ಬಿಜೆಪಿ : ವಿಶೇಷ ಕಾರ್ಯಕಾರಿಣಿ ಹಾಗೂ ಅಭಿನಂದನಾ ಸಭೆ
ಮ೦ಗಳೂರು: ಭಾರತೀಯ ಜನತಾ ಪಾರ್ಟಿಯ ಸಂಘಟನಾ ಪರ್ವದ ಭಾಗವಾಗಿ ನಗರದ ಡೊಂಗರಕೇರಿಯ ಸುಧೀಂದ್ರ ಸಭಾಭವನದಲ್ಲಿ ನಡೆದ ವಿಶೇಷ ಕಾರ್ಯಕಾರಿಣಿ ಹಾಗೂ ಅಭಿನಂದನಾ ಸಭೆಯಲ್ಲಿ ಮಂಗಳೂರು ನಗರ ದಕ್ಷಿಣ ಮಂಡಲದ ಅಧ್ಯಕ್ಷರಾಗಿ ರಮೇಶ್ ಕಂಡೆಟ್ಟು ಹಾಗೂ ಮಂಡಲದ ವಿವಿಧ ಪದಾಧಿಕಾರಿಗಳು, ಬೂತ್ ಅಧ್ಯಕ್ಷರುಗಳು ಅಧಿಕೃತವಾಗಿ ಜವಾಬ್ದಾರಿ ವಹಿಸಿಕೊಂಡರು.
ನಂತರ ಎಲ್ಲರನ್ನು ಅಭಿನಂದಿಸಿದ ಶಾಸಕ ಡಿ.ವೇದವಾಸ್ ಕಾಮತ್ ರವರು...
ಫೆಬ್ರವರಿ ತಿಂಗಳಿಂದ ನಿರಂತರ “ಸಾವಯವ ಸಂತೆ“ ಆಯೋಜನೆ
ಮಂಗಳೂರು: ವಿಷಮುಕ್ತ ಆಹಾರವನ್ನು ನಾವೆಲ್ಲರೂ ಸೇವಿಸಬೇಕೆಂಬ ಒತ್ತಾಸೆಯಿಂದ ನಮ್ಮ ಸಾವಯವ ಕೃಷಿಕ ಗ್ರಾಹಕ ಬಳಗ ಅನೇಕ ಜನಶಿಕ್ಷಣದೊಂದಿಗೆ ನೇರವಾಗಿ ಕರ್ನಾಟಕದ ವಿವಿಧ ಸಾವಯವ ರೈತರ ಉತ್ಪನ್ನಗಳನ್ನು ಮಾರಾಟ ಮಾಡುವ ಸಾವಯವ ಸಂತೆ ಯನ್ನು 2025 ಫೆಬ್ರವರಿ ತಿಂಗಳಿನಿಂದ ನಿರಂತರ ಪ್ರತೀ ತಿಂಗಳ ಮೊದಲ ಶನಿವಾರ ಮತ್ತು ಭಾನುವಾರ ಮಂಗಳೂರಿನನಂತೂರು ಶ್ರೀಭಾರತೀ ಸಮೂಹ ಶಿಕ್ಷಣ ಸಂಸ್ಥೆಯ...
ಯಕ್ಷ ಸಾಧಕರಿಗೆ ಪೂಲ ವಿಠಲ ಶೆಟ್ಟಿ ಪ್ರಶಸ್ತಿ
ಮಂಗಳೂರು: ಕಟೀಲು ಮೇಳದ ಭಾಗವತ ಅಂಡಾಲ ದೇವಿ ಪ್ರಸಾದ ಆಳ್ವ ಹಾಗೂ ಬಣ್ಣದ ವೇಷಧಾರಿ ಸುರೇಶ ಕುಪ್ಪೆಪದವು ಅವರಿಗೆ ಈ ವರ್ಷದ "ಪೂಲ ವಿಠ್ಠಲ ಶೆಟ್ಟಿ ಪ್ರಶಸ್ತಿ " ಯನ್ನು ಪಡುಬಿದ್ರೆ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಲ್ಲಿ ನಡೆದ ಪಡುಬಿದ್ರೆ ಕಲ್ಲಟೆಗುತ್ತು ಮೂಲ ಕುಟುಂಬಸ್ಥರಾದ ರಾಧಾ ವಿಠ್ಠಲ ಶೆಟ್ಟಿ ಮತ್ತು ಮಕ್ಕಳ ಶ್ರೀ...
ಜ.14ರಿ೦ದ ಶ್ರೀ ಕ್ಷೇತ್ರ ಕದ್ರಿಯಲ್ಲಿ ವರ್ಷಾವಧಿ ಜಾತ್ರೆ
ಮ೦ಗಳೂರು: ಇತಿಹಾಸ ಪ್ರಸಿದ್ದ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆಯು ಜ.14ರಿ೦ದ ಆರಂಭಗೊಳ್ಳಲಿದೆ.ಜನವರಿ 24ರ ವರೆಗೆ ನಡೆಯಲಿರುವ ವಾರ್ಷಿಕ ಮಹೋತ್ಸವವು ತಾ.13ರಂದು ರಾತ್ರಿ ಮಹಾಪೂಜೆಯ ಬಳಿಕ ಮುಹೂರ್ತ ಬಲಿ, ದೇವರ ಪ್ರಾರ್ಥನೆಯೊಂದಿಗೆ ತಂತ್ರಿಗಳ ಯಾಗಶಾಲಾ ಪ್ರವೇಶದೊಂದಿಗೆ ಪ್ರಾರಂಭವಾಗುವುದು.ಮಂಗಳವಾರ ಮುಂಜಾನೆ ತೀರ್ಥ ಸ್ನಾನ ಆರಂಭಗೊಂಡು, ಕದ್ರಿ ಶ್ರೀ ಯೋಗೀಶ್ವರ ಮಠಾಧಿಪತಿ ಶ್ರೀ ರಾಜಾ ನಿರ್ಮಲ್...
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಒಂದೇ ದಿನದಲ್ಲಿ 7,710 ಪ್ರಯಾಣಿಕರನ್ನು ನಿರ್ವಹಿಸಿ ಹೊಸ ದಾಖಲೆ
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಒಂದೇ ದಿನದಲ್ಲಿ ಅತಿ ಹೆಚ್ಚು ಪ್ರಯಾಣಿಕರನ್ನು ನಿರ್ವಹಿಸಿದ ದಾಖಲೆಯನ್ನು ನಿರ್ಮಿಸಿದೆ. 2025 ರ ಜನವರಿ 12 ರಂದು 7,710 ಪ್ರಯಾಣಿಕರ ಆಗಮನ ಮತ್ತು ನಿರ್ಗಮನವನ್ನು ವಿಮಾನ ನಿಲ್ದಾಣವು ನಿರ್ವಹಿಸಿತು, ಇದು 31 ಅಕ್ಟೋಬರ್ 2020 ರ ವಿಮಾನ ನಿಲ್ದಾಣದ ವಾಣಿಜ್ಯ ಕಾರ್ಯಾಚರಣೆ ದಿನಾಂಕ (ಸಿಒಡಿ) ನಂತರ ಅತಿ...
ವಸತಿ ಶಾಲೆಗಳ ಪ್ರವೇಶ: ಅರ್ಜಿ ಆಹ್ವಾನ
ಮಂಗಳೂರು: ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ ಡಾ. ಬಿ.ಆರ್. ಅಂಬೇಡ್ಕರ್/ ಇಂದಿರಾ ಗಾಂಧಿ/ ನಾರಾಯಣ ಗುರು 2025-26ನೇ ಸಾಲಿನ 6ನೇ ತರಗತಿ ಪ್ರವೇಶಾತಿಗಾಗಿ ಮಂಗಳೂರಿನ ನೆಲ್ಲಿತೀರ್ಥ, ಗುರುಪುರ ಮುಲ್ಕಿಯ ಕಮ್ಮಾಜೆ, ಮೂಡಬಿದ್ರೆಯ ಕಲ್ಲಬೆಟ್ಟು, ಬೆಳ್ತಂಗಡಿಯ ಮಚ್ಚಿನ, ಮುಂಡಾಜೆ, ಹೊಸಂಗಡಿ ಬಂಟ್ವಾಳದ ವಗ್ಗ, ಪುಂಜಾಲಕಟ್ಟೆ, ಪುತ್ತೂರಿನ...
ಎಂಪಿ ಲಾಡ್ಸ್ ಅನುದಾನಡಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ
ಮಂಗಳೂರು: ಪುತ್ತೂರು ತಾಲೂಕಿನ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸೋಮವಾರ ಚಾಲನೆ ನೀಡಿದ್ದಾರೆ.
ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಡಿ ಅಂದಾಜು 5 ಲಕ್ಷ ರೂ. ವೆಚ್ಚದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಪುತ್ತೂರು ಕಸಬಾ ಪರ್ಲಡ್ಕ ಸರ್ಕಾರಿ ಕಾಂಪೌಂಡ್ ಒಳಗಿರುವ ತೋಡಿಗೆ ಚರಂಡಿ ವ್ಯವಸ್ಥೆ ಹಾಗೂ ಸ್ಲ್ಯಾಬ್...
ಜ.19ರಂದು ಮಂಗಳೂರಿನಲ್ಲಿ “ವಿಶಿಷ್ಟರಿಗಾಗಿ ವಿಶಿಷ್ಟ ಮೇಳ”
ಮಂಗಳೂರು: ಸೇವಾ ಭಾರತಿ(ರಿ) ಮಂಗಳೂರು ಕಳೆದ 33 ವರ್ಷಗಳಿಂದ ದಿವ್ಯಾಂಗರ ಜೀವನ ಸ್ತರ ಸುಧಾರಿಸಲು ಶ್ರಮಿಸುತ್ತಿದೆ. ತನ್ನ ಅಂಗಸಂಸ್ಥೆಗಳ ಮೂಲಕ ಅವರಿಗೆ ಅವಶ್ಯವಿರುವ ಶಿಕ್ಷಣ, ತರಬೇತಿ, ಚಿಕಿತ್ಸೆ ಇತ್ಯಾದಿ ಈ ಪೈಕಿ 1998ರಲ್ಲಿ ಸೌಕರ್ಯಗಳನ್ನು ಒದಗಿಸಿಕೊಟ್ಟು ತನ್ನ ಸೇವಾ ವ್ಯಾಪ್ತಿಯನ್ನು ವಿಸ್ತರಿಸುತ್ತಿದೆ. ಆರಂಭವಾದ “ಆಶಾಜ್ಯೋತಿ"ಯೂ ಒಂದು. ಆಶಾಜ್ಯೋತಿಯು ದಿವ್ಯಾಂಗರು ಮತ್ತು ಅವರ ಹೆತ್ತವರ ಒಂದು...
ಜ.17ರಂದು “ಕಣ್ಣಾಮುಚ್ಚೆ ಕಾಡೇ ಗೂಡೇ“ ಸಿನಿಮಾ ತೆರೆಗೆ
ಮಂಗಳೂರು: ಡಾರ್ಲಿಂಗ್ ಪ್ರೊಡಕ್ಷನ್ಸ್ ಬ್ಯಾನರಿನಲ್ಲಿ ತಯಾರಾಗಿರುವ “ಕಣ್ಣಾಮುಚ್ಚೆ ಕಾಡೇ ಗೂಡೇ“ ಸಿನಿಮಾ ಜನವರಿ 17ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ಮಾಪಕ ವೀರೇಶ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.”ಸಿನಿಮಾದಲ್ಲಿ ಸಸ್ಪೆನ್ಸ್ ಕಥಾ ಹಂದರದ ಜೊತೆಗೆ ತಾಯಿಯ ಸೆಂಟಿಮೆಂಟ್ ಇದೆ. ನವಿರಾದ ಪ್ರೇಮಕತೆ, ಸುಂದರವಾದ ತಾಣಗಳಲ್ಲಿ ಸಿನಿಮಾ ಚಿತ್ರೀಕರಣಗೊಂಡಿದೆ. ಸಿನಿಮಾ ಕನ್ನಡಿಗರಿಗೆ ಖಂಡಿತ ಇಷ್ಟವಾಗುತ್ತದೆ. ನಾನು ಸಿನಿಮಾದಲ್ಲಿ...
ರಾಷ್ಟ್ರೀಯ ಯುವ ದಿನಾಚರಣೆ
ಮಂಗಳೂರು : ಮಾನವೀಯ ಸೇವೆಯಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಯುವ ಜನತೆ ಸೇವಾ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಸ್ವಾಮಿ ವಿವೇಕಾನಂದರ ಸಂದೇಶ ಸ್ಪೂರ್ತಿಯಾಗಿದೆ ಎಂದು ಶಾಸಕ ಡಿ,.ವೇದವ್ಯಾಸ ಕಾಮತ್ ಹೇಳಿದರು.ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕ, ಯೂತ್ ರೆಡ್‌ಕ್ರಾಸ್ ಮಂಗಳೂರು ವಿ.ವಿ. ಮತ್ತು ಯೇನೆಪೊಯ ಪರಿಗಣಿತ ವಿ.ವಿ. ವತಿಯಿಂದ ನಗರದ ವಿ.ವಿ. ಕಾಲೇಜಿನ ರವೀಂದ್ರ...








