ಸೇವೆ, ಕರ್ತವ್ಯ ಮತ್ತು ಸಮರ್ಪಣೆಯೇ ಜೀವನದ ನಿಜವಾದ ಮಾರ್ಗ: ರಾಜ್ಯಪಾಲರು
ದಕ್ಷಿಣ ಕನ್ನಡ ಜಿಲ್ಲೆ: “ನಮ್ಮ ಸಂಸ್ಕೃತಿ ಯಾವಾಗಲೂ ವಿಶ್ವ ಸಹೋದರತ್ವ, ವಿಶ್ವ ಕಲ್ಯಾಣ, ವಿಶ್ವ ಶಾಂತಿ, ಸಮಾನತೆ ಮತ್ತು ಸಾಮರಸ್ಯವನ್ನು ಪ್ರೇರೇಪಿಸುತ್ತದೆ. ಪ್ರಪಂಚದಾದ್ಯಂತದ ಅನೇಕ ದೇಶಗಳು ಆಧ್ಯಾತ್ಮಿಕ ಮತ್ತು ಮಾನಸಿಕ ಯೋಗಕ್ಷೇಮಕ್ಕಾಗಿ ಭಾರತದತ್ತ ನೋಡುತ್ತಿದೆ” ಎಂದು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.
ಶ್ರೀ ಕೋದಂಡರಾಮ, ಪಂಚಮುಖಿ ಆಂಜನೇಯ ಕ್ಷೇತ್ರ, ಹನುಮಾನಗಿರಿ ದೇವಸ್ಥಾನದ...
“90 ಎಮ್ ಎಲ್” ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ತೆರೆಗೆ
ಮಂಗಳೂರು: ಡಿ ಡಿ ಪ್ರೊಡಕ್ಷನ್ ಲಾಂಛನದಲ್ಲಿ ರಂಜಿತ್ ಸಿ ಬಜಾಲ್ ನಿರ್ದೇಶನದಲ್ಲಿ ಡೋಲ್ಪಿ ಡಿ ಸೋಜ ನಿರ್ಮಾಣದಲ್ಲಿ ತಯಾರಾದ "90 ಎಮ್ ಎಲ್" ತುಳು ಚಲನ ಚಿತ್ರ ಶುಕ್ರವಾರ ಭಾರತ್ ಸಿನಿಮಾಸ್ ನಲ್ಲಿ ತೆರೆ ಕಂಡಿತು. ದೀಪ ಬೆಳಗಿಸುವ ಮೂಲಕ ಸಿನಿಮಾ ಉದ್ಘಾಟನೆ ನೆರವೇರಿಸಿ ಮಾತಾಡಿದ ಬೆಂಜನಪದವು ಕೊರಗಜ್ಜ ಕ್ಷೇತ್ರದ ವಿಜಯ ಅವರು “ತುಳುವಿನಲ್ಲಿ...
ಪೆಟ್ ಶಾಪ್‍ಗಳ ನೋಂದಣಿ ಕಡ್ಡಾಯ :ಜಿಲ್ಲಾಧಿಕಾರಿ ಸೂಚನೆ
ಮಂಗಳೂರು: ಜೀವಂತ ಪ್ರ್ರಾಣಿ ಮತ್ತು ಪಕ್ಷಿಗಳ ಮಾರಾಟ ಮಾಡುವ ಪೆಟ್ ಶಾಪ್‍ಗಳು ಪ್ರಾಣಿ ಹಿಂಸಾ ತಡೆ ಕಾಯಿದೆಯಡಿಯಲ್ಲಿ ಕಡ್ಡಾಯವಾಗಿ ನೋಂದಣಿ ಆಗಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಸೂಚಿಸಿದ್ದಾರೆ.ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಪ್ರಾಣಿ ದಯಾ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯಲ್ಲಿ 20 ಪೆಟ್ ಶಾಪ್‍ಗಳಿದ್ದು,...
ಪತ್ರಕರ್ತರ ಗ್ರಾಮ ವಾಸ್ತವ್ಯದ ಬಳಿಕ ಕುತ್ಲುರು ಸರಕಾರಿ ಶಾಲೆಯ ಚಿತ್ರಣವೇ ಬದಲು
ಮಂಗಳೂರು, ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಿದ ಬಳಿಕ ಶಾಲೆಯ ಚಿತ್ರಣವೇ ಬದಲಾಗಿದೆ.ಮೂಲಭೂತ ಸೌಕರ್ಯ ಹೆಚ್ಚಾಗಿದೆ. ವಿದ್ಯಾರ್ಥಿಗಳ ಸಂಖ್ಯೆಯಲ್ಲೂ ಕೂಡಾ ಹೆಚ್ಚಳ ವಾಗಿದೆ ಎಂದು ಕುತ್ಲುರು ಸರಕಾರಿ ಶಾಲೆಯ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕನಕವರ್ಮಾ ಜೈನ್ ಹೇಳಿದರು.ಮಂಗಳೂರು ಪತ್ರಿಕಾ ಭವನದಲ್ಲಿ ಗುರುವಾರ ಕುತ್ಲುರು ಸರಕಾರಿ ಶಾಲೆ ವತಿಯಿಂದ ಶಾಲೆಯ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ ಎಂ...
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ವದಂತಿಗಳಿಗೆ ಕಿವಿಗೊಡಬೇಡಿ :ಇಲಾಖೆ
ಮಂಗಳೂರು: ರಾಜ್ಯದ ವಿವಿಧ ಆಟೋ ಗ್ಯಾಸ್ ಬಂಕ್‍ಗಳಲ್ಲಿ ಅನಿಲದ ದಾಸ್ತಾನು ಕೊರತೆಯಿದೆ ಎಂಬ ತಪ್ಪು ಮಾಹಿತಿಯ ಆಧಾರದ ಮೇಲೆ, ಕಳೆದ ಕೆಲವು ದಿನಗಳಿಂದ ಆಟೋ ಮಾಲೀಕರು ಮತ್ತು ಚಾಲಕರು ಬಂಕ್‍ಗಳ ಮುಂದೆ ಸುದೀರ್ಘ ಸರತಿ ಸಾಲಿನಲ್ಲಿ ನಿಲ್ಲುತ್ತಿರುವ ಅಂಶ ಸರ್ಕಾರದ ಗಮನಕ್ಕೆ ಬಂದಿದೆ. ಈ ಕುರಿತು ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳು ಕೇವಲ ವದಂತಿಗಳಾಗಿದ್ದು,...
ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶ : ಮುಹೂರ್ತ ಮತ್ತು: ಲಾಂಛನ ಬಿಡುಗಡೆ
ಮ೦ಗಳೂರು: ತನ್ನ ಅಸ್ತಿತ್ವದ ನಲ್ವತ್ತನೇ ವರ್ಷಾಚರಣೆ (1986 – 2026) ಸಂಭ್ರಮದಲ್ಲಿರುವ ಕೊಂಕಣಿಯ ಪ್ರಮುಖ ಸಾಂಸ್ಕೃತಿಕ ಸಂಘಟನೆ ಮಾಂಡ್ ಸೊಭಾಣ್ ತನ್ನ ಧ್ಯೇಯೋದ್ದೇಶಗಳಿಗೆ ಪೂರಕವಾಗಿ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾಸಮಾವೇಶವನ್ನು ಆಯೋಜಿಸುತ್ತಿದೆ. ನವೆಂಬರ್ 3 ರ೦ದ 15 ರವರೆಗೆ ಮಂಗಳೂರಿನಲ್ಲಿ ನಡೆಯುವ ಈ ಬೃಹತ್ ಕಾರ್ಯಕ್ರಮದ ಮುಹೂರ್ತ ಮತ್ತು ಲಾಂಛನ ಬಿಡುಗಡೆ ಕಾರ್ಯಕ್ರಮವು...
ನೈಋತ್ಯ ರೈಲ್ವೆಯ ರೈಲ್ವೆ ರಕ್ಷಣಾ ಪಡೆಯಿ೦ದ (ಆರ್‌ಪಿಎಫ್) 15 ಹುಡುಗಿಯರು ಸೇರಿದಂತೆ 37 ಮಕ್ಕಳ ರಕ್ಷಣೆ
ಹುಬ್ಬಳ್ಳಿ: ನೈಋತ್ಯ ರೈಲ್ವೆಯ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) 2026ರ ಮಾರ್ಚ್ ನಲ್ಲಿ ನನ್ಹೆ ಫರಿಷ್ಠೇ” ಕಾರ್ಯಾಚರಣೆಯಡಿಯಲ್ಲಿ (ಕಳೆದುಹೋದ ಮಕ್ಕಳ ರಕ್ಷಣೆ) ಆರೈಕೆ ಮತ್ತು ರಕ್ಷಣೆಯ ಅಗತ್ಯವಿದ್ದ37 ಮಕ್ಕಳನ್ನು (22 ಹುಡುಗರು ಮತ್ತು 15 ಹುಡುಗಿಯರು) ರಕ್ಷಿಸಿ ಅವರ ಕುಟುಂಬಗಳೊಂದಿಗೆ ಮರುಸೇರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ವಿವಿಧ ಕಾರಣಗಳಿಂದ ಕುಟುಂಬಗಳಿಂದ ಬೇರ್ಪಟ್ಟಿದ್ದ ಈ ಮಕ್ಕಳನ್ನು...
ರೆಡ್‌ಕ್ರಾಸ್‌ನಿಂದ ವಿಶ್ವ ಆರೋಗ್ಯ ದಿನಾಚರಣೆ
ಮಂಗಳೂರು : ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ವತಿಯಿಂದ ಯೂತ್ ರೆಡ್‌ಕ್ರಾಸ್ ಮಂಗಳೂರು ವಿ.ವಿ. ಮತ್ತು ನಿಟ್ಟೆ ಪರಿಗಣಿತ ವಿ.ವಿ. ಸಹಯೋಗದಲ್ಲಿ ನಗರದ ರೆಡ್‌ಕ್ರಾಸ್ ಶತಮಾನೋತ್ಸವ ಭವನದ ಪ್ರೇರಣಾ ಸಭಾಂಗಣದಲ್ಲಿ ಮಂಗಳವಾರ ವಿಶ್ವ ಆರೋಗ್ಯ ದಿನ ಆಚರಿಸಲಾಯಿತು.ಕಾರ್ಯಕ್ರಮ ಉದ್ಘಾಟಿಸಿದ ಕೆಎಂಸಿ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀ ರೋಗಶಾಸ್ತ್ರ ತಜ್ಞೆ ಡಾ.ಶ್ರದ್ಧಾ ಶೆಟ್ಟಿ ಮಾತನಾಡಿ...
ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮವಹಿಸಿ – ಅಧಿಕಾರಿಗಳಿಗೆ ಸ್ಪೀಕರ್ ಸೂಚನೆ
ಮಂಗಳೂರು: ಸಾರ್ವಜನಿಕರಿಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಸೂಚಿಸಿದ್ದಾರೆ.ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಕುಡಿಯುವ ನೀರಿನ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.ಗ್ರಾಮ ಪಂಚಾಯತ್‍ಗಳು, ನಗರ ಸ್ಥಳೀಯ ಸಂಸ್ಥೆಗಳು, ಬೇಸಿಗೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಹೆಚ್ಚಿನ...
ಎಂಸಿಸಿ ಬ್ಯಾಂಕ್ : 2025-26 ವಿತ್ತೀಯ ವರ್ಷದಲ್ಲಿ 13 ಕೋಟಿ ರೂ. ಲಾಭ
ಮ೦ಗಳೂರು: ಎಂಸಿಸಿ ಬ್ಯಾಂಕ್, 31 ಮಾರ್ಚ್ 2026ಕ್ಕೆ ಅಂತ್ಯಗೊ೦ಡ ಆರ್ಥಿಕ ವರ್ಷದಲ್ಲಿ ಎಲ್ಲಾ ವ್ಯವಹಾರ ಮಾನದಂಡಗಳಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ವಿತ್ತೀಯ ವರ್ಷದಲ್ಲಿ ರೂ. 13 ಕೋಟಿ ಲಾಭ ದಾಖಲಿದೆ. ಮಂಗಳೂರಿನ ದೇರಳಕಟ್ಟೆಯಲ್ಲಿ 22ನೇ ಶಾಖೆ ಹಾಗೂ ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ 23ನೇ ಶಾಖೆ ಆರಂಭಿಸಲು ಸಿದ್ಧತೆ. ನಡೆಸಿದೆ. ಎಂಸಿಸಿ ಬ್ಯಾಂಕ್ ಈ ವರ್ಷ...







