ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ
ಮಂಗಳೂರು: ವಿಶ್ವವಿದ್ಯಾನಿಲಯ ಕಾಲೇಜು ಉದ್ಯೋಗ ಮತ್ತು ವೃತ್ತಿ ಸಮಾಲೋಚನೆ ವಿಭಾಗದ ವತಿಯಿ೦ದ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ಹೋಬಳಿಯ ಸಹಯೋಗದಲ್ಲಿ ಮಾ. 7 ರಂದು ವಿದ್ಯಾರ್ಥಿಗಳಿಗೆ ಮುಂಬರುವ ಪರೀಕ್ಷೆಗಳ ಅನುಕೂಲಕ್ಕಾಗಿ ತರಬೇತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಕಾಲೇಜಿನ ಶಿವರಾಮ ಕಾರಂತ ಸಭಾ ಭವನದಲ್ಲಿ ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಕೆಎಎಸ್ ರಾಜು ಮೊಗವೀರ ಉದ್ಘಾಟಿಸಲಿದ್ದಾರೆ.
ದ.ಕ. ಕಸಾಪ...
ಬ್ರಹ್ಮಾವರದ ಲ್ಲಿ ಎಂ.ಸಿ.ಸಿ ಬ್ಯಾಂಕಿನ ಎಟಿಎ೦ ಉದ್ಘಾಟನೆ
ಮ೦ಗಳೂರು: ಬ್ರಹ್ಮಾವರ ಶಾಖೆಯು ಆರಂಭಗೊoಡು ಒಂದು ವರ್ಷ ಪೂರ್ಣಗೊಂಡ ಸಂದರ್ಭ ವಾರ್ಷಿಕೋತ್ಸವ, ೧೦ ಕೋಟಿ ವ್ಯವಹಾರದ ಸಾಧನೆ ಮತ್ತು ನೂತನ ಎಟಿಎ೦ ಉದ್ಘಾಟಣಾ ಸಮಾರಂಭ ಮಾರ್ಚ್ 3ರಂದು ಬ್ರಹ್ಮಾವರ ಶಾಖೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಎಂ.ಸಿ.ಸಿ. ಬ್ಯಾಂಕಿನ ೮ನೇ ಎಟಿಎ೦ ಅನ್ನು ಬ್ರಹ್ಮಾವರ ಶಾಖೆಯಲ್ಲಿ ಬ್ರಹ್ಮಾವರ ಕ್ಯಾಥೋಲಿಕ್ ಕ್ರೇಡಿಟ್ ಸಹಕಾರ ಸಂಘದ ಅಧ್ಯಕ್ಷ ಜೆರಾಲ್ಡ್ ಗೊನ್ಸಾಲ್ವಿಸ್ ಉದ್ಘಾಟಿಸಿದರು. ಈ...
ಉಚಿತ ಕ್ರಿಯಾಟಿನ್ ರಕ್ತ ತಪಸಣಾ ಶಿಬಿರ
ಮಂಗಳೂರು:ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಉಚಿತ ಕ್ರಿಯಾಟಿನ್ ರಕ್ತ ತಪಸಣಾ ಶಿಬಿರ ನಗರದ ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯ ಹಳೆಯ ಒಪಿಡಿ ವಿಭಾಗದಲ್ಲಿ ಮಾರ್ಚ್ 6 ರಿಂದ 8 ರವರೆಗೆ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದೆ ಎಂದು ವೆನ್‍ಲಾಕ್ ಪ್ರಕಟಣೆ ತಿಳಿಸಿದೆ.
ಎಂಸಿಸಿ ಬ್ಯಾಂಕ್ 19ನೇ ಶಾಖೆ ಬೆಳ್ಮಣ್ ನಲ್ಲಿ ಲೋಕಾರ್ಪಣೆ
ಮಂಗಳೂರು: ಎಂಸಿಸಿ ಬ್ಯಾಂಕ್ ನ 19ನೇ ಶಾಖೆ ಬೆಳ್ಮಣ್ ನಲ್ಲಿ ಆದಿತ್ಯವಾರ ಲೋಕಾರ್ಪಣೆಗೊಂಡಿತು.ಬೆಳ್ಮಣ್ ಚರ್ಚ್ ಧರ್ಮಗುರು ಫೆಡ್ರಿಕ್ ಮಸ್ಕರೇನಸ್ ಅವರು ದೀಪ ಬೆಳಗಿಸುವ ಮೂಲಕ ನೂತನ ಬ್ಯಾಂಕ್ ಉದ್ಘಾಟಿಸಿ ಶುಭ ಹಾರೈಸಿದರು. ಬಳಿಕ ಆಶೀರ್ವಚನದ ನುಡಿಗಳನ್ನಾಡಿದ ಅವರು, “ಎಂಸಿಸಿ ಬ್ಯಾಂಕ್ ನ 19ನೇ ಶಾಖೆ ಇಂದು ಉದ್ಘಾಟನೆಗೊಂಡಿದೆ. ಗ್ರಾಹಕರ ಸಹಕಾರದಿಂದ ಬ್ಯಾಂಕ್ ಈ ಮಟ್ಟಕ್ಕೆ...
ಕಾಪು ಮಾರಿಗುಡಿ ಕರ್ನಾಟಕದಲ್ಲಿಯೇ ವಿಜೃಂಭಣೆಯಿಂದ ಕೂಡಿರುವ ದೇವಾಲಯ:ಡಿಸಿಎಂ ಡಿ.ಕೆ.ಶಿವಕುಮಾರ್
ಕಾಪು :"ನಾವೆಲ್ಲರೂ ಮಾನವೀಯತೆಗೆ ತಲೆಭಾಗಬೇಕು. ಮಾನವ ಧರ್ಮವನ್ನು ಉಳಿಸಿಕೊಳ್ಳಬೇಕು. ಯಾರಿಗೂ ತೊಂದರೆ ಕೊಡದಂತೆ ನಮ್ಮ ಧರ್ಮದ ದಾರಿಯಲ್ಲಿ ನಾವು ಬದುಕಬೇಕು" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಉಡುಪಿ ಜಿಲ್ಲೆಯ ಕಾಪುವಿನಲ್ಲಿ ಭಾನುವಾರ ನಡೆದ ಇತಿಹಾಸ ಪ್ರಸಿದ್ಧ ಶ್ರೀ ಹೊಸಮಾರಿಗುಡಿಯ ಬ್ರಹ್ಮ ಕಳಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
"ಮಾರಿಯಮ್ಮ ಎಲ್ಲರೂ ನೀಡುವ ಹಣ್ಣು, ಹೂವು ಜೊತೆಗೆ ಕೋಳಿಯನ್ನು ಸಹ...
ದಕ್ಷಿಣ ರಾಜ್ಯಗಳ ಲೋಕಸಭಾ ಕ್ಷೇತ್ರಗಳನ್ನು ಕುಗ್ಗಿಸಲು ಕೇಂದ್ರ ಸರ್ಕಾರ ಮುಂದಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್
ಮಂಗಳೂರು:"ಸಂಸತ್ತಿನಲ್ಲಿ ದಕ್ಷಿಣ ರಾಜ್ಯಗಳ ಸಂಖ್ಯಾಬಲವನ್ನು ಕಡಿಮೆ ಮಾಡಲು ಬಿಜೆಪಿ ಸರ್ಕಾರ ಮುಂದಾಗಿದ್ದು, ಕಾಂಗ್ರೆಸ್ ಇದರ ವಿರುದ್ಧ ಹೋರಾಟ ಮಾಡಲಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಮಂಗಳೂರು ವಿಮಾನ ನಿಲ್ದಾಣದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಪ್ರತಿಕ್ರಿಯಿಸಿದರು.
ಕೇಂದ್ರ ಸರ್ಕಾರ ಕ್ಷೇತ್ರ ಪುನರ್ ವಿಂಗಡಣೆ ಮಾಡಲು ಮುಂದಾಗಿರುವ ಬಗ್ಗೆ ಕೇಳಿದಾಗ, "ಕೇಂದ್ರ ಸರ್ಕಾರ ಸಂಸತ್...
ಬಿಜೆಪಿ ವತಿಯಿಂದ ಸುಧಾಕರ್ ಜೋಶಿಯವರಿಗೆ ಸನ್ಮಾನ
ಮ೦ಗಳೂರು: ಮಾಜಿ ಪ್ರಧಾನಿ ದಿ.ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ಶತಾಬ್ಧಿಯ ಅಂಗವಾಗಿ ಬಿಜೆಪಿ ವತಿಯಿಂದ ದೇಶಾದ್ಯಂತ ವಾಜಪೇಯಿಯವರು ಜೀವಿತಾವಧಿಯಲ್ಲಿ ಭೇಟಿ ಮಾಡಿದ್ದ ಬಿಜೆಪಿಯ ಹಿರಿಯರನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ರಮ ನಡೆಯುತ್ತಿದ್ದು, ಮಂಗಳೂರು ನಗರ ದಕ್ಷಿಣ ಬಿಜೆಪಿ ವತಿಯಿಂದ ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಸೆಂಟ್ರಲ್ ವಾರ್ಡ್ ನಿವಾಸಿಯಾದ ಶ್ರೀ ಸುಧಾಕರ್ ಜೋಶಿ ಯವರನ್ನು...
ದಿಗಂತ್ ನಾಪತ್ತೆ ಪ್ರಕರಣ: ಫರಂಗಿಪೇಟೆಯಲ್ಲಿ ಪ್ರತಿಭಟನೆ
ಮಂಗಳೂರು : ಫರಂಗಿಪೇಟೆ ಸಮೀಪದ ಕಿದೆಬೆಟ್ಟು ಪದ್ಮನಾಭ ಮಡಿವಾಳ ಅವರ ಪುತ್ರ ಪಿಯುಸಿ ವಿದ್ಯಾರ್ಥಿ ದಿಗಂತ್ ಅವರು ನಿಗೂಡ ನಾಪತ್ತೆಯಾಗಿ 5 ದಿನಗಳು ಕಳೆದರೂ ಪೊಲೀಸ್ ಇಲಾಖೆ ಹಾಗೂ ಸರಕಾರದ ಯಾವುದೇ ರೀತಿಯ ಕಾರ್ಯಾಚರಣೆ ಯಶಸ್ವಿ ಕಾಣದೆ ಇರುವುದರಿಂದ ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳು ಫರಂಗಿಪೇಟೆಯಲ್ಲಿ ಸ್ವಯಂ ಪ್ರೇರಿತ ಬಂದ್ ಆಚರಿಸಿ ಬೃಹತ್ ಪ್ರತಿಭಟನೆ...
ಹಿರಿಯ ಪತ್ರಕರ್ತ ದಿ.ಮನೋಹರ ಪ್ರಸಾದ್ ಸಂಸ್ಮರಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ, ಹಿರಿಯ ಪತ್ರಕರ್ತ ಹಾಗೂ ಉದಯವಾಣಿ ಪತ್ರಿಕೆ ಸಹ ಸಂಪಾದಕ ದಿ.ಮನೋಹರ ಪ್ರಸಾದ್ ಅವರ ಸಂಸ್ಮರಣಾ ಕಾರ್ಯಕ್ರಮ ಶನಿವಾರ ಬೆಳಗ್ಗೆ ಪತ್ರಿಕಾ ಭವನದಲ್ಲಿ ನಡೆಯಿತು.ನಿವೃತ್ತ ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತಾಡಿದರು. “ಮನೋಹರ್ ಪ್ರಸಾದ್...
ಬೇಡಿಕೆಗೆ ತಕ್ಕಂತೆ ವಿದ್ಯುತ್ ಪೂರೈಕೆ, ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ: ಸಚಿವ ಕೆ.ಜೆ.ಜಾರ್ಜ್
ಬೆಂಗಳೂರು: ಬೇಸಿಗೆಯಲ್ಲಿ 19,000 ಮೆಗಾ ವ್ಯಾಟ್‌ನಷ್ಟು ವಿದ್ಯುತ್ ಬೇಡಿಕೆಯನ್ನು ಈಡೇರಿಸಲು ಇಂಧನ ಇಲಾಖೆ ಸಿದ್ಧವಾಗಿದ್ದು, ಯಾವುದೇ ಸಂದರ್ಭದಲ್ಲೂ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
"ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ ಎಸ್ಕಾಂಗಳ ಅಧ್ಯಕ್ಷರು ಸೇರಿದಂತೆ ಇಂಧನ ಇಲಾಖೆ ಹಿರಿಯ ಅಧಿಕಾರಿಗಳೊಂದಿಗಿನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಬೇಸಿಗೆಯಲ್ಲಿ ರೈತರ ಕೃಷಿ...