20.3 C
Karnataka
Thursday, November 14, 2024

ಭತ್ತ ಬೆಳೆ ವಿಮೆ ಯೋಜನೆ ನೋಂದಣಿ

ಮಂಗಳೂರು: ಮಂಗಳೂರು ತಾಲೂಕಿನಲ್ಲಿ ಮುಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಮಳೆಯಾಶ್ರಿತ ಭತ್ತವನ್ನು ಗ್ರಾಮ ಪಂಚಾಯತ್ ಮಟ್ಟದಲ್ಲಿ ಬೆಳೆ ವಿಮೆ ಯೋಜನೆಯಡಿ ನೋಂದಣಿಗಾಗಿ ಅಧಿಸೂಚಿಸಲಾಗಿದೆ

ಅಧಿಸೂಚಿತ ಬೆಳೆಯ ವಿವರ:
ಅಧಿಸೂಚಿತ ಬೆಳೆ – ಭತ್ತ(ಮಳೆಯಾಶ್ರಿತ), ಅಧಿಸೂಚಿತ ಘಟಕ – ಮಂಗಳೂರು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್‍ಗಳು ಹಾಗೂ ಸ್ಥಳೀಯ ಆಡಳಿತ ಸಂಸ್ಥೆಗಳು, ವಿಮಾ ಮೊತ್ತ – ರೂ. 63,750, ವಿಮಾ ಕಂತಿನ ದರ ರೂ. 1275(2%) (516 ಪ್ರತಿ ಎಕ್ರೆಗೆ).

     ರೈತರು ಬೆಳೆ ವಿಮೆ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ಆಗಸ್ಟ್ 16 ಕೊನೆಯ ದಿನ. ಬೆಳೆ ಸಾಲ ಪಡೆಯದ ರೈತರು ತಮಗೆ ಪಾಲ್ಗೊಳ್ಳಲು ಇಷ್ಟವಿದ್ದಲ್ಲಿ ಅಥವಾ ಇಷ್ಟವಿಲ್ಲದಿದ್ದಲ್ಲಿ ಅನಿರ್ದಿಷ್ಟವಾದ ನಮೂನೆಯಲ್ಲಿ ತಮ್ಮ ಬೆಳೆ ಸಾಲ ಪಡೆದಿರುವ ಬ್ಯಾಂಕ್ ಶಾಖೆಯಲ್ಲಿ ಸಲ್ಲಿಸಬೇಕು. ರೈತರು ಪಹಣಿ ಪತ್ರ, ಖಾತೆ ಪಾಸ್ ಪುಸ್ತಕ, ಕಂದಾಯ ರಶೀದಿ ಮತ್ತು ಆಧಾರ್ ಸಂಖ್ಯೆಗಳನ್ನು ಒದಗಿಸಿ ಸ್ಥಳೀಯ ಸಾಲ ನೀಡುವ ವಾಣಿಜ್ಯ ಅಥವಾ ಗ್ರಾಮೀಣ ಮಟ್ಟದ ವ್ಯವಸಾಯ ಸೇವಾ ಸಹಕಾರ ಸಂಘಗಳು, ಸಾರ್ವಜನಿಕ ಸೇವಾ ಕೇಂದ್ರ, ವಿಮಾಸಂಸ್ಥೆಗಳನ್ನು ಸಂಪರ್ಕಿಸಿ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬೇಕು.

ರೈತರಿಗೆ ಪ್ರಯೋಜನಗಳು
ಅಧಿಸೂಚಿತ ಘಟಕದಲ್ಲಿ ಸಂಭವಿಸುವ ಹವಮಾನ ವೈಪರೀತ್ಯಗಳಾದ ಹೆಚ್ಚಿನ ಮಳೆ, ನೆರೆ, ಪ್ರವಾಹದಿಂದ ಬೆಳೆ ಮುಳುಗಡೆ, ದೀರ್ಘಕಾಲ ತೇವಾಂಶ ಕೊರತೆ, ತೀವ್ರ ಬರಗಾಲ ಮುಂತಾದವುಗಳಿಂದ ಬಿತ್ತನೆಯಾದ ಒಂದು ತಿಂಗಳಿನಿಂದ ಕಟಾವಿನ 15 ದಿನ ಪೂರ್ವದವರೆಗಿನ ಬೆಳೆಯಲ್ಲಿ ಬೆಳೆ ನಷ್ಟವಾಗಿ ನಿರೀಕ್ಷಿತ ಇಳುವರಿಯು, ಪ್ರಾರಂಭಿಕ ಇಳುವರಿಯ ಶೇಕಡ 50 ಕ್ಕಿಂತ ಕಡಿಮೆ ಇದ್ದಲ್ಲಿ, ಅಥವಾ ಬೆಳೆ ನಷ್ಟ ಕಂಡು ಬಂದಲ್ಲಿ ಮುಂಚಿತವಾಗಿ ವಿಮೆ ಮಾಡಿದ ರೈತರಿಗೆ ಶೇಕಡ 25 ರಷ್ಟು ಬೆಳೆ ನಷ್ಟ ಪರಿಹಾರ ದೊರೆಯಲಿದೆ. ಬೇಳೆ ಕಟಾವಿನ ವಾಸ್ತವಿಕ ಇಳುವರಿ ಆಧಾರದ ಮೇಲೆ ಅಂತಿಮ ಬೆಳೆ ನಷ್ಟ ಪರಿಹಾರದಲ್ಲಿ ಹೊಂದಾಣಿಕೆ.

    ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂಕುಸಿತ, ಬೆಳೆ ಮುಳುಗಡೆ, ಮೇಘಸ್ಪೋಟ ಹಾಗೂ ಗುಡುಗು ಮಿಂಚುಗಳಿಂದ ಉಂಟಾಗುವ ಬೆಂಕಿ ಅವಘಡಗಳಿಂದ ಬೆಳೆ ಹಾನಿಯಾದಲ್ಲಿ ವೈಯಕ್ತಿಕವಾಗಿ ಪರಿಹಾರ ದೊರೆಯಲಿದ್ದು, ಅಧಿಸೂಚಿಸಿದ ಘಟಕದಲ್ಲಿ ಶೇಕಡ 25 ಕ್ಕಿಂತ ಹೆಚ್ಚಿನ ಪ್ರದೇಶದಲ್ಲಿ ಬೆಳೆ ನಷ್ಟವಾದಲ್ಲಿ, ವಿಮೆಗೆ ಒಳಪಟ್ಟ ಬೆಳೆ ನಷ್ಟವಾದ ರೈತರಿಗೆ ಮಾದರಿ ಸಮೀಕ್ಷೆಗೆ ಅನುಗುಣವಾಗಿ ಪರಿಹಾರ ದೊರೆಯಲಿದೆ.

   ಕಟಾವಿನ ನಂತರದ ಬೆಳೆಯನ್ನು ಜಮೀನಿನಲ್ಲಿ ಒಣಗಲು ಬಿಟ್ಟ ಸಂದರ್ಭದಲ್ಲಿ (14 ದಿನಗಳ ಒಳಗೆ) ಚಂಡಮಾರುತ, ಅಕಾಲಿಕ ಮಳೆಯಿಂದ ಬೆಳೆ ನಾಶವಾದಲ್ಲಿ ವೈಯಕ್ತಿಕವಾಗಿ ಪರಿಹಾರ ದೊರೆಯಲಿದೆ. ಮೇಲಿನ ಎರಡು ಸಂದರ್ಭದಲ್ಲೂ ರೈತರು ವಿಮಾ, ಆರ್ಥಿಕ ಸಂಸ್ಥೆ ಅಥವಾ ಕೃಷಿ ತೋಟಗಾರಿಕಾ ಇಲಾಖೆ 72 ಗಂಟೆಗಳ ಒಳಗಾಗಿ ಬೆಳೆ ಹಾನಿ ವಿವರದ ಮಾಹಿತಿ ಒದಗಿಸಬೇಕು.

   ಮಳೆ ಅಭಾವ ಅಥವಾ ಪ್ರತಿಕೂಲ ಹವಾಮಾನ ಪರಿಸ್ಥಿತಿಯಲ್ಲಿ ಅಧಿಸೂಚಿತ ಘಟಕದಲ್ಲಿ 75ರಷ್ಟು ಬಿತ್ತನೆ ಯಾಗದಿದ್ದಲ್ಲಿ ವಿಮೆ ಮಾಡಿಸಿದ ರೈತರಿಗೆ ವಿಮಾಮುತ್ತದ ಶೇಕಡ 25 ರಷ್ಟು ಪರಿಹಾರ ದೊರೆಯಲಿದೆ.

   ಬೆಳೆ ಸಾಲ ಪಡೆದ ರೈತರು ಬೆಳೆ ವಿಮೆಯಲ್ಲಿ ಭಾಗವಹಿಸಲು ಇಚ್ಛಿಸದಿದ್ದಲ್ಲಿ ಬ್ಯಾಂಕಿನ ವ್ಯವಸ್ಥಾಪಕರಿಗೆ ಕೊನೆಯ ದಿನಾಂಕದ ಒಂದು ವಾರದ ಮೊದಲು ಈ ಕುರಿತು ಮುಚ್ಚಳಿಕೆ ಪತ್ರ ನೀಡಿ ಬೆಳೆ ವಿಮೆಯಿಂದ ಕೈ ಬಿಡಲು ಕೋರಲಾಗುವುದು ಎಂದು ಮಂಗಳೂರು ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles