ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸಂವಿಧಾನ ಆಚರಣಾ ಕಾರ್ಯಕ್ರಮ
ಮಂಗಳೂರು: ಭಾರತದ ಸಂವಿಧಾನ ಅಂಗೀಕರಣದ 75ನೇ ವಾರ್ಷಿಕೋತ್ಸವ ಪ್ರಯುಕ್ತ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸಂವಿಧಾನ ಆಚರಣಾ ಕಾರ್ಯಕ್ರಮ ಮಂಗಳವಾರಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಯಿತು.ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಪೂಜಾರಿ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ನೇತೃತ್ವದಲ್ಲಿ ರೂಪುಗೊಂಡ ಸಂವಿಧಾನ ಬಹುತ್ವಭಾರತದ ಬುನಾದಿಯಾಗಿದೆ. ಸಂವಿಧಾನದ ಬಗ್ಗೆ ಅರಿತು ಅದರ ಅನುಗುಣವಾಗಿ ನಡೆದರೆ...
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆ
ಮಂಗಳೂರು: ಡಿಸೆಂಬರ್ ತಿಂಗಳಲ್ಲಿ ಮಂಡ್ಯದಲ್ಲಿ ಜರಗಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಸಾಹಿತ್ಯಾಸಕ್ತರು, ಕನ್ನಡ ಪರ ಸಂಘಟನೆಗಳು ಭಾಗವಹಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷÀ ಡಾ.ಎಂ. ಪಿ. ಶ್ರೀನಾಥ್ ಕರೆ ನೀಡಿದ್ದಾರೆ.
ಅವರು ನಗರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದಲ್ಲಿ ನಡೆದ ಜಿಲ್ಲಾ...
ಸಾರ್ವಜನಿಕರ ಕುಂದು ಕೊರತೆ ಆಲಿಸಿದ ಶಾಸಕ ಕಾಮತ್
ಮಂಗಳೂರು: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಅವರು ಮಂಗಳೂರು ಮಹಾನಗರ ಪಾಲಿಕೆ ಕಟ್ಟಡದಲ್ಲಿರುವ ತಮ್ಮ ಕಚೇರಿಯಲ್ಲಿ ಸಾರ್ವಜನಿಕ ಭೇಟಿ ನಡೆಸಿ ಕುಂದು ಕೊರತೆಗಳ ಬಗ್ಗೆ ಅಹವಾಲು ಸ್ವೀಕರಿಸಿದರು.
ರಾಜ್ಯ ಸರ್ಕಾರ ಅನುದಾನ ತಡೆ ಹಿಡಿದ ಪರಿಣಾಮ ಕ್ಷೇತ್ರದಲ್ಲಿ ಅರ್ಧಕ್ಕೆ ನಿಂತಿರುವ ರಸ್ತೆ ಕಾಮಗಾರಿಗಳಿಂದ ಜನಸಾಮಾನ್ಯರು ತೀವ್ರ ತೊಂದರೆ ಅನುಭವಿಸುತ್ತಿರುವ ಬಗ್ಗೆ,...
ವಿದ್ಯಾರ್ಥಿಗಳಿಗೆ ಸಂವಿಧಾನದ ಮಹತ್ವ ತಿಳಿಸುವುದು ಅಗತ್ಯ : ಶಾಸಕ ವೇದವ್ಯಾಸ್ ಕಾಮತ್
ಮಂಗಳೂರು: ವಿಶ್ವದಲ್ಲೇ ಅತಿದೊಡ್ಡ ಪ್ರಜಾಪ್ರಭುತ್ವವಾಗಿರುವ ಭಾರತ ಸಂವಿಧಾನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸುವ ನಿರಂತರ ಪ್ರಯತ್ನಗಳಾಗಬೇಕು ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹೇಳಿದರು.
ಅವರು ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ಮತ್ತು ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಡಾ| ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ಭಾರತ ಸಂವಿಧಾನ ದಿನಾಚರಣೆ...
ವಿಪತ್ತು ನಿರ್ವಹಣೆ ಯೋಜನೆ : ಅಮೆರಿಕ ತಂಡದಿಂದ ಭೇಟಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಯೋಜನೆಯ ಬಗ್ಗೆ ಮಾಹಿತಿ ಪಡೆಯಲು ಯು ಎಸ್ ಕಾನ್ಸುಲೇಟ್ ಜನರಲ್ ಚೆನೈ ಇದರ ಅಮೆರಿಕನ್ ಸಿಟಿಜನ್ ಸರ್ವಿಸಸ್ ಅಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿದರು.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿಯವರು ಅಮೆರಿಕನ್ ಸಿಟಿಜನ್ ಸರ್ವಿಸ್ ಕಾನ್ಸೂಲ್ ಕಾರ್ಲಟನ್ ಬೆನ್‍ಸನ್ ಅವರಿಗೆ ಜಿಲ್ಲಾ ವಿಪತ್ತು ನಿರ್ವಹಣಾ ಯೋಜನೆಯ...
ರಾಜ್ಯ ಮಟ್ಟದ ಪ್ರೌಢಶಾಲಾ ವಿಜ್ಞಾನ ವಸ್ತುಪ್ರದರ್ಶನ
ಮಂಗಳೂರು: "ವಿಶ್ವದಲ್ಲಿ ನಾವು ಮೊದಲಿಗರಾಗಬೇಕಾದರೆ ವಿಜ್ಞಾನದಲ್ಲಿ ಪ್ರತಿದಿನವೂ ಅನ್ವೇಷಣೆಯನ್ನು ಮಾಡಬೇಕು. ಇದಕ್ಕೋಸ್ಕರ ಸರ್ಕಾರ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯನ್ನು ರಾಜ್ಯ ಮಟ್ಟದಲ್ಲಿ ಆಯೋಜಿಸುತ್ತಿದೆ ಎಂದು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ. ಕೆ. ವಿ ರಾವ್ ಹೇಳಿದರು.
ಅವರು ಶಿಕ್ಷಣ ಇಲಾಖೆ ವತಿಯಿಂದ, ಶಕ್ತಿನಗರದ ಶಕ್ತಿ ವಿದ್ಯಾ ಸಂಸ್ಥೆ ಇದರ ಸಹಯೋಗದಲ್ಲಿ ನಡೆದ 2024-25ನೇ...
ಪಿ .ಯು. ವಿದ್ಯಾರ್ಥಿಗಳಿಗೆ ಆಪ್ತ-ಸಮಾಲೋಚನೆ ಅತ್ಯಗತ್ಯ : ಪದ್ಮಶ್ರೀ ಡಾ. ಸಿ ಆರ್ ಚಂದ್ರಶೇಖರ್
ಮ೦ಗಳೂರು: ಯಶಸ್ಸಿನ ಹಿಂದೆ ಓಡಬೇಕೆಂಬ ಛಲವಿರುವ ಈಗಿನ ಪಿ ಯು ವಿದ್ಯಾರ್ಥಿಗಳಿಗೆ ಸರಿಯಾದ ಹಂತದಲ್ಲಿ ಸಮರ್ಥವಾದ ಆಪ್ತ- ಸಮಾಲೋಚನಾ ಮಾರ್ಗದರ್ಶನ ಬೇಕೇ-ಬೇಕು ಎಂದು ಬೆಂಗಳೂರಿನ ಪ್ರತಿಷ್ಠಿತ ನಿಮ್ಹಾನ್ಸ್ ಸಂಸ್ಥೆಯ ಮಾಜೀ ಹಿರಿಯ ಮನೋವೈದ್ಯ, ಪದ್ಮಶ್ರೀ ಡಾ. ಸಿ ಆರ್ ಚಂದ್ರಶೇಖರ್ ಅವರು ಹೇಳಿದ್ದಾರೆ.ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜು ಏರ್ಪಡಿಸಿದ್ದ“ಮಾನಸ ಮಾರ್ಗದರ್ಶನ ಹಾಗೂ ಸಂವಾದ”...
ಬೆಳ್ತಂಗಡಿ: ಎಂ.ಸಿ.ಸಿ. ಬ್ಯಾಂಕಿನ 18ನೇ ಶಾಖೆ ಉದ್ಘಾಟನೆ
ಮ೦ಗಳೂರು: ಎಂ.ಸಿ.ಸಿ. ಬ್ಯಾಂಕಿನ 18ನೇ ಶಾಖೆಯು ಬೆಳ್ತಂಗಡಿಯ ಚರ್ಚ್ ರಸ್ತೆಯ ಬಳಿಯ ವೈಬವ್ ಅರ್ಕೆಡ್‌ನ ನೆಲಮಹಡಿಯಲ್ಲಿ ನ. 24 ರಂದು ಉದ್ಘಾಟನೆಗೊಂಡಿತು. ನೂತನ ಶಾಖೆಯನ್ನು ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ಲೋಬೊ ಉದ್ಘಾಟಿಸಿದರು. ಶಾಖೆಯನ್ನು ಬೆಳ್ತಂಗಡಿ ಹೋಲಿ ರೆಡೀಮರ್ ಚರ್ಚ್‌ನ ಧರ್ಮಗುರು ಅತೀ ವಂ. ಫಾ ವಾಲ್ಟರ್ ಡಿಮೆಲ್ಲೊ ಆಶೀವರ್ಚಿಸಿದರು.ಭದ್ರತಾ ಕೊಠಡಿಯನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದ...
ಡಾ.ಕೆ.ಚಿನ್ನಪ್ಪ ಗೌಡ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ನ.27ರಂದು ಬೆಳಗ್ಗೆ 11.30ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ವಿಶ್ರಾಂತ ಕುಲಪತಿ , ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಡಾ.ಕೆ.ಚಿನ್ನಪ್ಪ ಗೌಡ ಭಾಗವಹಿಸಿ ಸಂವಾದ ನಡೆಸಲಿದ್ದಾರೆ.ಹಿರಿಯ ಛಾಯಾಗ್ರಾಹಕ ಚಂದ್ರಹಾಸ ಕೋಟೆಕಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್...
ಉಚಿತ ಹೊಲಿಗೆ ಯಂತ್ರ ವಿತರಣೆ
ಮ೦ಗಳೂರು: ದಕ್ಷಿಣ ಕನ್ನಡ ಜಿಲ್ಲೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (ನಿ.) ವತಿಯಿಂದ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರವನ್ನು ಶಾಸಕ ವೇದವ್ಯಾಸ್ ಕಾಮತ್ ರವರು ವಿತರಿಸಿದರು.
ನಂತರ ಮಾತನಾಡಿದ ಶಾಸಕರು, ಮಹಿಳೆಯರು ಮನೆಯಲ್ಲೇ ಕುಳಿತು ಮಾಡುವ ಉದ್ಯೋಗದಲ್ಲಿ ಹೊಲಿಗೆಗೆ ಗ್ರಾಮೀಣ ಭಾಗದಿಂದ...










