ವಿಧಾನ ಪರಿಷತ್ ಚುನಾವಣೆ ಒಟ್ಟು 8 ನಾಮಪತ್ರ ಸಲ್ಲಿಕೆ
ಮಂಗಳೂರು: ವಿಧಾನಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆಯುವ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಮುಕ್ತಾಯಗೊಂಡಿದ್ದು, ಒಟ್ಟು 8 ನಾಮಪತ್ರಗಳು ಸಲ್ಲಿಕೆಯಾಗಿವೆ.ಗುರುವಾರ 7 ನಾಮಪತ್ರ ಸಲ್ಲಿಕೆಯಾಗಿದ್ದು, ಚುನಾವಣಾಧಿಕಾರಿಯಾಗಿರುವ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ನಾಮಪತ್ರವನ್ನು ಸ್ವೀಕರಿಸಿದರು.ನಾಮಪತ್ರ ಸಲ್ಲಿಸಿದವರ ವಿವರ :-ಕಿಶೋರ್ ಬಿ.ಆರ್ (ಭಾರತೀಯ ಜನತಾ ಪಾರ್ಟಿ) 2 ನಾಮಪತ್ರ ರಾಜು ಪೂಜಾರಿ (ಭಾರತೀಯ...
ವಿಶ್ವಕ್ಕೆ ಶಾಂತಿ ಬೋಧಿಸಿದ ಮಹಾಚೇತನ ಮಹಾತ್ಮ ಗಾಂಧಿ: ಜಿಲ್ಲಾಧಿಕಾರಿ
ಮ೦ಗಳೂರು: ಮಹಾತ್ಮ ಗಾಂಧಿ ಎಂದರೆ ಕೇವಲ ಒಂದು ವ್ಯಕ್ತಿ ಅಥವಾ ವ್ಯಕ್ತಿತ್ವ ಅಲ್ಲ ಇಡೀ ವಿಶ್ವಕ್ಕೆ ಅಹಿಂಸೆ ಮತ್ತು ಶಾಂತಿಯ ತತ್ವ ಬೋಧಿಸಿದ ಮಹಾ ಚೇತನ ಎಂದು ಜಿಲ್ಲಾಧಿಕಾರಿ ಮುಲ್ಲಯಿ ಮುಗಿಲನ್ ಎಂ. ಪಿ ಅವರು ಹೇಳಿದರು.
ಅವರು ಬುಧವಾರ ದ. ಕ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಭಾರತ ಸೇವಾದಳ...
ಸೋಮೇಶ್ವರ ಬೀಚಿನಲ್ಲಿ ಬೀಚ್ ಸ್ವಚ್ಛತಾ ಕಾರ್ಯಕ್ರಮ
ಮ೦ಗಳೂರು: ಜಿಲ್ಲಾಡಳಿತ ಮತ್ತು ನೆಹರು ಯುವಕ ಕೇಂದ್ರ ಮಂಗಳೂರು ಸೇಂಟ್ ಆಗ್ನೆಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳು ಹಾಗೂ ತಾಲೂಕು ಪಂಚಾಯತ್ ಮಂಗಳೂರು ಸೋಮೇಶ್ವರ ಪಟ್ಟಣ ಪಂಚಾಯತ್ ವೀರ ಮಾರುತಿ ಸ್ಪೋರ್ಟ್ಸ್ ಕ್ಲಬ್ ಜಿಲ್ಲಾ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ವತಿಯಿಂದ ಗಾಂಧಿ ಜಯಂತಿ ಅಂಗವಾಗಿ ಸೋಮೇಶ್ವರ ಬೀಚಿನಲ್ಲಿ ಬೀಚ್ ಸ್ವಚ್ಛತಾ...
ಬ್ರಾ೦ಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾಟ
ಮಂಗಳೂರು : ಪರಸ್ಪರ ಬಾಂಧವ್ಯ ಬೆಸೆದು ಸೌಹಾರ್ದತೆ ನೆಲೆಸಲು ಕ್ರೀಡೆ ಸಹಕಾರಿಯಾಗಿದ್ದು, ಬ್ರಾೃಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾಟ ಇದಕ್ಕೆ ಪೂರಕವಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್.ಎಂ.ಪಿ. ಹೇಳಿದರು.ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ದ.ಕ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ನಗರ ಪೊಲೀಸ್ ಕಮಿಷನರೆಟ್, ದ.ಕ.ಜಿಲ್ಲಾ ಪೊಲಿಸ್, ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್...
ಮಾತಾ ಅಮೃತಾನಂದಮಯಿ ಮಠ : ನೂತನ ಸೇವಾ ಸಮಿತಿಯ ಪದಗ್ರಹಣ
ಮಂಗಳೂರು: ಮಾತಾ ಅಮೃತಾನಂದಮಯಿ ಮಠ, ಮಂಗಳೂರು ಇದರ ಸೇವಾ ಸಮಿತಿಯ ಪುನಾರಚನೆ ಹಾಗೂ ಪದಗ್ರಹಣ ಕಾರ್ಯಕ್ರಮ ಇತ್ತೀಚೆಗೆ ಜರುಗಿತು.
ಗೌರವಾಧ್ಯಕ್ಷರಾಗಿ ಮಂಗಳೂರು ವಿ.ವಿ.ಯ ವಿಶ್ರಾಂತ ಉಪಕುಲಪತಿ ಡಾ. ಪಿ. ಎಸ್. ಎಡಪಡಿತ್ತಾಯ ಇರುವರು. ಅಧ್ಯಕ್ಷರಾಗಿ ಉದ್ಯಮಿ ಸುರೇಶ್ ಅಮೀನ್, ಉಪಾಧ್ಯಕ್ಷರುಗಳಾಗಿ ಡಾ. ರಾಜೇಶ್ವರಿದೇವಿ ಹಾಗೂ ಡಾ. ಇಂದುಮತಿ ಮಲ್ಯ, ಕಾರ್ಯದರ್ಶಿಯಾಗಿ ಶ್ರೀಮತಿ ವೀಣಾ ಟಿ. ಶೆಟ್ಟಿ...
ಬಿಜೆಪಿ: ಮಾಹಿತಿ ಹಾಗೂ ನೋಂದಣಿ ಶಿಬಿರ
ಮ೦ಗಳೂರು: ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ದಕ್ಷಿಣ ಮಹಾಶಕ್ತಿ ಕೇಂದ್ರ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ನಡೆದ ಸೇವಾ ಸಪ್ತಾಹದ ಅಂಗವಾಗಿ, ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ಹಾಗೂ ನೋಂದಣಿ ಶಿಬಿರ ಕಾರ್ಯಕ್ರಮವು ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ಹೆಮ್ಮೆಯ ಪ್ರಧಾನಿಗಳು ತಮ್ಮ...
ಪ್ಲಾಸ್ಟಿಕ್ ಬಳಕೆ ವಿರುದ್ಧ ಜಾಗೃತಿ ಅಭಿಯಾನ
ಮಂಗಳೂರು : ಪ್ಲಾಸ್ಟಿಕ್‌ಗೆ ಪರ್ಯಾಯವಾಗಿ ಪರಿಸರ ಸ್ನೇಹಿ ವಸ್ತುಗಳನ್ನು ಹೆಚ್ಚು ಬಳಸುವ ಮೂಲಕ ಪ್ಲಾಸ್ಟಿಕ್ ತ್ಯಾಜ್ಯಕ್ಕೆ ಕಡಿವಾಣ ಹಾಕಬಹುದು. ಪ್ಲಾಸ್ಟಿಕ್ ನಿರ್ಮೂಲನೆಗೆ ಸ್ಥಳೀಯಾಡಳಿತ ಸಂಸ್ಥೆಗಳು ಶ್ರಮಿಸಿಸುತ್ತಿದ್ದು, ಇದರ ಯಶಸ್ವಿಗೆ ಸಮುದಾಯದ ಸಹಭಾಗಿತ್ವ ಅಗತ್ಯ. ಪ್ಲಾಸ್ಟಿಕ್ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಪ್ರತಿನಿಧಿಗಳಾಗಿ ವಿದ್ಯಾರ್ಥಿಗಳು ಕಾರ್ಯ ನಿರ್ವಹಿಸಬೇಕು ಎಂದು ದ.ಕ.ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ....
ವಿಧಾನ ಪರಿಷತ್ ಉಪ ಚುನಾವಣೆ : ಕಿಶೋರ್ ಕುಮಾರ್ ಬಿಜೆಪಿ ಅಭ್ಯರ್ಥಿ
ಮಂಗಳೂರು : ವಿಧಾನ ಪರಿಷತ್‌ನ ದಕ್ಷಿಣ ಕನ್ನಡ ಸ್ಥಳೀಯಾಡಳಿತ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ , ಯುವ ನಾಯಕ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಆಯ್ಕೆ ಮಾಡಲಾಗಿದೆ.ಆರ್‌ಎಸ್‌ಎಸ್ ಸ್ವಯಂಸೇವಕ
ಕಿಶೋರ್ ಕುಮಾರ್ ಪುತ್ತೂರು ಅವರು ಅಭಾವಿಪ ನಾಯಕನಾಗಿ, ಯುವ ಮೋರ್ಚಾದ ಜಿಲ್ಲಾಧ್ಯಕ್ಷರಾಗಿ ಪಕ್ಷ ಸಂಘಟನೆಗೆ ದುಡಿದವರು. ಬಿಜೆಪಿಯ...
ಅ 2: ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ
ಮಂಗಳೂರು, ಸೆಪ್ಟೆಂಬರ್ 30, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಪೊಲೀಸ್ ಕಮಿಷನರೇಟ್, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್, ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜು ಹಾಗೂ ರೋಹನ್ ಕಾರ್ಪೋರೇಶನ್ ನೇತೃತ್ವದಲ್ಲಿ ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ...
ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯ: ಮೊದಲ ಪದವಿಪ್ರದಾನ ಸಮಾರಂಭ
ಬೆಂಗಳೂರು: ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಮೊದಲ ಬ್ಯಾಚ್ ಪೋಸ್ಟ್ ಗ್ರಾಜ್ಯುಯೇಟ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ ಸೆಪ್ಟೆಂಬರ್ 27ರ೦ದು ಜರಗಿತು.ಒಟ್ಟು 694 ವಿದ್ಯಾರ್ಥಿಗಳು ತಮ್ಮ ಪದವಿಗಳನ್ನು ಪಡೆದರು.ಪದವಿಪ್ರದಾನ ಸಮಾರಂಭ ಮೆರವಣಿಗೆಯ ರೆಜಿಸ್ಟ್ರಾರ್ ಡಾ. ಮೆಲ್ವಿನ್ ಕೊಲಾಸೊ ಮತ್ತು ಪರೀಕ್ಷಾ ನಿಯಂತ್ರಕ ಡಾ. ಸಿ ಮೋಹನ ದಾಸ್ ನೇತೃತ್ವ ವಹಿಸಿದ್ದರು. ವಿಶ್ವವಿದ್ಯಾಲಯದ ಉಪಕುಲಪತಿ ರೆ| ಡಾ....






