ಪಶು ಪಾಲನಾ ಚಟುವಟಿಕೆಗಳ ಕುರಿತು ತರಬೇತಿ
ಮಂಗಳೂರು: ಹಾಸದ ಪಶುಪಾಲನ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಅಕ್ಟೋಬರ್ ತಿಂಗಳಿನಲ್ಲಿ ರೈತರಿಗೆ ಪಶು ಪಾಲನಾ ಚಟುವಟಿಕೆಗಳ ಕುರಿತು ವಿವಿಧ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ತರಬೇತಿಯ ವಿವರಆಧುನಿಕ ಕುರಿ ಮತ್ತು ಮೇಕೆ ಸಾಗಾಣಿಕೆ ತರಬೇತಿ ಅಕ್ಟೋಬರ್ 3ರಿಂದ 4ರವರೆಗೆ ನಡೆಯಲಿದೆ. ಆಧುನಿಕ ಹೈನುಗಾರಿಕೆ ಬಗ್ಗೆ ತರಬೇತಿ ಅಕ್ಟೋಬರ್ 8 ರಿಂದ 9ರವರೆಗೆ, ಕೋಳಿ ಸಾಕಾಣಿಕೆ ತರಬೇತಿ...
ಮುಂಬೈ ಶ್ರೀ ಕಾಶೀ ಮಠದಲ್ಲಿ ವಿಭಾ ಶ್ರೀನಿವಾಸ್ ನಾಯಕ್ ಅವರಿಂದ ಭಕ್ತಿ ಸಂಗೀತ ಕಾರ್ಯಕ್ರಮ
ಮ೦ಗಳೂರು: ಮುಂಬೈ ವಾಲ್ಕೆಶ್ವರ ಶ್ರೀ ಕಾಶೀ ಮಠದಲ್ಲಿ ಸೆಪ್ಟೆಂಬರ್ 27 ರಂದು ವಿಭಾ ಶ್ರೀನಿವಾಸ್ ನಾಯಕ್ ಅವರಿಂದ ಭಕ್ತಿ ಸಂಗೀತ ಕಾರ್ಯಕ್ರಮ ಜರಗಲಿದೆ.
ಮುಂಬೈ ಯ ವಾಲ್ಕೆಶ್ವರ ಶ್ರೀ ಕಾಶೀ ಮಠದಲ್ಲಿ ಕಾಶೀ ಮಠಾಧಿಪತಿ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿ ಅವರ ಚತುರ್ಮಾಸ ವೃತದ ಅಂಗವಾಗಿ ವಿಭಾ ಶ್ರೀನಿವಾಸ್ ನಾಯಕ್ ಅವರಿಂದ ಭಕ್ತಿ ಸಂಗೀತ ಕಾರ್ಯಕ್ರಮ...
ಹರ್ಷವರ್ಧನ್ ಗೆ ಕೌಶಲ್ಯ ಸ್ಪರ್ಧೆಯಲ್ಲಿ ಶ್ರೇಷ್ಠತಾ ಪದಕ
ಮ೦ಗಳೂರು: ಫ್ರಾನ್ಸ್ ನ ಲಿಯೋನ್ ನಲ್ಲಿ ಸಪ್ಟೆಂಬರ್ 10 ರಿಂದ 15 ರವರೆಗೆ ನಡೆದ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕದ ಒಂಬತ್ತು ಸ್ಪರ್ದಿಗಳು ಭಾಗವಹಿಸಿದ್ದು ,ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಹರ್ಷವರ್ಧನ್ ಅವರು ಕುಕ್ಕಿಂಗ್ ವಿಭಾಗದ ಕೌಶಲ್ಯ ಸ್ಪರ್ಧೆಯಲ್ಲಿ ಶ್ರೇಷ್ಠತಾ ಪದಕ ಪಡೆದಿರುತ್ತಾರೆ.
ಇದಕ್ಕೂ ಮುನ್ನ ಕಳೆದ ಮೇ ತಿಂಗಳಲ್ಲಿ ನವದೆಹಲಿಯಲ್ಲಿ ನಡೆದ...
ಸಿದ್ದರಾಮಯ್ಯರ ರಾಜೀನಾಮೆ ಕೇಳುವುದು ಬಿಜೆಪಿಗರ ಮೂರ್ಖತನ” :ಮಂಜುನಾಥ್ ಭಂಡಾರಿ
ಮಂಗಳೂರು: “ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರ ರಾಜೀನಾಮೆ ಕೇಳುವುದು ಬಿಜೆಪಿಯವರ ಮೂರ್ಖತನ. ಯಾಕೆಂದರೆ ಸಿದ್ದರಾಮಯ್ಯ ವಿರುದ್ಧ ದಾಖಲಾಗಿರುವ ಮೊಕದ್ದಮೆ ರಾಜಕೀಯ ಪ್ರೇರಿತವಾಗಿರುವುದರಿಂದ ರಾಜೀನಾಮೆ ಕೊಡುವ ಅವಶ್ಯಕತೆ ಇರುವುದಿಲ್ಲ. ಕಾಂಗ್ರೆಸ್ ಪಕ್ಷವು ಸಿದ್ದರಾಮಯ್ಯರವರ ಹಿಂದೆ ಸಂಪೂರ್ಣವಾಗಿ ಬೆಂಬಲಕ್ಕೆ ನಿಂತಿದೆ ಎಂದು ವಿಧಾನ ಪರಿಷತ್ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಅವರು ಹೇಳಿದ್ದಾರೆ.
“ಕೇಂದ್ರ ಸರ್ಕಾರವು ರಾಜ್ಯಪಾಲರನ್ನು ಉಪಯೋಗಿಸಿ...
ಮುಖ್ಯಮಂತ್ರಿಗಳು ರಾಜೀನಾಮೆ ನೀಡಲಿ :- ಶಾಸಕ ಕಾಮತ್ ಆಗ್ರಹ
ಮ೦ಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧದ ಸಾವಿರಾರು ಕೋಟಿ ರೂ. ಗಳ ಮೂಡಾ ಹಗರಣದ ತನಿಖೆಗೆ ಪ್ರಾಸಿಕ್ಯೂಷನ್ ಅನುಮತಿ ನೀಡಿದ ರಾಜ್ಯಪಾಲರ ನಿರ್ಧಾರ ಸರಿಯಾಗಿದೆ ಎಂದು ಆದೇಶ ನೀಡಿದ ರಾಜ್ಯದ ಉಚ್ಚ ನ್ಯಾಯಾಲಯದ ತೀರ್ಪು ಸತ್ಯಕ್ಕೆ ಸಂದ ಜಯವಾಗಿದ್ದು ಸಿದ್ದರಾಮಯ್ಯನವರು ತನಿಖೆಯ ದೃಷ್ಟಿಯಿಂದ ಇನ್ನಾದರೂ ರಾಜೀನಾಮೆ ನೀಡಲಿ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಆಗ್ರಹಿಸಿದರು
ಮುಂದಿನ...
ಕೆಎಸ್‍ಆರ್‍ಟಿಸಿ : ದಸರಾ ವಿಶೇಷ ಪ್ರವಾಸ ಪ್ಯಾಕೇಜ್
ಮಂಗಳೂರು: ಕೆಎಸ್‍ಆರ್‍ಟಿಸಿ ಮಂಗಳೂರು ವಿಭಾಗದ ವತಿಯಿಂದ ದಸರಾ ಪ್ರಯುಕ್ತ ಮಂಗಳೂರಿನ ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನಕ್ಕೆ ಹಾಗೂ ಮಂಗಳೂರು-ಮಡಿಕೇರಿ, ಮಂಗಳೂರು-ಕೊಲ್ಲೂರು, ಮಂಗಳೂರು-ಮುರ್ಡೇಶ್ವರ ವಿಶೇಷ ಪ್ಯಾಕೇಜ್ ಪ್ರವಾಸವನ್ನು ಅಕ್ಟೋಬರ್ 3ರಿಂದ 12ರ ವರೆಗೆ ಆಯೋಜಿಸಲಾಗಿದೆ.
ಪ್ಯಾಕೇಜ್ ಪ್ರವಾಸದ ಮಾರ್ಗ, ವೇಳೆ ಮತ್ತು ಪ್ರಯಾಣದರದ ವಿವರ
ಮಂಗಳೂರು ದಸರಾ ನವದುರ್ಗ ದರ್ಶನ ಪ್ಯಾಕೇಜ್ :ಮಂಗಳೂರು ಬಸ್ಸು ನಿಲ್ದಾಣದಿಂದ ಬೆಳಿಗ್ಗೆ 8ಗಂಟೆಗೆ ಹೊರಟು,...
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ
ಮಂಗಳೂರು: ಮೆಟ್ರಿಕ್ ನಂತರದ ಕೋರ್ಸುಗಳಾದ ಪಿಯುಸಿ ಮತ್ತು ಸಮಾನಾಂತರ , ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ಮತ್ತು ವಿದ್ಯಾಸಿರಿ (ಊಟ ಮತ್ತು ವಸತಿ...
ಎಂಸಿಸಿ ಬ್ಯಾಂಕಿನ ವಾರ್ಷಿಕ ಸಾಮಾನ್ಯ ಸಭೆ: 10.45 ಕೋಟಿ ರೂ. ನಿವ್ವಳ ಲಾಭ
ಮ೦ಗಳೂರು: ಎಂ.ಸಿ.ಸಿ. ಬ್ಯಾಂಕಿನ ವಾರ್ಷಿಕ ಮಹಾಸಭೆಯು ಸೆ.22.ರಂದು ಮಂಗಳೂರಿನ ಸಂತ ಆಲೋಶಿಯಸ್ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ(ಲೊಯೊಲಾ ಹಾಲ್) ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೋ ಅವರ ಅಧ್ಯಕ್ಷತೆಯಲ್ಲಿ ಜರುಗಿತು.ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ, ಉಪಾಧ್ಯಕ್ಷ ಜೆರಾಲ್ಡ್ ಜೂಡ್ ಡಿಸಿಲ್ವಾ ಮತ್ತು ನಿರ್ದೇಶಕ ಡೇವಿಡ್ ಡಿಸೋಜ ಅವರು ಜ್ಯೋತಿ ಬೆಳಗಿಸುವ ಮೂಲಕ...
ಪರಿಷತ್ ಚುನಾವಣೆ : ನೀತಿ ಸಂಹಿತೆ ಉಲ್ಲಂಘನೆ ನಿಯಂತ್ರಿಸಲು ತಂಡಗಳ ರಚನೆ
ಮಂಗಳೂರು: ಸ್ಥಳಿಯ ಪ್ರಾಧಿಕಾರದ ದ್ವೈವಾರ್ಷಿಕ ಚುನಾವಣಾ ಕ್ಷೇತ್ರಕ್ಕೆ ಉಪಚುನಾವಣಾ ವೇಳಾಪಟ್ಟಿಯನ್ನು ಹೊರಡಿಸಲಾಗಿದ್ದು. ಸೆಪ್ಟೆಂಬರ್ 19 ರಿಂದ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆ ಯಾಗದಂತೆ ತಡೆಗಟ್ಟುವ ಉದ್ದೇಶದಿಂದ ತಾಲೂಕು ಮಟ್ಟದಲ್ಲಿ ವಿವಿಧ ತಂಡಗಳನ್ನು ರಚಿಸಲಾಗಿದೆ. ಮಾದರಿ ನೀತಿ ಸಂಹಿತೆಯು ಅಕ್ಟೋಬರ್ 28 ರ ವರೆಗೆ ಜಾರಿಯಲ್ಲಿರುತ್ತದೆ.
ಈ ಅವಧಿಯಲ್ಲಿ ರಾಜಕೀಯ ಪಕ್ಷದವರು...
ಸೆ25: ಉಳ್ಳಾಲದಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ
ಮಂಗಳೂರು: ಸೆಪ್ಟೆಂಬರ್ 25 ರಂದು ಬೆಳಿಗ್ಗೆ 11 ಗಂಟೆಯಿಂದ ಉಳ್ಳಾಲ ನಗರಸಭೆ ಕಛೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ ನಡೆಯಲಿದೆ.
ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದು.ಇದಲ್ಲದೇ ಉಳಿದ ದಿನಗಳಲ್ಲೂ ಕಛೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ...



