ಮ೦ಗಳೂರು:ಧಾರವಾಹಿಗೆ ಪ್ರಧಾನ ಪಾತ್ರಗಳ ಆಯ್ಕೆ ಪ್ರಕ್ರಿಯೆ
ಮ೦ಗಳೂರು: ZEE KANNADA ವಾಹಿನಿಯ, ಸುಖಧರೆ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಭಕ್ತಿಪ್ರದಾನ ಪೌರಾಣಿಕ ಧಾರವಾಹಿಗೆ ʼ ಉಘೇ ಉಘೇ ಮಾದೇಶ್ವರʼ ಧಾರವಾಹಿ ಖ್ಯಾತಿಯ ನಿರ್ದೇಶಕರಾದ ಕೆ. ಮಹೇಶ್ ಸುಖಧರೆ ನೇತೃತ್ವದಲ್ಲಿ ಪ್ರಧಾನ ಪಾತ್ರಗಳ ಆಯ್ಕೆಯ ಪ್ರಕ್ರಿಯೆ ಮಂಗಳೂರಿನಲ್ಲಿ ನಡೆಸಲಾಗುತ್ತಿದೆ.
ಕಲಾವಿದರ ವಯಸ್ಸಿನ ಮಿತಿ : ಗಂಡು ಹಾಗೂ ಹೆಣ್ಣು- 6 ರಿಂದ 50 ವಯಸ್ಸಿನವರು, ಪ್ರಮುಖವಾಗಿ- ನಾಯಕ,...
ವಿಕೆ ಫರ್ನಿಚರ್ ಮತ್ತು ಎಲೆಕ್ಟ್ರಾನಿಕ್ಸ್ : ಆನ್‌ಲೈನ್ ಫ್ಯಾನ್ಸಿ ಡ್ರೆಸ್ ಸ್ಪರ್ಧೆ
ಮ೦ಗಳೂರು: ವಿಕೆ ಫರ್ನಿಚರ್ ಮತ್ತು ಎಲೆಕ್ಟ್ರಾನಿಕ್ಸ್ ಸ್ವಾತಂತ್ರ‍್ಯ ದಿನಾಚರಣೆಯ ಅಂಗವಾಗಿ ಆನ್‌ಲೈನ್ ಫ್ಯಾನ್ಸಿ ಡ್ರೆಸ್ಸ್ ಸ್ಪರ್ಧೆ-2024ಅನ್ನು ಪ್ರಸ್ತುತ ಪಡಿಸುತ್ತಿದ್ದು, ಮಕ್ಕಳು ತಮ್ಮ ಪ್ರತಿಭೆ ಮತ್ತು ಶಕ್ತಿಯನ್ನು ಪ್ರದರ್ಶಿಸಲು ವೇದಿಕೆಯಾಗಿದೆ.
ವಿಷಯ: ಮಗುವನ್ನು ಸ್ವಾತಂತ್ರ್ಯಹೋರಾಟಗಾರನಂತೆ ಅಲಂಕರಿಸುವುದು.
ವಿಭಾಗಗಳು ಮತ್ತು ಬಹುಮಾನಗಳು:• 2-5 ವರ್ಷದ ಮಕ್ಕಳು : ಫೋಟೋ ಮಾತ್ರಬಹುಮಾನಗಳು: ಪ್ರಥಮ ಸ್ಟಡಿ ಟೇಬಲ್, ದ್ವಿತೀಯ ಪಿಯಾನೋ ಕೀಬೋರ್ಡ್, ತೃತೀಯ...
ಶಿಕ್ಷಣ ಪ್ರಕೋಷ್ಠದ ರಾಜ್ಯ ಸಮಿತಿಗೆ ಮುರಳಿ ಹೊಸಮಜಲು ಆಯ್ಕೆ
ಮ೦ಗಳೂರು: ಭಾರತೀಯ ಜನತಾ ಪಾರ್ಟಿಯ ಶಿಕ್ಷಣ ಪ್ರಕೋಷ್ಠದ ರಾಜ್ಯ ಸಮಿತಿಯ ನೂತನ ಸದಸ್ಯರನ್ನಾಗಿ ಮಂಗಳೂರಿನ ಇಂಡಿಯನ್ ಸಮೂಹ ಸಂಸ್ಥೆಗಳ ನಿರ್ದೇಶಕ. ಮುರಳಿ ಹೊಸಮಜಲು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕೋಷ್ಠದ ರಾಜ್ಯ ಸಂಚಾಲಕ ಡಾ. ಸಿ. ಬಿ. ಶಶಿಧರ ಅವರು ತಿಳಿಸಿದ್ದಾರೆ.
ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಇತ್ತಿಚಿಗೆ ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ...
ಆ.3ರಂದು ಪುರಭವನದಲ್ಲಿ ‘ಭ್ರಾಮರಿ ಯಕ್ಷ ವೈಭವ’
ಮ೦ಗಳೂರು: ಭ್ರಾಮರಿ ಯಕ್ಷಮಿತ್ರರು ಮಂಗಳೂರು ಟ್ರಸ್ಟ್ ವತಿಯಿಂದ ಏಳನೇ ವರ್ಷದ ಭ್ರಾಮರಿ ಯಕ್ಷವೈಭವ ೨೦೨೪, ಯಕ್ಷ ಛಾಯಾಚಿತ್ರ ಪ್ರದರ್ಶನ, ಪ್ರಶಸ್ತಿ ಪ್ರದಾನ ಮತ್ತು ಉಚಿತ ಯಕ್ಷಗಾನ ಪ್ರದರ್ಶನ ಆ.3 ರಂದು ಸಂಜೆ ೪ ಗಂಟೆಯಿಂದ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ.ಸಂಜೆ 7 ಗಂಟೆಯಿಂದ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಕರ್ನಾಟಕ ಜಾನಪದ ವಿವಿ ವಿಶ್ರಾಂತ...
ವಿಕಲಚೇತನರ ಕಲ್ಯಾಣ ಕಾರ್ಯಕ್ರಮ: ಅರ್ಜಿ ಆಹ್ವಾನ
ಮಂಗಳೂರು: ಮಂಗಳೂರು ಮಹಾನಗರಪಾಲಿಕೆಯ ನಗರ ಬಡತನ ನಿರ್ಮೂಲ ಕೋಶದಲ್ಲಿ ಶೇ. ೫% ಮೀಸಲು ನಿಧಿಯ ವಿಕಲಚೇತನರ ಕಲ್ಯಾಣ ಕಾರ್ಯಕ್ರಮದಡಿ ೨೦೨೪-೨೫ನೇ ಸಾಲಿನ ವ್ಯಕ್ತಿ ಸಂಬಂಧಿಸಿದ ಕಾರ್ಯಕ್ರಮಗಳಿಗೆ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕುಟುಂಬದ ವಾರ್ಷಿಕ ಆದಾಯ ಸಾಮಾನ್ಯ ಸೌಲಭ್ಯ ಪಡೆಯಲು ರೂ.೩ ಲಕ್ಷ ಹಾಗೂ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದ ಸೌಲಭ್ಯ ಪಡೆಯಲು ರೂ. ೨.೫೦ ಲಕ್ಷ...
ಸೇನೆಗೆ ಸೇರಲು ಎನ್‌ಸಿಸಿ ಪ್ರೇರಣೆ: ಕ್ಯಾ.ಸುಧೀರ್ ಜಿ. ಅಮೀನ್
ಮಂಗಳೂರು : ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುವುದು ಒಂದು ವಿಶಿಷ್ಟ ಅನುಭವ. ಸೇನೆಗೆ ಸೇರ ಬಯಸುವ ಯುವಕರು ದೇಶಪ್ರೇಮ, ಸೇವಾ ಮನೋಭಾವನೆ ಹಾಗೂ ದೃಢವಾದ ಮಾನಸಿಕ ಸಿದ್ಧತೆ ಹೊಂದಿರುವುದು ಅಗತ್ಯ ಎಂದು ಭಾರತೀಯ ವಾಯು ಸೇನೆಯ ನಿವೃತ್ತ ಗ್ರೂಪ್ ಕ್ಯಾಪ್ಟನ್ ಸುಧೀರ್ ಜಿ. ಅಮೀನ್ ಹೇಳಿದರು.ಮಂಗಳವಾರ ಮಂಗಳೂರು ಪ್ರೆಸ್‌ಕ್ಲಬ್ ಗೌರವ ಅತಿಥಿ ಪುರಸ್ಕಾರ ಸ್ವೀಕರಿಸಿ...
ಕೆನರಾ ನಂದಗೋಕುಲ್ ಹುಲಿಯ ದಿನಾಚರಣೆ
ಮಂಗಳೂರು: ಕೆನರಾ ನಂದಗೋಕುಲ್ ತಂಡವು ಶ್ರೀ ಭುವನೇಂದ್ರ ಸಭಾಭವನದಲ್ಲಿ ಹುಲಿಯ ದಿನವನ್ನು ವಿಜೃಂಭಣೆಯಿಂದ ಆಚರಿಸಿತು. ಮಕ್ಕಳು ಹುಲಿವೇಷ ಧರಿಸಿ ಎಲ್ಲರ ಗಮನ ಸೆಳೆದರು. ಕೆಲವು ಮಕ್ಕಳು ಹುಲಿಗಳ ಬಗ್ಗೆ ಭಾವನಾತ್ಮಕ ಭಾಷಣಗಳನ್ನು ನೀಡಿ, ಪರಿಸರ ಸಂರಕ್ಷಣೆಯ ಮಹತ್ವವನ್ನು ತಿಳಿಸಿದರು.
ಈ ಸಂದರ್ಭದಲ್ಲಿ "ಹುಲಿಗಳನ್ನು ರಕ್ಷಿಸಿ, ಪ್ರಕೃತಿಯನ್ನು ಉಳಿಸಿ" ಎಂಬ ಘೋಷಣೆ ಕೇಳಿಬಂತು. ಪುಣ್ಯಕೋಟಿ ಎಂಬ ಪ್ರಸಿದ್ಧ...
ಬಹು ನಿರೀಕ್ಷಿತ ʻಪಯಣ್ʼ ಕೊಂಕಣಿ ಚಲನಚಿತ್ರದ ಪೋಸ್ಟರ್ ಬಿಡುಗಡೆ
ಮ೦ಗಳೂರು: ʻಸಂಗೀತ್ ಘರ್ʼ ಮಂಗಳೂರು ಬ್ಯಾನರ್ನ ಅಡಿಯಲ್ಲಿ ತಯಾರಾಗಿರುವ ಕೊಂಕಣಿ ಚಲನಚಿತ್ರ ʻಪಯಣ್ʼ (ಪ್ರಯಾಣ) ಇದರ ಪೋಸ್ಟರ್ ಬಿಡುಗಡೆ ಸಮಾರಂಭವು ಜು.28ರಂದು ಪುತ್ತೂರಿನ ರೋಟರಿ ಮನಿಷಾ ಸಭಾಂಗಣದಲ್ಲಿ ನೆರವೇರಿತು.
ಮಾಯ್ದೆ ದೇವುಸ್ ಚರ್ಚಿನ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಜೆರಾಲ್ಡ್ ಡಿಕೋಸ್ಟಾ, ಡೊನ್ ಬೊಸ್ಕೊ ಕ್ಲಬ್ ಅಧ್ಯಕ್ಷರಾದ ಆಂಟನಿ ಒಲಿವೆರಾ ಮತ್ತು ಕಾರ್ಯದರ್ಶಿ ಜ್ಯೋ ಡಿಸೋಜಾರವರು ಜೊತೆಗೂಡಿ...
ಸ್ಪೀಕರ್ ಯು.ಟಿ.ಖಾದರ್ ಅವರಿಗೆ ತುಳು ಅಕಾಡೆಮಿಯ ವತಿಯಿಂದ ಸನ್ಮಾನ
ಮಂಗಳೂರು : ಕರ್ನಾಟಕ ವಿಧಾನಸಭೆಯಲ್ಲಿ ಕಲಾಪದ ವೇಳೆ ಶಾಸಕರಿಗೆ ತುಳು ಭಾಷೆಯನ್ನು ಮಾತನಾಡಲು ಅವಕಾಶ ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರನ್ನುಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಮಂಗಳೂರಲ್ಲಿ ಸನ್ಮಾನಿಸಿದರು.ಖಾದರ್ ಅವರಿಗೆ ಸಾಲು ಹಾಗೂ ಪುಸ್ತಕ ಮತ್ತು ಸ್ಮರಣಿಕೆ ನೀಡಿ, ಅಭಿನಂದಿಸಿದರು. ಈ ವೇಳೆ ತುಳು ಸಾಹಿತ್ಯ ಅಕಾಡೆಮಿಯ...
ದೇವಸ್ಥಾನ ವ್ಯವಸ್ಥಾಪನಾ ಸಮಿತಿ ರಚನೆ : ಅರ್ಜಿ ಆಹ್ವಾನ
ಮಂಗಳೂರು: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅನ್ವಯ ದ.ಕ ಜಿಲ್ಲೆಯ ಪ್ರವರ್ಗ "ಬಿ" ಮತ್ತು "ಸಿ" ವರ್ಗದ ಅಧಿಸೂಚಿತ ಸಂಸ್ಥೆಗಳಿಗೆ ೯ ಜನ ಸದಸ್ಯರಿರುವ ವ್ಯವಸ್ಥಾಪನಾ ಸಮಿತಿಯನ್ನು ರಚಿಸುವ ಸಲುವಾಗಿ ಆಸಕ್ತ ಭಕ್ತಾಧಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಹಾಯಕ ಆಯುಕ್ತರು, ಧಾರ್ಮಿಕ ದತ್ತಿ ಇಲಾಖೆ, ಜಿಲ್ಲಾಧಿಕಾರಿ ಕಚೇರಿ, ಮಂಗಳೂರು ಅವರಿಗೆ ನಿಗಧಿತ...





