂಭವಿಸಿದಲ್ಲಿ, ಸಂಬಂಧಪಟ್ಟ ಅಧಿಕಾರಿಗಳನ್ನೆ ನೇರ ಹೊಣೆಗಾರರನ್ನಾಗಿಸಿ, ವಿಪತ್ತು ನಿರ್ವಹಣಾ ಕಾಯ್ದೆಯಡಿ ಹಾಗೂ ನಿಯಮಾನುಸಾರ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles