ಇಂದು ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

0
ಮಂಗಳೂರು:ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಜುಲೈ 21 ರಂದು ದ.ಕ. ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಜುಲೈ 21 ರಂದು ಬೆಳಿಗ್ಗೆ 10.30 ಗಂಟೆಗೆ ಮಂಗಳುರು ವಿಮಾನ ನಿಲ್ದಾಣಕ್ಕೆ ಆಗಮನ. ಬಳಿಕ 11 ಗಂಟೆಗೆ ಮಳೆಯಿಂದ ಹಾನಿಗೊಳಗಾದ ಜಿಲ್ಲೆಯ...

ಜುಲೈ 24 : ಮೇಯರ್ ಫೋನ್-ಇನ್ ಕಾರ್ಯಕ್ರಮ

0
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಮೇಯರ್ ನೇರ ಫೋನ್-ಇನ್ ಕಾರ್ಯಕ್ರಮ ಜುಲೈ 24ರಂದು ಬುಧವಾರ ಬೆಳಿಗ್ಗೆ 11 ಗಂಟೆಗೆ ಮಹಾನಗರಪಾಲಿಕೆ ಮಹಾಪೌರರ ಕೊಠಡಿಯಲ್ಲಿ ನಡೆಯಲಿದೆ. ಸಾರ್ವಜನಿಕರು ತಮ್ಮ ಅಹವಾಲುಗಳಿದ್ದಲ್ಲಿ ದೂರವಾಣಿ ಸಂಖ್ಯೆ: 0824-2220301, 0824-2220318 ಸಂಪರ್ಕಿಸುವಂತೆ ಮಹಾನಗರಪಾಲಿಕೆಯ ಪರಿಷತ್ತು ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರೆಡ್‌ಕ್ರಾಸ್‌ನ ಸೇವಾ ಕಾರ್ಯಗಳಿಗೆ ಸಹಕಾರ :ಸಂಸದ ಕ್ಯಾ.ಬ್ರಿಜೇಶ್ ಚೌಟ

0
ಮಂಗಳೂರು : ಮಾನವೀಯ ಸೇವೆ ಮತ್ತು ಸಮಾಜ ಸೇವಾ ಕಾರ್ಯದಲ್ಲಿ ಪರಿಪೂರ್ಣವಾಗಿ ತೊಡಗಿಸಿ ಕೊಂಡಿರುವ ರೆಡ್‌ಕ್ರಾಸ್ ಸೊಸೈಟಿಯ ಬಲವರ್ಧನೆಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ದ.ಕ.ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದರು.ರೆಡ್‌ಕ್ರಾಸ್ ಸೊಸೈಟಿಯ ದ.ಕ. ಜಿಲ್ಲಾ ಘಟಕದ ವತಿಯಿಂದ ಸಂಸದರ ಕಚೇರಿಯಲ್ಲಿ ಶನಿವಾರ ಗೌರವ ಸ್ವೀಕರಿಸಿದ ಅವರು ರೆಡ್‌ಕ್ರಾಸ್ ಸೊಸೈಟಿಯ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ...

ಕಾಣೆಯಾಗಿದ್ದ ಪ್ರವೀಣ್ ನನ್ನು ಹೆತ್ತವರ ಮಡಿಲು ಸೇರಿಸಿದ ಸ್ನೇಹಾಲಯ

0
ಮ೦ಗಳೂರು: ಹತ್ತು ವರ್ಷದ ಹಿಂದೆ ಕಾಣೆಯಾಗಿದ್ದ ಪ್ರವೀಣ್ ಪುನಃ ಹೆತ್ತವರ ಮಡಿಲು ಸೇರಿದ ಘಟನೆ ಮಂಜೇಶ್ವರದ ಸ್ನೇಹಾಲಯದಲ್ಲಿ ಜು. 20 ರಂದು ನಡೆಯಿತು..ಮಂಗಳೂರಿನ ಅತ್ತಾವರದ ಕೆ.ಎಮ್.ಸಿ ಆಸ್ಪತ್ರೆಯ ಬಳಿಯಿಂದ ಸ್ನೇಹಾಲಯದ ಸಹೋದರ ಜೋಸೆಫ್ ಕ್ರಾಸ್ತಾರಾವರು 2018ರ ಸೆ.7 ರಂದು ಪ್ರವೀಣನನ್ನು ರಕ್ಷಿಸಿ ಸ್ನೇಹಾಲಯಕ್ಕೆ ದಾಖಲಿಸಿದ್ದರು.ಕಳೆದ ಕೆಲವು ವರ್ಷಗಳಿಂದ ಆತ ಸ್ನೇಹಾಲಯದಲ್ಲಿ ಎಲ್ಲರ ಪ್ರೀತಿಪಾತ್ರನಾಗಿದ್ದ, ಆತನ...

ಕೋಡಿಕ್ಕಲ್ ಮನೆಕಳ್ಳತನ ಪ್ರಕರಣ:ಆರೋಪಿಗಳ ಬ೦ಧನ

0
ಮ೦ಗಳೂರು: ಉರ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಕೋಡಿಕ್ಕಲ್ ವಿವೇಕಾನಂದ ನಗರ ಎಂಬಲ್ಲಿ ಜು. 6. ರಂದು ನಡೆದಿದ್ದ ಮನೆಕಳ್ಳತನ ಪ್ರಕರಣದ ಆರೋಪಿಗಳನ್ನು ಬ೦ಧಿಸಲಾಗಿದೆ. ಕಳವು ಮಾಡಿದ ಸುಮಾರು 4,64,750/- ರೂ ಮೌಲ್ಯದ ಚಿನ್ನಾಭರಣಗಳನ್ನು ಮತ್ತು ಕೃತ್ಯಕ್ಕೆ ಬಳಸಿದ ಸ್ಕೂಟರ್ ಅನ್ನು ಆರೋಪಿಗಳಿಂದ ಸ್ವಾಧೀನ ಪಡಿಸಿಕೊಳ್ಳಲಾಗಿದೆ. ವೆಂಕಟೇಶ್ @ ವೆಂಕಿ( 21 ವರ್ಷ),ಸಾಗರ್, (21 ವರ್ಷ),ರಂಜಿತ್, (20...

ನೆರೆ, ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ

0
ಮ೦ಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಶುಕ್ರವಾರ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಉನ್ನತ ಅಧಿಕಾರಿಗಳೊಂದಿಗೆ ಜಿಲ್ಲೆಯ ವಿವಿಧ ನೆರೆ ಪೀಡಿತ ಹಾಗೂ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್, ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಅವರೊಂದಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಪರಿಸ್ಥಿತಿಯನ್ನು ಖುದ್ದು ಪರಿಶೀಲಿಸಿದರು. ಸ್ಥಳೀಯ...

ಜುಲೈ 29 : ತ್ರೈಮಾಸಿಕ ಕೆ.ಡಿ.ಪಿ ಸಭೆ

0
ಮಂಗಳೂರು,ಜು.19: 2024-25ನೇ ಸಾಲಿನ ಪ್ರಥಮ ತ್ರೈಮಾಸಿಕ ಕೆ.ಡಿಪಿ ಮುಂದುವರಿದ ಪ್ರಗತಿ ಪರಿಶೀಲನಾ ಸಭೆಯು, ಜುಲೈ 29ರಂದು ಸೋಮವಾರ ಬೆಳಗ್ಗೆ 10.30 ಗಂಟೆಗೆ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೆನರಾ ವಿಕಾಸ್ ಸಮೂಹ ಸಂಸ್ಥೆ : ವನ ಮಹೋತ್ಸವ

0
ಮಂಗಳೂರು: ಕೆನರಾ ವಿಕಾಸ್ ಸಮೂಹ ಸಂಸ್ಥೆಗಳ ಆವರಣದಲ್ಲಿ ಜುಲೈ 19ರಂದು ವನಮಹೋತ್ಸವ ಕಾರ್ಯಕ್ರಮವನ್ನು ಸಸಿಗಳನ್ನು ನೆಡುವ ಮೂಲಕ ಆಚರಿಸಲಾಯಿತು. ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿದ, ಕೆನರಾ ಹೈಸ್ಕೂಲ್ ಅಸೋಸಿಯೇಶನ್ ನ ಆಡಳಿತ ಮಂಡಳಿಯ ಸದಸ್ಯರಾದ ಬಸ್ತಿ ಪುರುಷೋತ್ತಮ ಶೆಣೈ ಅವರು ಮಾತನಾಡಿ ಮನುಷ್ಯನ ಜೀವನದಲ್ಲಿ ಗಿಡಮರಗಳ ಪ್ರಾಮುಖ್ಯತೆಯನ್ನು ವಿವರಿಸಿದರು. ಕೆನರಾ ವಿಕಾಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ...

ಮಹಿಳಾ ಪಾಲಿಟೆಕ್ನಿಕ್ ನಲ್ಲಿ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ‌

0
ಮಂಗಳೂರು:2024-25ನೇ ಸಾಲಿನಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಬೊಂದೇಲ್‍ನಲ್ಲಿರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‍ನಲ್ಲಿ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟಿಸ್ (ಕನ್ನಡ ಮತ್ತು ಇಂಗ್ಲಿಷ್ ಹಾಗೂ ಲೈಬ್ರೆರಿ ಅಂಡ್ ಇನ್‍ಪೋರ್‍ಮೇಶನ್ ಸೈನ್ಸ್ ಕೋರ್ಸುಗಳಿಗೆ ಸೇರಲು ಎಸ್.ಎಸ್.ಎಲ್.ಸಿ, ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಹಾಗೂ ಲ್ಯಾಟರಲ್...

ಸಂಪಾಜೆ- ಮಡಿಕೇರಿ ರಸ್ತೆಯಲ್ಲಿ ರಾತ್ರಿ ವಾಹನಗಳ ಸಂಚಾರಕ್ಕೆ ನಿರ್ಬಂಧ

0
ಮ೦ಗಳೂರು:ಸಂಪಾಜೆ- ಮಡಿಕೇರಿ ರಸ್ತೆಯಲ್ಲಿ ಭೂಕುಸಿತ/ಗುಡ್ಡ ಕುಸಿತ ಉಂಟಾಗುವ ಸಂಭವದ ಹಿನ್ನಲೆಯಲ್ಲಿ ವಾಹನಗಳ ಸಂಚಾರನಿರ್ಬಂಧಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ - 275ರಲ್ಲಿ, ಸಂಪಾಜೆಯಿಂದ ಮಡಿಕೇರಿ ವರೆಗಿನ ಕೆಲಪ್ರದೇಶಗಳಲ್ಲಿ ಭೂಕುಸಿತ/ಗುಡ್ಡಕುಸಿತ ಉಂಟಾಗುವ ಸಂಭವವಿರುವುದರಿಂದ, ಮುಂಜಾಗ್ರತಾ ಕ್ರಮವಾಗಿ ಸದ್ರಿ ಮಾರ್ಗವಾಗಿ ಸಾಗುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು (ತುರ್ತು ಸೇವೆಗಳ ಮತ್ತು ಪ್ರಕೃತಿ ವಿಕೋಪ ಸಂಬಂಧಿತ ಕಾರ್ಯದ ನಿಮಿತ್ತ ಕಾರ್ಯನಿರ್ವಹಿಸುವ ಅಧಿಕಾರಿ...