ತೀವ್ರ ಮಳೆ ಸಾಧ್ಯತೆ: ಶಾಲೆಗಳಿಗೆ ರಜೆ
ಮಂಗಳೂರು: ಫೆಂಗಲ್ ಚಂಡಮಾರುತದಿ೦ದಾಗಿ ತೀವ್ರ ಮಳೆಯ ಹಿನ್ನಲೆಯಲ್ಲಿ ಮುಂಜ್ರಾಗತ ಕ್ರಮವಾಗಿ ಡಿಸೆಂಬರ್ 3 ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಎಲ್ಲಾ ಅಂಗನವಾಡಿ, ಪ್ರಾಥಮಿಕ ,ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಫೆಂಗಲ್ ಚಂಡಮಾರುತದ ಪರಿಣಾಮ ತೀವ್ರ ಮಳೆ ಮುನ್ಸೂಚನೆ ಹಿನ್ನಲೆಯಲ್ಲಿ ದ.ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಹಾಗೂ ಉಡುಪಿ...
ಮಳೆ: ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ
ಮಂಗಳೂರು: ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ತೀವ್ರ ಮಳೆಯಾಗುವ ಸಾಧ್ಯತೆ ಇರುವುದರಿಂದ ಎಲ್ಲಾ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಸಾರ್ವಜನಿಕರ ಹಾಗೂ ಎಲ್ಲಾ ಜಾನುವಾರುಗಳ ರಕ್ಷಣೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಸೂಚಿಸಿದ್ದಾರೆ
ಮಳೆಗಾಲದಲ್ಲಿ ಅನುಸರಿಸುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಅನುಷ್ಡಾನಕ್ಕೆ ತರಲು ಎಲ್ಲಾ ಗ್ರಾಮ ಪಂಚಾಯತ್ ಹಾಗೂ...
ಉಪಲೋಕಾಯುಕ್ತರಿಂದ ವಿವಿದೆಡೆ ಭೇಟಿ, ಪರಿಶೀಲನೆ
ಮ೦ಗಳೂರು: ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಭಾನುವಾರ ಜಿಲ್ಲೆಯ ವಿವಿದೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಮೊದಲು ಮಂಗಳೂರು ಮಹಾನಗರಪಾಲಿಕೆ ತ್ಯಾಜ್ಯ ವಿಲೇವಾರಿ ಘಟಕ ಪಚ್ಚನಾಡಿಗೆ ಭೇಟಿ ನೀಡಿದ ಅವರು ಘಟಕದ ಒಳಪ್ರದೇಶಗಳಿಗೆ ಭೇಟಿ ನೀಡಿ ಸಮಗ್ರ ತಪಾಸಣೆ ನಡೆಸಿದರು. ತ್ಯಾಜ್ಯ ನಿರ್ವಹಣೆ, ಪ್ರತ್ಯೇಕಿಸುವಿಕೆಯ ಘಟಕಗಳಿಗೂ ಖುದ್ದು ಹೋಗಿ ವೀಕ್ಷಿಸಿದರು. ತ್ಯಾಜ್ಯ ವಿಲೇವಾರಿಯ ಪ್ರತೀ...
ಬಹುಸಂಸ್ಕೃತಿ ಉತ್ಸವದಲ್ಲಿ ವಿವಿಧ ಭಾಷೆಗಳ ಸಾಂಸ್ಕೃತಿಕ ವೈವಿಧ್ಯ
ಮಂಗಳೂರು : ಸುವರ್ಣ ಕರ್ನಾಟಕ ಸಂಭ್ರಮದ ಅಂಗವಾಗಿ ಡಿಸೆಂಬರ್ 3 ಮತ್ತು 4 ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯುವ ʼಬಹುಸಂಸ್ಕೃತಿ ಉತ್ಸವʼದಲ್ಲಿ ವಿವಿಧ ಭಾಷಾ ಸಂಸ್ಕೃತಿಗಳ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹು ಸಂಸ್ಕೃತಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಫರೀದ್...
ಬೀಚ್ ಸ್ವಚ್ಛತೆಗೆ ಸ್ಮಾರ್ಟ್ ಸಿಟಿಯಿಂದ ಆದ್ಯತೆ:ಅರುಣ್ ಪ್ರಭಾ
ಮಂಗಳೂರು : ಬೀಚ್ ಗಳು ಪ್ರವಾಸೋದ್ಯಮದ ಪ್ರಮುಖ ಆಕರ್ಷಣೆಯಾಗಿದ್ದು, ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ಬೀಚ್ ಗಳ ಸ್ವಚ್ಚತೆಗೂ ಆದ್ಯತೆ ನೀಡಲಾಗುವುದು ಎಂದು ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯ ಜನರಲ್ ಮ್ಯಾನೇಜರ್ ಅರುಣ್ ಪ್ರಭಾ ತಿಳಿಸಿದರು.ದ.ಕ ಜಿಲ್ಲಾಡಳಿತ, ಮಂಗಳೂರು ನಗರ ಪೊಲೀಸ್ ಕಮಿಷನರೆಟ್, ಕ್ರೆಡೈ ಮಂಗಳೂರು, ಸ್ಮಾರ್ಟ್ ಸಿಟಿ ಮಂಗಳೂರು,ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ...
ಡಿ.5 ರಂದು ಕಟ್ಟಡ ಕಾರ್ಮಿಕರಿಗೆ ವಿವಿಧ ಟೂಲ್ ಕಿಟ್ ವಿತರಣೆ
ಮಂಗಳೂರು: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಜಿಲ್ಲೆಯ ಅರ್ಹ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಸರಬರಾಜು ಆಗಿರುವ ವಿವಿಧ ಕಿಟ್‍ಗಳ ವಿತರಣೆ ಡಿಸೆಂಬರ್ 5ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ...
ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರ ಭೇಟಿ
ಮಂಗಳೂರು: ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರ ನಿಸಾರ್ ಅಹಮದ್ ಅವರು ಶುಕ್ರವಾರ ಮಂಗಳೂರಿಗೆ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಜಿನೇಂದ್ರ, ವಕ್ಫ್ ಅಧಿಕಾರಿ ಅಬೂಬಕ್ಕರ್, ಕೆಎಂಡಿಸಿ ಜಿಲ್ಲಾ ವ್ಯವಸ್ಥಾಪಕ ಯಶೋಧರ ಮತ್ತಿತರರು ಇದ್ದರು.
ಇ-ಖಾತಾ ತಿದ್ದುಪಡಿ ಅದಾಲತ್
ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಆಸ್ತಿಗಳಿಗೆ ಪ್ರಸ್ತುತ ಇ-ಆಸ್ತಿ ತಂತ್ರಾಂಶದ ಮೂಲಕ ಇ-ಖಾತಾಗಳ ವಿತರಣೆ ವ್ಯವಸ್ಥೆ ಇದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆಯುತ್ತಿದ್ದು, ಪ್ರಸ್ತುತ ಕಾವೇರಿ-2 ತಂತ್ರಾಂಶದೊಂದಿಗೆ ಇ-ಆಸ್ತಿ ತಂತ್ರಾಂಶವನ್ನು ಸಂಯೋಜನೆ ಮಾಡಲಾಗಿರುತ್ತದೆ.ಈಗಾಗಲೇ ನೀಡಲಾದ ಇ-ಖಾತಾದಲ್ಲಿ ಯಾವುದೇ ತಿದ್ದುಪಡಿಗಳು ಅವಶ್ಯಕವಿದ್ದಲ್ಲಿ ಡಿ.16 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆ ಸುರತ್ಕಲ್ ವಲಯ...
ಅನರ್ಹ ಕಟ್ಟಡ ಕಾರ್ಮಿಕರ ಗುರುತಿನ ಚೀಟಿ ಹಿಂದಿರುಗಿಸಲು ಸೂಚನೆ
ಮಂಗಳೂರು: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿ ಆಗಿರುವ ಫಲಾನುಭವಿಗಳಿಗೆ ವಿವಿಧ ಆರ್ಥಿಕ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 1,42,340 ಕಟ್ಟಡ ಕಾರ್ಮಿಕರಾಗಿ ನೋಂದಣಿಯಾಗಿ ಕಾರ್ಡ್ ಪಡೆದುಕೊಂಡಿರುತ್ತಾರೆ.ಆದರೆ ಕೊರೋನಾ ಸಮಯದಲ್ಲಿ ನೀಡಲಾದ ಆಹಾರದ ಕಿಟ್ ಮತ್ತು ಟೂಲ್ ಕಿಟ್ ಧನಸಹಾಯದಂದ ಪ್ರೇರಿತರಾಗಿ ಕಟ್ಟಡ ಕಾರ್ಮಿಕರಲ್ಲದವರು...
ಕ್ಯಾನ್ಸರ್ ಬಗ್ಗೆ ವ್ಯಾಪಕ ಜಾಗೃತಿಯ ಅಗತ್ಯವಿದೆ: ಡಾ.ದೇವದಾಸ ರೈ
ಮಂಗಳೂರು: ಕ್ಯಾನ್ಸರ್ ಬಗ್ಗೆ ಜನರಲ್ಲಿ ವ್ಯಾಪಕವಾದ ಜಾಗೃತಿ ಮೂಡಿಸುವ ಅಗತ್ಯ ವಿದೆ ಈ ನಿಟ್ಟಿನಲ್ಲಿ ರೋಟರಿ ಸಂಸ್ಥೆಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಗರ್ಭ ಕಂಠದ ಕ್ಯಾನ್ಸರ್ ಸೇರಿದಂತೆ ವಿವಿಧ ಮಾದರಿಯ ಕ್ಯಾನ್ಸರ್ ನ್ನು ಪತ್ತೆ ಹಚ್ಚಿ ಗುಣಪಡಿಸಲು ಜನಜಾಗೃತಿ ಯಲ್ಲಿ ತಮ್ಮನ್ನು ತೊಡಗಿಸಿ ಕೊಂಡು ಬರುತ್ತಿದೆ ಎಂದು ಹಿರಿಯ ವೈದ್ಯರು ಹಾಗೂ ರೋಟರಿ ಜಿಲ್ಲಾ...




