20.6 C
Karnataka
Wednesday, November 27, 2024

ಡಿ.2ರಂದು ಉಪಲೋಕಾಯುಕ್ತರಿಂದ ಸಾರ್ವಜನಿಕ ದೂರು ಸ್ವೀಕಾರ, ವಿಚಾರಣೆ

ಮಂಗಳೂರು: ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಡಿಸೆಂಬರ್ 2 ಮತ್ತು 3ರಂದು ಮಂಗಳೂರಿನಲ್ಲಿ ಸಾರ್ವಜನಿಕ ದೂರುಗಳ ವಿಚಾರಣೆ ನಡೆಸಲಿದ್ದಾರೆ.
ಡಿ.2ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ, ಮಧ್ಯಾಹ್ನ 2:30 ರಿಂದ ಸಂಜೆ 5 ಗಂಟೆಯ ವರೆಗೆ, ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ, ಸಾರ್ವಜನಿಕರ ಕುಂದು ಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆಯನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಯಾರಿಗಾದರೂ ಸರ್ಕಾರಿ ಅಧಿಕಾರಿ/ನೌಕರರಿಂದ ಕಾನೂನು ರೀತಿಯ ಆಗಬೇಕಾದ ಕೆಲಸದಲ್ಲಿ ವಿಳಂಬ ಆಗಿದ್ದರೆ ಅಥವಾ ಅಧಿಕಾರಿ/ನೌಕರರು ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ತೊಂದರೆ ಕೊಡುವುದು ಅಥವಾ ಇನ್ನಾವುದೇ ತರಹದ ಭ್ರಷ್ಟಚಾರ ಮತ್ತು ದುರಾಡಳಿತದಲ್ಲಿ ತೊಡಗಿದ್ದರೆ, ಅದರಿಂದ ತೊಂದರೆಗೊಳಗಾದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ಉಪಲೋಕಯುಕ್ತರಿಗೆ ಸಲ್ಲಿಸಬಹುದು.

ಡಿಸೆಂಬರ್ 3ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1:30 ಗಂಟೆಯವರೆಗೆ ಮತ್ತು ಮಧ್ಯಾಹ್ನ 2:30 ರಿಂದ ಸಂಜೆ 4:30ರ ವರೆಗೆ, ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಲೋಕಾಯುಕ್ತ ಸಂಸ್ಥೆಯಲ್ಲಿ ಈಗಾಗಲೇ ದಾಖಲಾಗಿರುವ, ತನಿಖೆ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳಲ್ಲಿ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ವಿಚಾರಣೆ ನಡೆಸಲಾಗುತ್ತದೆ. 

 ಜಿಲ್ಲೆಯ ಸಾರ್ವಜನಿಕರು ಅಂದು ನೇರವಾಗಿ ಜಿಲ್ಲಾ ಪಂಚಾಯತ್ ಸಭಾಂಗಣಕ್ಕೆ ಆಗಮಿಸಿ ಉಪಲೋಕಾಯುಕ್ತರಿಗೆ ತಮ್ಮ ಅಹವಾಲು ಸಲ್ಲಿಸಬಹುದು. ದೂರುದಾರರು ಮತ್ತು ಎದುರುದಾರರು ನಿಗದಿತ ಸಮಯದಲ್ಲಿ ಹಾಜರಿರುವಂತೆ ಕರ್ನಾಟಕ ಲೋಕಾಯುಕ್ತ ಪೆÇಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles