ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ತುಳು ಸಿನಿಮಾಕ್ಕೆ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ

0
ಮಂಗಳೂರು: ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಜೈ ತುಳು ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯಗೊಂಡದೆ.ಇನ್ನು ಮೂರನೇ ಹಂತದ ಚಿತ್ರೀಕರಣ ಜನವರಿಯಲ್ಲಿ ನಡೆಯಲಿದೆ. "ಜೈ" ಸಿನಿಮಾ ತುಳುವಿನಲ್ಲಿ ಬಿಗ್ ಬಜೆಟ್ ನ ಸಿನಿಮಾ ಆಗಿದ್ದು, ಸಿನಿಮಾಕ್ಕೆ ಮಂಗಳೂರನ್ನು ಕೇಂದ್ರೀಕರಿಸಿ ವಿವಿಧ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದೆ. ಮುಖ್ಯವಾಗಿ ಕುತ್ತಾರ್, ದಂಬೇಲ್, ಮರಕಡ,...

ಕರಾವಳಿ ಉತ್ಸವ: ಕಲಾತಂಡಗಳಿಂದ ಅರ್ಜಿ ಆಹ್ವಾನ

0
ಮಂಗಳೂರು: ಕರಾವಳಿ ಉತ್ಸವವು ಡಿಸೆಂಬರ್ 21ರಿಂದ ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗಿದ್ದು, ಕರಾವಳಿ ಉತ್ಸವದ ವಿವಿಧ ವೇದಿಕೆಗಳಲ್ಲಿ ಸಾಂಸ್ಕ್ರತಿಕ ಕಾರ್ಯಕ್ರಮಗಳನ್ನು ನೀಡಲು ಜಿಲ್ಲೆಯ ವಿವಿಧ ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಕಲಾತಂಡಗಳು ಅರ್ಜಿಗಳನ್ನು ಸಲ್ಲಿಸುವಾಗ ತಮ್ಮ ಕಲಾಪ್ರಕಾರ, ಈ ಹಿಂದೆ ನೀಡಿರುವ ಕಾರ್ಯಕ್ರಮಗಳ ಬಗ್ಗೆ ವಿವರ,ಛಾಯಚಿತ್ರಗಳು ಈ ಬಗ್ಗೆ ಪ್ರತಿಕಾ ವರದಿಗಳನ್ನೊಳಗೊಂಡ ದಾಖಲೆಗಳೊಂದಿಗೆ ಅರ್ಜಿಯನ್ನು ಸಹಾಯಕ ನಿರ್ದೇಶಕರು,...

ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

0
ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಡಿಸೆಂಬರ್ 23 ಮತ್ತು 24ರಂದು ದ.ಕ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಡಿಸೆಂಬರ್ 23ರಂದು ಸೋಮವಾರ ಬೆಳಿಗ್ಗೆ 10:15 - ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನ, 10:45 - ಮಂಗಳೂರು ಬೀದಿಬದಿ ವ್ಯಾಪಾರಸ್ಥರ ವಲಯ ಉದ್ಘಾಟನೆ,...

ಕರಂಬಾರು ಪ್ರಾಥಮಿಕ ಶಾಲಾ ಕ್ರೀಡಾಕೂಟ

0
ಬಜ್ಪೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕರಂಬಾರು ಇದರ ವಾರ್ಷಿಕ ಕ್ರೀಡಾಕೂಟ ಮರವೂರು ಮಾಪ್ಸ್ ಕಾಲೇಜು ಕ್ರೀಡಾಂಗಣದಲ್ಲಿ ಜರುಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು SDMC ಅಧ್ಯಕ್ಷರಾದ ಗುಣಪಾಲ್ ದೇವಾಡಿಗ ವಹಿಸಿದ್ದರು. ಮಾಪ್ಸ್ ಕಾಲೇಜಿನ ಚೆರ್ಮನ್ ದಿನೇಶ್ ಕುಮಾರ್ ಆಳ್ವ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸತೀಶ್ ದೇವಾಡಿಗ (ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು...

ಕಾಸ್ಮೋಪೋಲಿಟನ್ ಕ್ಲಬ್‌: ಸ್ನೂಕರ್, ಬಿಲಿಯರ್ಡ್ಸ್‌ ವಿಜೇತರಿಗೆ ಬಹುಮಾನ ವಿತರಣೆ

0
ಮಂಗಳೂರು: ಮಂಗಳೂರಿನ ಕಾಸ್ಮೋಪೋಲಿಟನ್ ಕ್ಲಬ್ ಆಯೋಜಿಸಿದ್ದ ದ.ಕ ಮತ್ತು ಉಡುಪಿ ಜಿಲ್ಲೆಗಳ ಅಂತರ್ ಜಿಲ್ಲಾ ಸ್ನೂಕರ್ ಮತ್ತು ಬಿಲಿಯರ್ಡ್ಸ್ ಚಾಂಪಿಯನ್‌ಶಿಪ್‌ ಪಂದ್ಯಾಟಗಳ ಬಹುಮಾನ ವಿತರಣಾ ಸಮಾರಂಭ ಶನಿವಾರ ಸಂಜೆ ಕ್ಲಬ್‌ನ ಸಭಾಂಗಣದಲ್ಲಿ ನಡೆಯಿತು. ಸ್ನೂಕರ್‍‌ ಪಂದ್ಯಾಟದಲ್ಲಿ ಜೈಕಿಶನ್‌ ವಿಜಯಿಯಾಗಿದ್ದು, ರನ್ನರ್‍‌ ಅಪ್‌ ಆಗಿ ರವೀಂದ್ರ ಶೆಟ್ಟಿ ಹಾಗೂ ಅತ್ಯಧಿಕ ಬ್ರೇಕ್‌ ಪಡೆದವರಾಗಿ ಜೈಕಿಶನ್‌ ಬಹುಮಾನಗಳನ್ನು ಪಡೆದರು.ಬಿಲಿಯರ್ಡ್ಸ್...

ಅಮ್ಮ ಕಲಾವಿದೆರ್ ತಂಡದ “ಅಮ್ಮೆರ್” ನಾಟಕದ ನೂರರ ಸಂಭ್ರಮ

0
ಮಂಗಳೂರು: ಅಮ್ಮ ಕಲಾವಿದೆರ್ ತಂಡದ "ಅಮ್ಮೆರ್" ನಾಟಕದ ನೂರರ ಸಂಭ್ರಮ ಮ೦ಗಳವಾರ ಮಂಗಳೂರಿನ ಪುರಭವನದಲ್ಲಿ ಜರಗಲಿದೆ. ಶಿವಾನಂದ ಶೆಟ್ಟಿ ಮಂಗಲ್ಪಾಡಿ ಸಾರಥ್ಯದಲ್ಲಿ,'ಲಯನ್ ಕಿಶೋರ್ ಡಿ. ಶೆಟ್ಟಿ' ಇವರ ಸಲಹೆ ಸಹಕಾರದೊಂದಿಗೆ ಸೋಮನಾಥ ಶೆಟ್ಟಿ ಮಂಗಲ್ಪಾಡಿ ರಚಿಸಿ, 'ತುಳುನಾಡ ಕಲಾಬಿರ್ಸೆ' ದೀಪಕ್ ರೈ ಪಾಣಾಜೆ ಹಾಗೂ 'ಮಂಗಳೂರು ಮೀನನಾಥ' ರಾಘವೇಂದ್ರ ರೈ ಅಭಿನಯದಲ್ಲಿ "ರಂಗ್‌ ದ ರಾಜೆ"...

ಕರಾವಳಿ ಉತ್ಸವದಲ್ಲಿ ಸಾಂಪ್ರದಾಯಿಕತೆ, ಸಂಸ್ಕೃತಿ ಅನಾವರಣ : ಜಿಲ್ಲಾಧಿಕಾರಿ

0
ಮಂಗಳೂರು: ಹಲವು ವರ್ಷಗಳ ಬಳಿಕ ನಡೆಯಲಿರುವ ಕರಾವಳಿ ಉತ್ಸವದ ಕಾರ್ಯಕ್ರಮಗಳಲ್ಲಿ ಕರಾವಳಿಯ ನೈಜ ಸಂಸ್ಕೃತಿ ಸಾಹಿತ್ಯ, ಉಡುಗೆತೊಡುಗೆಗಳು ಹಾಗೂ ಸಾಂಪ್ರದಾಯಿಕ ತಿಂಡಿ ತಿನಿಸುಗಳ ಪ್ರದರ್ಶನ ಮತ್ತು ಮಾರಾಟದ ಅಪೂರ್ವ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ತಿಳಿಸಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕರಾವಳಿ ಉತ್ಸವ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ...

ಕ್ಯಾಟ್ಕದ ನೂತನ ಅಧ್ಯಕ್ಷರಾಗಿ ಲಂಚುಲಾಲ್ ‌ ಆಯ್ಕೆ

0
ಮಂಗಳೂರು: ಕೋಸ್ಟಲ್ ವುಡ್ ಕಲಾವಿದರ ಮತ್ತು ತಂತ್ರಜ್ಞರ ಸಹಕಾರಿ ಒಕ್ಕೂಟ (ರಿ) ಇದರ ನೂತನ ಅಧ್ಯಕ್ಷರಾಗಿ ಯುವ ನಿರ್ಮಾಪಕ ನಟ ಲಂಚುಲಾಲ್ ಕೆ‌.ಎಸ್ ರವರು ಆಯ್ಕೆ ಆಗಿದ್ದಾರೆ.ಉರ್ವಸ್ಟೋರ್ ಅಶೋಕನಗರದಲ್ಲಿರುವ ದೇವಾಂಗ ಭವನದಲ್ಲಿ ನಡೆದ ಕೋಸ್ಟಲ್ ವುಡ್ ಕಲಾವಿದರ ಮತ್ತು ತಂತ್ರಜ್ಞರ ಸಹಕಾರಿ ಒಕ್ಕೂಟದ ವಾರ್ಷಿಕ ಮಹಾಸಭೆಯಲ್ಲಿ ಲಂಚುಲಾಲ್ ಕೆ.ಎಸ್ ಅಧ್ಯಕ್ಷರಾಗಿ, ಸಂದೀಪ್ ಶೆಟ್ಟಿ ಸುರತ್ಕಲ್...

ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ‌ ಜಿಲ್ಲೆಗೆ ಭೇಟಿ

0
ಮ೦ಗಳೂರು: ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಸೌಮ್ಯ ರೆಡ್ಡಿ ಅವರು ಅಧಿಕಾರ ವಹಿಸಿ ಕೊಂಡ ನಂತರ ಮೊದಲ ಸಭೆಗಾಗಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಆಯ್ಕೆ ಮಾಡಿ ಕೊಂಡಿದ್ದು "ಮಹಿಳಾ ಸದಸತ್ವ ಅಭಿಯಾನ ಮತ್ತು ಮಹಿಳಾ ಸಮ್ಮಾನ್" ಶೀರ್ಷಿಕೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಅಧ್ಯಕ್ಷೆ ಶಾಲೆಟ್ ಪಿಂಟೋ ಅವರ ನೇತೃತ್ವದಲ್ಲಿ...

ಗಿರೀಶ್ ಭಾರದ್ವಾಜ್ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ

0
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಡಿ.18ರಂದು ಬೆಳಗ್ಗೆ 11.30ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ತೂಗು ಸೇತುವೆಗಳ ಸರದಾರ , ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ಅವರು ಭಾಗವಹಿಸಿ ಸಂವಾದ ನಡೆಸಲಿದ್ದಾರೆ. ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ....